ಸಾರ್ವಜನಿಕರಿಗೆ ಕುಡಿಯುವ ನೀರಿನ ಸಮಸ್ಯೆ ಆಗದಂತೆ ಕ್ರಮವಹಿಸಿ: ಟಿ.ಕೃಷ್ಣಮೂರ್ತಿ

H.Mallikarjun
H.Mallikarjun - Kalyanasiri
2 Min Read
ಜಾಹೀರಾತು

Take steps to prevent drinking water problems for the public: T. Krishnamurthy

ಸಾರ್ವಜನಿಕರಿಗೆ ಕುಡಿಯುವ ನೀರಿನ ಸಮಸ್ಯೆ ಆಗದಂತೆ ಕ್ರಮವಹಿಸಿ: ಟಿ.ಕೃಷ್ಣಮೂರ್ತಿ

ಜಾಹೀರಾತು


ಕೊಪ್ಪಳ ಏಪ್ರಿಲ್ 29 (ಕರ್ನಾಟಕ ವಾರ್ತೆ): ಬೇಸಿಗೆ ಪ್ರಾರಂಭವಾಗಿರುವದರಿಂದ ಗ್ರಾಮೀಣ ಭಾಗ ಮತ್ತು ನಗರ ಪ್ರದೇಶಗಳಲ್ಲಿ ಕುಡಿಯುವ ನೀರು ಸಮಸ್ಯೆ ಆಗದಂತೆ ಮುಂಜಾಗ್ರತ ಕ್ರಮವಹಿಸಬೇಕೆಂದು ಕೊಪ್ಪಳ ತಾಲೂಕ ನೋಡಲ್ ಅಧಿಕಾರಿಗಳು ಹಾಗೂ ಜಿಲ್ಲಾ ಪಂಚಾಯತಿ ಉಪಕಾರ್ಯದರ್ಶಿಗಳಾದ ಟಿ.ಕೃಷ್ಣಮೂರ್ತಿ ಸೂಚಿಸಿದರು.
ಕೊಪ್ಪಳ ತಾಲೂಕ ಪಂಚಾಯತಿ ಕೊಪ್ಪಳ ಸಭಾಂಗಣದಲ್ಲಿ ಮಂಗಳವಾರ ಕುಡಿಯುವ ನೀರು ಕುರಿತು ಜರುಗಿದ ಕೊಪ್ಪಳ ತಾಲೂಕ ಮಟ್ಟದ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.
ಮುಂಬರುವ ದಿನಗಳಲ್ಲಿ 36 ಗ್ರಾಮಗಳನ್ನು ಕುಡಿಯುವ ನೀರಿನ ಸಮಸ್ಯಾತ್ಮಕ ಗ್ರಾಮಗಳೆಂದು ಗುರತಿಸಲಾಗಿದ್ದು, ಅವುಗಳ ಪೈಕಿ ಈಗಾಗಲೇ 12 ಗ್ರಾಮಗಳಲ್ಲಿ ಕುಡಿಯುವ ನೀರಿನ ಅಭಾವ ಉಂಟಾಗಿದ್ದರಿಂದ 12 ಖಾಸಗಿ ಬೋರ್ ವೆಲ್ ಗಳನ್ನು ಬಾಡಿಗೆ ರೂಪದಲ್ಲಿ ಪಡೆಯಲಾಗಿದೆ. ಮುಂದಿನ ದಿನಗಳಲ್ಲಿ ಸಮಸ್ಯಾತ್ಮಕ ಗ್ರಾಮಗಳಲ್ಲಿ ಕುಡಿಯುವ ನೀರಿನ ಸಮಸ್ಯೆ ಉಂಟಾಗದಂತೆ ಖಾಸಗಿ ಬೋರ್ ವೆಲ್‌ಗಳನ್ನು ಗುರುತಿಸಿ ಇಟ್ಟುಕೊಳ್ಳುವಂತೆ ಆಯಾ ಎಲ್ಲಾ ಪಂಚಾಯತಿ ಅಭಿವೃದ್ದಿ ಅಧಿಕಾರಿಗಳು ಹಾಗೂ ಶಾಖಾಧಿಕಾರಿಗಳು ಕ್ರಮ ಕೈಗೊಳ್ಳಬೇಕು ಎಂದರು.
ತಾಲೂಕಿನ ವ್ಯಾಪ್ತಿಯಲ್ಲಿ ಸಾರ್ವಜನಿಕರಿಂದ ಕುಡಿಯುವ ನೀರಿನ ಕುಂದು ಕೊರತೆಗಳನ್ನು ಸ್ವೀಕರಿಸಿ ಬಗೆಹರಿಸಲು ತಾಲೂಕ ಪಂಚಾಯತಿಯ ಸಹಾಯವಾಣಿ ಸಂ.9620410509, 9902315311 ಹಾಗೂ ತಹಶೀಲ್ದಾರರ ಕಾರ್ಯಾಲಯ ಸಹಾಯವಾಣಿ ಸಂ.7483942249 ಸ್ಥಾಪಿಸಲಾಗಿದ್ದು ಇವುಗಳ ಬಗ್ಗೆ ಗ್ರಾಮ ಮತ್ತು ನಗರ ಪ್ರದೇಶದಲ್ಲಿ ಮಾಹಿತಿ ತಲುಪಿಸಲು ಕ್ರಮವಹಿಸುವಂತೆ ಸೂಚಿಸಿದರು.
