ಕಡಿಮೆ ಸಂಬಳಕ್ಕೆ ದುಡಿಯುತ್ತಿರುವ ಆಶಾ ಕಾರ್ಯಕರ್ತೆಯರ ಸಂಬಳ ವಿಳಂಬ ಖಂಡನೆ – ಮಾನ್ಯ ಅಭಿಯಾನ ನಿರ್ದೇಶಕರಿಗೆ ಮನವಿ.

H.Mallikarjun
H.Mallikarjun - Kalyanasiri
2 Min Read
ಜಾಹೀರಾತು
Condemning the delay in salaries of ASHA workers working for low salaries - Appeal to the Honorable Campaign Director.




ಕಡಿಮೆ ಸಂಬಳಕ್ಕೆ ದುಡಿಯುತ್ತಿರುವ ಆಶಾ ಕಾರ್ಯಕರ್ತೆಯರ ಸಂಬಳ ವಿಳಂಬ ಖಂಡನೆ – ಮಾನ್ಯ ಅಭಿಯಾನ ನಿರ್ದೇಶಕರಿಗೆ ಮನವಿ.

ಜಾಹೀರಾತು

ಕೊಪ್ಪಳ:ಕರ್ನಾಟಕ ರಾಜ್ಯ ಸಂಯುಕ್ತ ಆಶಾ ಕಾರ್ಯಕರ್ತೆಯರ ಸಂಘ ಕೊಪ್ಪಳ ಜಿಲ್ಲಾ ಸಮಿತಿಯಿಂದ ಮಾನ್ಯ ಅಭಿಯಾನ ನಿರ್ದೇಶಕರಿಗೆ, ಕೊಪ್ಪಳ ಜಿಲ್ಲಾ ಆರೋಗ್ಯ ಅಧಿಕಾರಿಗಳ ಮೂಲಕ ಮನವಿ ಸಲ್ಲಿಸಲಾಯಿತು.
ಆಶಾ ಕಾರ್ಯಕರ್ತೆಯರು ಎದುರಿಸುತ್ತಿರುವ ವಿವಿಧ ಸಮಸ್ಯೆಗಳು ಹಾಗೂ ಕೆಳಗಿನ ಪ್ರಮುಖ ಬೇಡಿಕೆಗಳನ್ನು ಉಲ್ಲೇಖಿಸಿ ತಕ್ಷಣ ಕ್ರಮ ಕೈಗೊಳ್ಳುವಂತೆ ಆಗ್ರಹಿಸಲಾಯಿತು:
ಆಶಾ ಕಾರ್ಯಕರ್ತೆಯರಿಗೆ ಬಾಕಿ ಇರುವ ಕೇಂದ್ರದ ಪ್ರೋತ್ಸಾಹಧನವನ್ನು 3-4 ತಿಂಗಳು ಹಾಗೂ ರಾಜ್ಯದ ಗೌರವಧನವನ್ನು 1-2 ತಿಂಗಳುಗಳಿಂದ ಪಾವತಿಸದಿರುವುದರಿಂದ ತಕ್ಷಣವೇ ಬಿಡುಗಡೆ ಮಾಡಬೇಕು ಎಂದು ಒತ್ತಾಯಿಸಲಾಯಿತು.
ದಿನಾಂಕ 21-04-2026ರಿಂದ 9 ವಿಧದ ಆಶಾ ಸೇವೆಗಳನ್ನು ಆಶಾ ನಿಧಿ ತಂತ್ರಾಂಶದಲ್ಲಿ ನಿಷ್ಕ್ರಿಯಗೊಳಿಸಿರುವುದರಿಂದ ತಿಂಗಳಿಗೆ ರೂ.500 ರಿಂದ 1000ರವರೆಗೆ ಪ್ರೋತ್ಸಾಹಧನ ಕಡಿಮೆಯಾಗುತ್ತಿದ್ದು, ಈ ಸೇವೆಗಳನ್ನು ತಕ್ಷಣ ಪುನರಾರಂಭ ಮಾಡಬೇಕು ಎಂದು ಆಗ್ರಹಿಸಲಾಯಿತು.
