ಕುಕನೂರು: ಮೇ 11ರಂದು ಜಿಲ್ಲಾ ಮಟ್ಟದ ರಾಷ್ಟ್ರೀಯ ಅಪ್ರೆಂಟಿಶಿಪ್ ಮೇಳ

H.Mallikarjun
H.Mallikarjun - Kalyanasiri
1 Min Read
ಜಾಹೀರಾತು
Kuknoor: District level National Apprenticeship Fair on May 11th

ಕುಕನೂರು: ಮೇ 11ರಂದು ಜಿಲ್ಲಾ ಮಟ್ಟದ ರಾಷ್ಟ್ರೀಯ ಅಪ್ರೆಂಟಿಶಿಪ್ ಮೇಳ

ಜಾಹೀರಾತು

ಕೊಪ್ಪಳ ಮೇ 08, (ಕರ್ನಾಟಕ ವಾರ್ತೆ): ಕೊಪ್ಪಳ ಜಿಲ್ಲಾ ಮಟ್ಟದ ರಾಷ್ಟ್ರೀಯ ಶಿಶಿಕ್ಷು (ಅಪ್ರೆಂಟಿಶಿಪ್) ಮೇಳವನ್ನು ಮೇ 11 ರಂದು ಬೆಳಿಗ್ಗೆ 10 ಗಂಟೆಗೆ ಕುಕನೂರಿನ ಗುದ್ನೆಪ್ಪನ ಮಠದಲ್ಲಿರುವ ಸರಕಾರಿ ಕೈಗಾರಿಕಾ ತರಬೇತಿ ಸಂಸ್ಥೆಯಲ್ಲಿ ಆಯೋಜಿಸಲಾಗಿದೆ.
ಈ ಮೇಳದಲ್ಲಿ ಬೆಂಗಳೂರಿನ ಪ್ರಮುಖ ಕಂಪನಿಗಳಾದ  Toyota Industries Engine India Pvt Ltd, Shindegen India Pvt.Ltd, Schneider Electric India Pvt .Ltd, AT India Auto parts Pvt Ltd, Toyoda Gosei South India Pvt Ltd, Auotliv India Pvt Ltd, Avirata Defence system Ltd, Samvardhan Motherson International Pvt Ltd  ಸೇರಿದಂತೆ ಹಲವು ಕಂಪನಿಗಳು ಭಾಗವಹಿಸಿ ಅಭ್ಯರ್ಥಿಗಳಿಗೆ ಸಂದರ್ಶನ ನಡೆಸಲಿವೆ.
ಎಸ್‌ಎಸ್‌ಎಲ್‌ಸಿ, ಪಿಯುಸಿ, ಬಿ.ಎ., ಬಿ.ಕಾಂ., ಬಿ.ಎಸ್‌ಸಿ ಹಾಗೂ ಐಟಿಐ ಎಲ್ಲಾ ವೃತ್ತಿಗಳಲ್ಲಿ ಉತ್ತೀರ್ಣರಾದವರು ಹಾಗೂ ಅಂತಿಮ ವರ್ಷದ ವಿದ್ಯಾರ್ಥಿಗಳು (ಮಹಿಳೆ ಮತ್ತು ಪುರುಷರು) ಈ ಮೇಳದಲ್ಲಿ ಭಾಗವಹಿಸಲು ಅರ್ಹರಿದ್ದು, ಅಭ್ಯರ್ಥಿಗಳ ವಯೋಮಿತಿ 18 ರಿಂದ 24 ವರ್ಷಗಳೊಳಗಿರಬೇಕು. ಲಿಖಿತ ಪರೀಕ್ಷೆ ಹಾಗೂ ಸಂದರ್ಶನದ ಮೂಲಕ ಆಯ್ಕೆ ಪ್ರಕ್ರಿಯೆ ನಡೆಯಲಿದೆ. ಆಯ್ಕೆಯಾದ ಅಭ್ಯರ್ಥಿಗಳಿಗೆ ತಿಂಗಳಿಗೆ ಸುಮಾರು ರೂ.18,500 ರಿಂದ ರೂ.21,000 ವರೆಗೆ ಸ್ಟೆöÊಫಂಡ್ ನೀಡಲಾಗುವುದು.
ಆಸಕ್ತ ಅಭ್ಯರ್ಥಿಗಳು ತಮ್ಮ ಮೂಲ ದಾಖಲೆಗಳು, ಅಂಕಪಟ್ಟಿಗಳ ಝೆರಾಕ್ಸ್ ಪ್ರತಿಗಳು, 2 ಪಾಸ್‌ಪೋರ್ಟ್ ಅಳತೆಯ ಫೋಟೋ ಹಾಗೂ ಬಯೋಡೇಟಾದೊಂದಿಗೆ ಸಂದರ್ಶನಕ್ಕೆ ಹಾಜರಾಗಬೇಕು. ಅಭ್ಯರ್ಥಿಗಳು ತಮ್ಮ ಸ್ವಂತ ಖರ್ಚಿನಲ್ಲಿ ಮೇಳಕ್ಕೆ ಆಗಮಿಸಬೇಕು.
ಹೆಚ್ಚಿನ ಮಾಹಿತಿಗಾಗಿ 9964247098, 9481718859, 8618952961 ಹಾಗೂ 8197245007 ಸಂಖ್ಯೆಗಳಿಗೆ ಸಂಪರ್ಕಿಸಬಹುದು ಎಂದು ಕುಕನೂರ ಸರಕಾರಿ ಕೈಗಾರಿಕಾ ತರಬೇತಿ ಸಂಸ್ಥೆಯ ಪ್ರಾಚಾರ್ಯರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Total Views: 0
Share This Article