ರಾಜ್ಯ ಸರ್ಕಾರಿ ನೌಕರರ ದಿನಾಚರಣೆ ಹಾಗೂ ಜಿಲ್ಲಾ ಮಟ್ಟದ ಸರ್ವೋತ್ತಮ ಸೇವಾ ಪ್ರಶಸ್ತಿ ಪ್ರದಾನ ಸಮಾರಂಭ

H.Mallikarjun
H.Mallikarjun - Kalyanasiri
3 Min Read
ಜಾಹೀರಾತು

State Government Employees' Day and District Level Best Service Award Ceremony




ರಾಜ್ಯ ಸರ್ಕಾರಿ ನೌಕರರ ದಿನಾಚರಣೆ ಹಾಗೂ ಜಿಲ್ಲಾ ಮಟ್ಟದ ಸರ್ವೋತ್ತಮ ಸೇವಾ ಪ್ರಶಸ್ತಿ ಪ್ರದಾನ ಸಮಾರಂಭ

ಜಾಹೀರಾತು


ಸರ್ಕಾರಿ ನೌಕರರು ಆಡಳಿತದ ಬೆನ್ನೆಲುಬು: ರೆಡ್ಡಿ ಶ್ರೀನಿವಾಸ

ಕೊಪ್ಪಳ ಏಪ್ರಿಲ್ 30 (ಕರ್ನಾಟಕ ವಾರ್ತೆ): ದೇಶಕ್ಕೆ ರೈತರೇ ಬೆನ್ನೆಲುಬು ಎನ್ನುವಂತೆ, ಆಡಳಿತಕ್ಕೆ ಸರ್ಕಾರಿ ನೌಕರರೇ ಬೆನ್ನೆಲುಬು. ಸರ್ಕಾರದ ಸೇವೆಯನ್ನು ನೇರವಾಗಿ ಸಾರ್ವಜನಿಕರಿಗೆ ತಲುಪಿಸುವ ಮಹತ್ವದ ಕಾರ್ಯವನ್ನು ಸರ್ಕಾರಿ ನೌಕರರು ಮಾಡುತ್ತಾರೆ ಎಂದು ಜಿಲ್ಲಾ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರದ ಅಧ್ಯಕ್ಷ ರೆಡ್ಡಿ ಶ್ರೀನಿವಾಸ ಅವರು ಹೇಳಿದರು.
ಗುರುವಾರದಂದು ಜಿಲ್ಲಾಡಳಿತ ಭವನದ ಆಡಿಟೋರಿಯಂ ಸಭಾಂಗಣದಲ್ಲಿ ಜಿಲ್ಲಾಡಳಿತ ಹಾಗೂ ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘ, ಜಿಲ್ಲಾ ಶಾಖೆ ಕೊಪ್ಪಳ ಇವರ ಸಹಯೋಗದಲ್ಲಿ ಆಯೋಜಿಸಲಾಗಿದ್ದ ರಾಜ್ಯ ಸರ್ಕಾರಿ ನೌಕರರ ದಿನಾಚರಣೆ ಹಾಗೂ ಜಿಲ್ಲಾ ಮಟ್ಟದ ಸರ್ವೋತ್ತಮ ಸೇವಾ ಪ್ರಶಸ್ತಿ ಪ್ರದಾನ ಸಮಾರಂಭ ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡಿದರು.
