ವ್ಯಕ್ತಿ ಕಾಣೆ: ಪತ್ತೆಗೆ ಸಹಕರಿಸಲು ಮನವಿ

H.Mallikarjun
H.Mallikarjun - Kalyanasiri
1 Min Read
ಜಾಹೀರಾತು
Missing person: Request for assistance in finding him/her

ವ್ಯಕ್ತಿ ಕಾಣೆ: ಪತ್ತೆಗೆ ಸಹಕರಿಸಲು ಮನವಿ

ಜಾಹೀರಾತು


ಕೊಪ್ಪಳ ಮೇ 11 (ಕರ್ನಾಟಕ ವಾರ್ತೆ): ಗಂಗಾವತಿ ತಾಲ್ಲೂಕಿನ ಹೆರೂರು ಗ್ರಾಮದ 5ನೇ ವಾರ್ಡಿನ ನಿವಾಸಿ ಹನುಮಂತ ಭೀಮಪ್ಪ ಮೈಲಾಪೂರ ಎಂಬ 48 ವರ್ಷದ ವ್ಯಕ್ತಿಯು 2025 ರ ಜುಲೈ 16 ರಂದು ಬೆಳಗಿನ ಜಾವ 4 ಗಂಟೆಗೆ ಮನೆಯಿಂದ ಹೊರಟವರು ಇದುವರೆಗೂ ಪತ್ತೆಯಾಗಿರುವುದಿಲ್ಲ. ಈ ಬಗ್ಗೆ ಗಂಗಾವತಿ ಗ್ರಾಮೀಣ ಪೊಲೀಸ್ ಠಾಣೆಯಲ್ಲಿ ಗುನ್ನೆ ನಂ.25/2026 ಕಲಂ ಮನುಷ್ಯ ಕಾಣೆ ಅಡಿ ಪ್ರಕರಣ ದಾಖಲಾಗಿದೆ.
ಕಾಣೆಯಾದ ವ್ಯಕ್ತಿಯ ಚಹರೆ ವಿವರ: ವ್ಯಕ್ತಿಯು 5.6 ಫೀಟ್ ಎತ್ತರವಿದ್ದು, ದುಂಡು ಮುಖ, ಕಪ್ಪು ಮೈಬಣ್ಣ, ಸಾಧಾರಣ ಮೈಕಟ್ಟು, ತಲೆಯಲ್ಲಿ ಕಪ್ಪು ಕೂದಲು ಇದ್ದು, ಬಲಗೈ ಮುಂಗೈಗೆ ಮೀನಾಕ್ಷಿ ಎಂದು ಹಚ್ಚೆ ಹಾಕಿಸಿಕೊಂಡಿದ್ದಾರೆ. ಕನ್ನಡ ಭಾಷೆಯನ್ನು ಮಾತನಾಡುತ್ತಾರೆ. ಈ ಚಹರೆಯ ವ್ಯಕ್ತಿಯ ಕುರಿತು ಯಾರಿಗಾದರೂ ಮಾಹಿತಿ ಇದ್ದಲ್ಲಿ ಅಥವಾ ದೊರೆತಲ್ಲಿ ಜಿಲ್ಲಾ ಪೊಲೀಸ್ ಅಧೀಕ್ಷಕರು:08539-230222, ಪೊಲೀಸ್ ಉಪಾಧೀಕ್ಷಕರು: 08533-230853, ಆರಕ್ಷಕ ನಿರೀಕ್ಷಕರು, ಗಂಗಾವತಿ ಗ್ರಾಮೀಣ ಠಾಣೆ: 08533-230854, 9480803730 ಗೆ ಸಂಪರ್ಕಿಸಿ ಮಾಹಿತಿ ನೀಡುವಂತೆ ಗಂಗಾವತಿ ಗ್ರಾಮೀಣ ಪೊಲೀಸ್ ಠಾಣೆ ಪ್ರಕಟಣೆ ತಿಳಿಸಿದೆ.

Total Views: 0
Share This Article