ಬೇಸಿಗೆ ತಾಪಮಾನ ಹೆಚ್ಚಾಗಿರುವದರಿಂದ ಗ್ರಾಮೀಣ ಹಾಗು ನಗರ ಪ್ರದೇಶದಲ್ಲಿ ಕುಡಿಯುವ ನೀರಿನ ಸಮಸ್ಯೆ ಉಂಟಾದಲ್ಲಿ ಸಂಬಂಧಿಸಿದ ಅಧಿಕಾರಿಗಳು ತಕ್ಷಣವೇ ಸ್ಪಂದಿಸಿ ಸಮಸ್ಯೆಯನ್ನು ಬಗೆಹರಿಸಬೇಕು. ನೀರಿನ ಮೂಲಗಳನ್ನು ಪರೀಕ್ಷಿಸುವದು ಮತ್ತು ನೀರಿನ ಸಂಗ್ರಹಾರಗಳನ್ನು ಕಾಲ ಕಾಲಕ್ಕೆ ಸ್ವಚ್ಛಗೊಳಿಸುವದು ಅಗತ್ಯ ಜಿಪಿಎಸ್ ಪೋಟೊ ದಾಖಲಾತಿ ನಿರ್ವಹಿಸತಕ್ಕದ್ದು ಮತ್ತು ಗ್ರಾಮದಲ್ಲಿರುವ ಜಾನುವಾರು ತೊಟ್ಟಿಗಳನ್ನು ಸ್ವಚ್ಛಗೊಳಿಸಿ ಅವುಗಳಿಗೆ ಕುಡಿಯುವ ನೀರು ಭರ್ತಿ ಮಾಡಿದಲ್ಲಿ ಜಾನುವಾರುಗಳಿಗೆ ಅನುಕೂಲವಾಗುತ್ತದೆ ಎಂದರು.
ಯಾವುದೇ ರೀತಿಯಾಗಿ ಪೈಪ್‌ಲೈನ್ ಒಡೆದು ಕಲುಷಿತ ನೀರು ಸರಬರಾಜು ಆಗದಂತೆ ಕೂಡಲೇ ನಗರಸಭೆ, ಪಟ್ಟಣ ಪಂಚಾಯತಿ  ಅಧಿಕಾರಿಗಳು ಹಾಗೂ ಪಂಚಾಯತಿ ಅಭಿವೃದ್ಧಿ ಅಧಿಕಾರಿಗಳು ಎಚ್ಛರವಹಿಸಬೇಕು. ಗ್ರಾಮ ಪಂಚಾಯತಿ ಹಂತದಲ್ಲಿ ಟಾಸ್ಕಪೋರ್ಸ ಸಭೆ ಜರುಗಿಸಲು ಇದೇ ಸಂದರ್ಭದಲ್ಲಿ ಪಂಚಾಯತ ಅಭಿವೃದ್ದಿ ಅಧಿಕಾರಿಗಳಿಗೆ ಸೂಚಿಸಿದರು.
ಸಭೆಯಲ್ಲಿ ತಾಲೂಕ ಪಂಚಾಯತ ಕಾರ್ಯನಿರ್ವಾಹಕ ಅಧಿಕಾರಿ ದುಂಡಪ್ಪ ತುರಾದಿ, ನಗರಸಭೆಯ ಪೌರಾಯುಕ್ತ ಮಂಜುನಾಥ ಗುಂಡೂರು, ತಹಶೀಲ್ದಾರ ಬಸವರಾಜ ತೆನ್ನಳ್ಳಿ, ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ವಿಭಾಗದ ಸಹಾಯಕ ಕಾರ್ಯಪಾಲಕ ಅಭಿಯಂತರ ಹೊನ್ನಪ್ಪ, ಪಂಚಾಯತ್ ರಾಜ್ ಸಹಾಯಕ ನಿರ್ದೇಶಕ ಮಹೇಶ್ ಎಚ್., ತಾಲೂಕ ಮಟ್ಟದ ಅಧಿಕಾರಿಗಳು, ಎಲ್ಲಾ ಗ್ರಾಮ ಪಂಚಾಯತಿ ಆಡಳಿತಾಧಿಕಾರಿಗಳು, ಪಂಚಾಯತ ಅಭಿವೃದ್ದಿ ಅಧಿಕಾರಿಗಳು, ಗ್ರಾಮೀಣ ಕುಡಿಯುವ ಮತ್ತು ನೈರ್ಮಲ್ಯ ಇಲಾಖೆಯ ಶಾಖಾಧಿಕಾರಿಗಳು, ತಾಲೂಕ ಪಂಚಾಯತಿ ಸಿಬ್ಬಂದಿಗಳು ಸಭೆಯಲ್ಲಿ ಉಪಸ್ಥಿತರಿದ್ದರು.

Total Views: 0
Share This Article