ಸರ್ಕಾರದ ಸೇವೆಗಳು, ಸೌಲಭ್ಯಗಳನ್ನು ಅರ್ಹರಿಗೆ ತಲುಪಿಸುವುದು ಪುಣ್ಯದ ಕೆಲಸ, ಅದನ್ನು ಸರ್ಕಾರಿ ನೌಕರರು ಸೇವಾ ಮನೋಭಾವನೆಯಿಂದ ಸಾರ್ವಜನಿಕರಿಗೆ ತಲುಪಿಸುತ್ತಾರೆ. ಪ್ರಸ್ತುತ ವಿಷಯ ಹೇಳಬೇಕೆಂದರೆ ಸರ್ಕಾರದ ಮಹಾತ್ವಾಕಾಂಕ್ಷಿಯ ಪಂಚ ಗ್ಯಾರಂಟಿ ಯೋಜನೆಗಳನ್ನು ಜನರಿಗೆ ತಲುಪಿಸುವಲ್ಲಿ ಪ್ರಮುಖ ಪಾತ್ರ ವಹಿಸಿದ್ದಾರೆ. ನಮ್ಮ ಜಿಲ್ಲೆಯಲ್ಲಿ 3.20 ಲಕ್ಷ ಫಲಾನುಭವಿಗಳಿಗೆ ಗೃಹಲಕ್ಷಿö್ಮÃ ಯೋಜನೆಯ ಸೌಲಭ್ಯ ಒದಗಿಸಿದ್ದಾರೆ. ಸರ್ಕಾರಿ ನೌಕರರು ಸರ್ಕಾರದ ಬೆನ್ನೆಲುಬಾಗಿ ಕರ್ತವ್ಯ ನಿರ್ವಹಿಸುತ್ತಾರೆ ಎಂದು ಹೇಳಿದರು.
ಜಿಲ್ಲಾಧಿಕಾರಿ ಡಾ.ಸುರೇಶ ಬಿ.ಇಟ್ನಾಳ ಅವರು ಮಾತನಾಡಿ, ಸರ್ಕಾರಿ ನೌಕರರು ಕಾರ್ಯಾಂಗದ ಬಹು ಮುಖ್ಯ ಅಂಗ. ಸರ್ಕಾರ ಮತ್ತು ಸಾರ್ವಜನಿಕರ ನಡುವಿನ ಸಂಪರ್ಕ ಕೊಂಡಿಯಾಗಿ ನಾವೆಲ್ಲರೂ ಕಾರ್ಯನಿರ್ವಹಿಸುತ್ತೇವೆ. ನಾವು ಮಾಡುವ ಕೆಲಸ ಸರ್ಕಾರದ ಹೆಸರಾಗಿ ಮಾರ್ಪಡುತ್ತದೆ. ಅಂದರೆ ನಾವು ಉತ್ತಮ ರೀತಿಯಲ್ಲಿ ಕರ್ತವ್ಯ ನಿರ್ವಹಿಸಿದರೆ ಸರ್ಕಾರ ಒಳ್ಳೆಯ ಕೆಲಸ ಮಾಡುತ್ತದೆ ಎಂದು ಜನ ಮಾತಾನಾಡಿಕೊಳ್ಳುತ್ತಾರೆ. ಸರ್ಕಾರದ ಮುಖವಾಗಿ ನಾವಿರುತ್ತೇವೆ. ಸರ್ಕಾರದ ಮೂಲಭೂತ ಸೌಕರ್ಯಗಳನ್ನು ಜನರಿಗೆ ತಲುಪಿಸುವುದು ನಮ್ಮ ಕರ್ತವ್ಯ. ಮೇಲಧಿಕಾರಿಗಳು ಆದೇಶ ಹೊರಡಿಸುತ್ತಾರೆ, ಅದನ್ನು ಕಾರ್ಯರೂಪಕ್ಕೆ ತರುವುದು  ನಮ್ಮೆಲ್ಲರ ಜವಾಬ್ದಾರಿ. ಹಲವಾರು ಒತ್ತಡಗಳ ನಡುವೆ ಕಾರ್ಯನಿರ್ವಹಿಸುವ ಸರ್ಕಾರಿ ನೌಕರರು ತಮ್ಮಲ್ಲಿ ಬರುವ ಸಾರ್ವಜನಿಕರೊಂದಿಗೆ ಸೌಜನ್ಯದಿಂದ, ಅಂತಃಕರಣದಿAದ ವರ್ತಿಸಬೇಕು. ಒತ್ತಡ ನಿರ್ವಹಣೆಗೆ ಉತ್ತಮ ಹವ್ಯಾಸಗಳನ್ನು ರೂಢಿಸಿಕೊಳ್ಳಬೇಕು. ಆರೋಗ್ಯ ರಕ್ಷಣೆಗೆ ಒತ್ತು ನೀಡಬೇಕು. ವೈಯಕ್ತಿಕ ಕೆಲಸ, ಕುಟುಂಬಕ್ಕೂ ಆದ್ಯತೆ ನೀಡಬೇಕು ಎಂದು ಹೇಳಿದರು.
