ಇಂದು ಜಿಲ್ಲಾ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಗತಿ ಪರಿಶೀಲನಾ ಸಭೆ

H.Mallikarjun
H.Mallikarjun - Kalyanasiri
1 Min Read
ಜಾಹೀರಾತು
District Guarantee Scheme Implementation Progress Review Meeting Today




ಇಂದು ಜಿಲ್ಲಾ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಗತಿ ಪರಿಶೀಲನಾ ಸಭೆ

ಜಾಹೀರಾತು


ಕೊಪ್ಪಳ ಏಪ್ರಿಲ್ 29 (ಕರ್ನಾಟಕ ವಾರ್ತೆ): ರಾಜ್ಯ ಸರ್ಕಾರದ 5 ಗ್ಯಾರಂಟಿ ಯೋಜನೆಗಳ ಅನುಷ್ಠಾನದ ಕುರಿತು ಜಿಲ್ಲಾ ಮಟ್ಟದ ಪ್ರಗತಿ ಪರಿಶೀಲನಾ ಸಭೆಯನ್ನು ಏಪ್ರಿಲ್ 30 ರಂದು ಬೆಳಿಗ್ಗೆ 11 ಗಂಟೆಗೆ ಕೊಪ್ಪಳ ಜಿಲ್ಲಾ ಪಂಚಾಯತ್ ಜೆ.ಹೆಚ್.ಪಟೇಲ್ ಸಭಾಂಗಣದಲ್ಲಿ ಆಯೋಜಿಸಲಾಗಿದೆ.
ಜಿಲ್ಲಾ ಮಟ್ಟದ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರದ ಅಧ್ಯಕ್ಷರಾದ ರೆಡ್ಡಿ ಶ್ರೀನಿವಾಸ ಅವರು ಸಭೆಯ ಅಧ್ಯಕ್ಷತೆ ವಹಿಸುವರು. ಸಂಬಂಧಪಟ್ಟ ಇಲಾಖೆಗಳ ಅಧಿಕಾರಿಗಳು ಅಗತ್ಯ ಮಾಹಿತಿಯೊಂದಿಗೆ ಕಡ್ಡಾಯವಾಗಿ ಸಭೆಗೆ ಹಾಜರಾಗಬೇಕು. ಸಮಿತಿಯ ಉಪಾಧ್ಯಕ್ಷರು, ಸದಸ್ಯರು ಸಭೆಯಲ್ಲಿ ಪಾಲ್ಗೊಳ್ಳುವಂತೆ ಕೊಪ್ಪಳ ಜಿ.ಪಂ. ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಗಳಾದ ವರ್ಣಿತ್ ನೇಗಿ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Total Views: 0
Share This Article