
Bank loan assistance for handloom weavers under Mudra scheme: Applications invited
ಮುದ್ರಾ ಯೋಜನೆಯಡಿ ಕೈಮಗ್ಗ ನೇಕಾರರಿಗೆ ಬ್ಯಾಂಕ್‌ನಿಂದ ಸಾಲದ ನೆರವು: ಅರ್ಜಿ ಆಹ್ವಾನ

ಕೊಪ್ಪಳ ಮೇ 05 (ಕರ್ನಾಟಕ ವಾರ್ತೆ): ಕೈಮಗ್ಗ ಮತ್ತು ಜವಳಿ ಇಲಾಖೆ ವತಿಯಿಂದ 2026-27ನೇ ಸಾಲಿನ ಮುದ್ರಾ ಯೋಜನೆಯಡಿ ಕೊಪ್ಪಳ ಜಿಲ್ಲೆಯ ಕೈಮಗ್ಗ ನೇಕಾರರಿಗೆ ಬ್ಯಾಂಕ್‌ನಿಂದ ಸಾಲದ ನೆರವನ್ನು ಪಡೆದುಕೊಳ್ಳಲು ಅರ್ಜಿ ಆಹ್ವಾನಿಸಲಾಗಿದೆ.
2026-27ನೇ ಸಾಲಿನ ಮುದ್ರಾ ಯೋಜನೆಯಡಿ ಕೈಮಗ್ಗ ನೇಕಾರರಿಗೆ ಮಗ್ಗ ಖರೀದಿಸಲು ಅಥವಾ ದುಡಿಮೆ ಬಂಡವಾಳಕ್ಕಾಗಿ ರಾಷ್ಟ್ರೀಕೃತ ಬ್ಯಾಂಕ್‌ನಿಂದ ಸಾಲ ಪಡೆಯಲು ಕೊಪ್ಪಳ ಜಿಲ್ಲೆಗೆ 3 ಗುರಿ ನಿಗದಿಪಡಿಸಲಾಗಿದೆ. ಪ್ರತಿ ಫಲಾನುಭವಿಗೆ ರೂ. 50,000 ರಂತೆ 20% ಮಾರ್ಜಿನ್ ಮನಿ ಪಡೆಯಲು ಅವಕಾಶವಿರುತ್ತದೆ.
ಅರ್ಜಿ ಸಲ್ಲಿಸುವ ಮೇ 20 ಕೊನೆಯ ದಿನವಾಗಿದ್ದು, ಆಸಕ್ತರು ಯಾವುದೇ ಮಧ್ಯವರ್ತಿಗಳನ್ನು ಸಂಪರ್ಕಿಸದೆ ನೇರವಾಗಿ ಉಪ ನಿರ್ದೇಶಕರ ಕಛೇರಿ, ಕೈಮಗ್ಗ ಮತ್ತು ಜವಳಿ ಇಲಾಖೆ, ಅಶೋಕ ಸರ್ಕಲ್ ಹತ್ತಿರ ಕೊಪ್ಪಳ, ದೂರವಾಣಿ ಸಂಖ್ಯೆ:08539-295469 ಗೆ ಸಂಪರ್ಕಿಸಬಹುದು ಎಂದು ಕೊಪ್ಪಳ ಕೈಮಗ್ಗ ಮತ್ತು ಜವಳಿ ಇಲಾಖೆಯ ಉಪ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