ಜಿಲ್ಲಾ ಪಂಚಾಯತಿಯ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ವರ್ಣಿತ್ ನೇಗಿ ಅವರು ಮಾತನಾಡಿ, ಸರ್ಕಾರಿ ನೌಕರರಿಗೆ ಒಂದು ದಿನವನ್ನಾಗಿ ಮಾಡಿ, ಅವರು ಮಾಡಿದ ಸೇವೆಗೆ ಗೌರವ ಸಲ್ಲಿಸುವುದು ವಿಶೇಷ ಸಂಗತಿ. ಬೇರೆ ರಾಜ್ಯಗಳಲ್ಲಿ ಈ ಕಾರ್ಯಕ್ರಮವಿಲ್ಲ. ನೌಕಕರಿಗೆ ಒತ್ತಡವಿರುವುದು ಸಾಮಾನ್ಯ. ಅದರಲ್ಲೂ ನೌಕರರು ಧನಾತ್ಮಕವಾಗಿ ಯೋಚಿಸಬೇಕು. ನಮ್ಮ ಸೇವೆಯೇ ನಮ್ಮನ್ನು ಗುರುತಿಸುವಂತಾಗಬೇಕು. ಸೇವಾ ಭಾವನೆಯಿಂದ ಕರ್ತವ್ಯ ನಿರ್ವಹಿಸಬೇಕು ಎಂದು ಹೇಳಿದರು.
ರಾಜ್ಯ ಸರ್ಕಾರಿ ನೌಕರರ ಸಂಘದ ಹಿರಿಯ ಉಪಾಧ್ಯಕ್ಷರು ಹಾಗೂ ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘದ ಜಿಲ್ಲಾ ಅಧ್ಯಕ್ಷರಾದ ನಾಗರಾಜ ಆರ್.ಜುಮ್ಮನ್ನವರ ಅವರು ಪ್ರಾಸ್ತಾವಿಕವಾಗಿ ಮಾತನಾಡಿ, ಸರ್ಕಾರಿ ನೌಕರರ ದಿನವನ್ನು ಸರ್ಕಾರಿ ಕಾರ್ಯಕ್ರಮವಾಗಿ ಆಚರಿಸುತ್ತಿರುವುದು ನಮ್ಮೆಲ್ಲರಿಗೂ ಹೆಮ್ಮೆಯ ಸಂಗತಿ. ನಮ್ಮ ಜಿಲ್ಲೆಯಲ್ಲಿ ಬದ್ಧತೆಯುಳ್ಳ ನೌಕರರಿದ್ದು, ಸರ್ಕಾರದ ಎಲ್ಲ ಕಾರ್ಯಕ್ರಮ, ಯೋಜನೆಗಳನ್ನು ಜಾರಿಗೆ ತರುವಲ್ಲಿ ಬಹುತೇಕ ಮೊದಲ 5 ರಲ್ಲಿ ಒಂದು ಸ್ಥಾನದಲ್ಲಿ ನಮ್ಮ ಜಿಲ್ಲೆಯ ಹೆಸರು ಇರುತ್ತದೆ. ಇದು ನಮ್ಮ ಜಿಲ್ಲೆಯ ನೌಕರರ ಕಾರ್ಯಕ್ಷಮತೆಯನ್ನು ಸೂಚಿಸುತ್ತದೆ. ಅದರಂತೆ ಸರ್ಕಾರದಿಂದ ನೌಕರರಿಗೆ ದೊರೆಯಬೇಕಾದ ಎಲ್ಲ ಸೌಕರ್ಯಗಳನ್ನು