ಆಶಾ ಕಾರ್ಯಕರ್ತೆಯರಿಗೆ ಕೆಲಸದ ಪ್ರಮಾಣ ಹೆಚ್ಚಿದರೂ, ಅದಕ್ಕೆ ಅನುಗುಣವಾಗಿ ಪ್ರೋತ್ಸಾಹಧನ ಮತ್ತು ಗೌರವಧನ ಹೆಚ್ಚಳ ಮಾಡಬೇಕು ಹಾಗೂ ಸೇವಾ ನಿಯಮಾವಳಿಗಳನ್ನು ಸ್ಪಷ್ಟಪಡಿಸಬೇಕು ಎಂದು ಮನವಿ ಮಾಡಲಾಯಿತು.
ಆರೋಗ್ಯ ಸೇವೆಯಲ್ಲಿ ಪ್ರಮುಖ ಪಾತ್ರವಹಿಸುವ ಆಶಾ ಕಾರ್ಯಕರ್ತೆಯರಿಗೆ ಮೂಲಭೂತ ಸೌಲಭ್ಯಗಳು, ಭದ್ರತೆ ಮತ್ತು ಗೌರವ ಒದಗಿಸಬೇಕು ಎಂದು ಒತ್ತಾಯಿಸಲಾಯಿತು.
ಆಶಾ ಕಾರ್ಯಕರ್ತೆಯರಿಗೆ ನೀಡಲಾಗುತ್ತಿರುವ ಪ್ರೋತ್ಸಾಹಧನವನ್ನು ಕಡಿತಗೊಳಿಸದೆ ನಿಯಮಿತವಾಗಿ ಪಾವತಿಸಬೇಕು ಹಾಗೂ ಎಲ್ಲಾ ಬಾಕಿ ಹಣವನ್ನು ತಕ್ಷಣ ಬಿಡುಗಡೆ ಮಾಡಬೇಕು ಎಂದು ಆಗ್ರಹಿಸಲಾಯಿತು.
ಕಾರ್ಯಕರ್ತೆಯರ ಸೇವಾ ಅವಧಿಯನ್ನು ಪರಿಗಣಿಸಿ ಶಾಶ್ವತ ಉದ್ಯೋಗದ ಭದ್ರತೆ ಒದಗಿಸಬೇಕು ಮತ್ತು ಸಾಮಾಜಿಕ ಭದ್ರತಾ ಯೋಜನೆಗಳನ್ನು ಜಾರಿಗೊಳಿಸಬೇಕು ಎಂದು ಮನವಿ ಮಾಡಲಾಯಿತು.
ಜಿಲ್ಲಾ ಹಾಗೂ ರಾಜ್ಯ ಮಟ್ಟದಲ್ಲಿ ಆಶಾ ಕಾರ್ಯಕರ್ತೆಯರ ಸಮಸ್ಯೆಗಳಿಗೆ ತ್ವರಿತ ಪರಿಹಾರ ನೀಡಲು ಸಂಬಂಧಪಟ್ಟ ಅಧಿಕಾರಿಗಳು ಕ್ರಮ ಕೈಗೊಳ್ಳಬೇಕು ಎಂದು ಒತ್ತಾಯಿಸಲಾಯಿತು.
ಇದೇ ರೀತಿ, ಸರ್ಕಾರದ ವಿವಿಧ ಆರೋಗ್ಯ ಯೋಜನೆಗಳಲ್ಲಿ ಆಶಾ ಕಾರ್ಯಕರ್ತೆಯರ ಪಾತ್ರವನ್ನು ಪರಿಗಣಿಸಿ ಅವರಿಗೆ ಪ್ರೋತ್ಸಾಹಕ ಯೋಜನೆಗಳನ್ನು ಜಾರಿಗೊಳಿಸಬೇಕು ಹಾಗೂ ನ್ಯಾಯಯುತ ಸೌಲಭ್ಯಗಳನ್ನು ನೀಡಬೇಕು ಎಂದು ಮನವಿ ಸಲ್ಲಿಸಲಾಯಿತು.
ಈ ಸಂದರ್ಭದಲ್ಲಿ ಜಿಲ್ಲಾ ಅಧ್ಯಕ್ಷರಾದ ಶರಣು ಗಡ್ಡಿ, ಜಿಲ್ಲಾ ಕಾರ್ಯದರ್ಶಿಗಳಾದ ಕೌಶಲ್ಯ ದೊಡ್ಡಗೌಡರ್, ಗೌರವ ಅಧ್ಯಕ್ಷರಾದ ಶೋಭಾ ಹೂಗಾರ್ ಹಾಗೂ ಯಲಬುರ್ಗಾ ತಾಲೂಕು ಮುಖಂಡರಾದ ಅನ್ನಪೂರ್ಣ ಶಿವಮ್ಮ ಸೇರಿದಂತೆ ಸಂಘದ ಪದಾಧಿಕಾರಿಗಳು ಉಪಸ್ಥಿತರಿದ್ದರು.

Total Views: 0
Share This Article