ಒದಗಿಸುವಲ್ಲಿ ಸರ್ಕಾರಿ ನೌಕರರ ಸಂಘ ಯಾವಾಗಲೂ ಮುಂದಿರುತ್ತದೆ. ಉದಾಹರಣೆಗೆ ಮಹಿಳಾ ನೌಕರರಿಗೆ ಶಿಶುಪಾಲನಾ ರಜೆ, ಮಾಸಿಕ ಒಂದರAತೆ ಋತುಚಕ್ರ ರಜೆಯನ್ನು ಒದಗಿಸುವಲ್ಲಿ ನಮ್ಮ ಸಂಘದ ಪಾತ್ರ ಪ್ರಮುಖವಾಗಿದೆ. ಆದ್ದರಿಂದ ಎಲ್ಲರೂ ಪರಸ್ಪರ ಸಹಕಾರದಿಂದ, ಸಮನ್ವಯತೆಯಿಂದ ಹಾಗೂ ಸೇವಾ ಭಾವನೆಯಿಂದ ಕಾರ್ಯನಿರ್ವಹಿಸೋಣ ಎಂದು ಹೇಳಿದರು.
ಕಾರ್ಯಕ್ರಮದಲ್ಲಿ ಸಾರ್ವಜನಿಕರಿಗೆ ಸರ್ಕಾರಿ ಸೌಲಭ್ಯ ಒದಗಿಸುವಲ್ಲಿ ಅತ್ಯುತ್ತಮ ಸೇವೆ ಸಲ್ಲಿಸಿದ ನೌಕರರಿಗೆ ಜಿಲ್ಲಾ ಮಟ್ಟದ ಸರ್ವೋತ್ತಮ ಸೇವಾ ಪ್ರಶಸ್ತಿಯನ್ನು ನೀಡಿ ಗೌರವಿಸಲಾಯಿತು.
ಕಾರ್ಯಕ್ರಮದಲ್ಲಿ ಅಪರ ಜಿಲ್ಲಾಧಿಕಾರಿ ಸಿದ್ರಾಮೇಶ್ವರ, ಜಿಲ್ಲಾ ಪಂಚಾಯತಿಯ ಉಪಕಾರ್ಯದರ್ಶಿ ಕೃಷ್ಣಮೂರ್ತಿ ಟಿ., ಉಪವಿಭಾಗಾಧಿಕಾರಿ ಕ್ಯಾ.ಮಹೇಶ ಮಾಲಗಿತ್ತಿ, ಜಂಟಿ ತೋಟಗಾರಿಕೆ ನಿರ್ದೇಶಕ ಕೃಷ್ಣ ಉಕ್ಕುಂದ, ಅಬಕಾರಿ ಉಪ ಅಧೀಕ್ಷಕ ಆಂಜಿನೇಯ, ಜಿಲ್ಲಾ ವಾರ್ತಾಧಿಕಾರಿ ಗವಿಸಿದ್ದಪ್ಪ ಹೊಸಮನಿ, ಸರ್ಕಾರಿ ನೌಕರರ ಸಂಘದ ಜಿಲ್ಲಾ ಶಾಖೆಯ ಕಾರ್ಯಾಧ್ಯಕ್ಷ ಬೀರಪ್ಪ ಅಂಡಗಿ, ಜಿಲ್ಲಾ ಕಾರ್ಯದರ್ಶಿ ಶಿವಪ್ಪ ಜೋಗಿ, ಖಜಾಂಚಿ ಜಯತೀರ್ಥ ದೇಸಾಯಿ, ರಾಜ್ಯ ಪರಿಷತ್ ಸದಸ್ಯ ಮೆಹಮೂದ್ ಆಸೀಫ್‌ಅಲಿ, ಗೌರವ ಅಧ್ಯಕ್ಷ ಸಿದ್ದಪ್ಪ ಮೇಳಿ, ಸೇರಿದಂತೆ ರಾಜ್ಯ ಸಂಘದ ಪದಾಧಿಕಾರಿಗಳು, ಜಿಲ್ಲಾ ಹಿರಿಯ ಉಪಾಧ್ಯಕ್ಷರು, ತಾಲ್ಲೂಕು/ಯೋಜನಾ ಘಟಕದ ಅಧ್ಯಕ್ಷರು, ವಿವಿಧ ಇಲಾಖೆಗಳ ಜಿಲ್ಲಾ ಹಾಗೂ ತಾಲ್ಲೂಕು ಮಟ್ಟದ ಅಧಿಕಾರಿಗಳು, ಸಿಬ್ಬಂದಿ ಉಪಸ್ಥಿತರಿದ್ದರು.

Total Views: 0
Share This Article