ನೀಟ್ ಅಕ್ರಮ; ಎನ್‌ಟಿಎ ರದ್ದತಿಗೆ ಎಐಡಿಎಸ್‌ಓ ಆಗ್ರಹ

H.Mallikarjun
H.Mallikarjun - Kalyanasiri
2 Min Read
ಜಾಹೀರಾತು

NEET is illegal; AIDSO demands cancellation of NTA




ನೀಟ್ ಅಕ್ರಮ; ಎನ್‌ಟಿಎ ರದ್ದತಿಗೆ ಎಐಡಿಎಸ್‌ಓ ಆಗ್ರಹ

ಜಾಹೀರಾತು

ಕೊಪ್ಪಳ ಬಸ್ ನಿಲ್ದಾಣದ ಕನಕದಾಸ ವೃತ್ತದಲ್ಲಿ ಎಐಡಿಎಸ್‌ಒ ನೇತೃತ್ವದಲ್ಲಿ ವಿದ್ಯಾರ್ಥಿಗಳ ಪ್ರತಿಭಟನೆ

ಕೊಪ್ಪಳ : ನೀಟ್ ಯುಜಿ ಪ್ರಶ್ನೆ ಪತ್ರಿಕೆ ಸೋರಿಕೆಯ ಹಿನ್ನೆಲೆಯಲ್ಲಿ ಪರೀಕ್ಷೆಯನ್ನು ರದ್ದುಗೊಳಿಸಲಾಗಿದ್ದು, ಈ ಕೂಡಲೇ ಪ್ರಶ್ನೆ ಪತ್ರಿಕೆ ಸೋರಿ-ಕೆಗೆ ಕಾರಣರಾದವರಿಗೆ ನಿದರ್ಶನೀಯ ಶಿಕ್ಷೆ ವಿಧಿಸಬೇಕು ಹಾಗೂ ಎನ್‌ಟಿಎ (ರಾಷ್ಟ್ರೀಯ ಪರೀಕ್ಷಾ ಸಂಸ್ಥೆ) ಯನ್ನು ರದ್ದುಗೊಳಿಸಬೇಕು ಎಂದು ಆಗ್ರಹಿಸಿ ಕೊಪ್ಪಳದ ಬಸ್ ನಿಲ್ದಾಣದ ಕನಕದಾಸ ವೃತ್ತದಲ್ಲಿ ಎಐಡಿಎಸ್‌ಒ ನೇತೃತ್ವದಲ್ಲಿ ವಿದ್ಯಾರ್ಥಿಗಳು ಪ್ರತಿಭಟನೆ ನಡೆಸಿದರು 

ಪ್ರತಿಭಟನೆಯನ್ನು ಉದ್ದೇಶಿಸಿ ಎಐಡಿಎಸ್‌ಒ ರಾಜ್ಯ ಮುಖಂಡರಾದ ತುಳಜರಾಮ್ ಎನ್. ಕೆ ಮಾತನಾಡಿ, “ಪದೇ ಪದೇ ಮರುಕಳಿಸುತ್ತಿರುವ ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆ ಕೇವಲ ಒಂದು ಪರೀಕ್ಷಾ ಸಂಸ್ಥೆಯ ವೈಫಲ್ಯವಲ್ಲ; ಇದು ಲಕ್ಷಾಂತರ ಪ್ರಾಮಾಣಿಕ ವಿದ್ಯಾರ್ಥಿಗಳ ಬೆವರು ಮತ್ತು ಕನಸುಗಳ ಮೇಲೆ ಎಸಗುತ್ತಿರುವ ಘೋರ ದೌರ್ಜನ್ಯವಾಗಿದೆ. ಕೇವಲ ಮೂರು ವರ್ಷಗಳಲ್ಲಿ ಎರಡನೇ ಬಾರಿಗೆ ವೈದ್ಯಕೀಯ ಶಿಕ್ಷಣದ ಕನಸು ಹೊತ್ತವರ ಆಶೋತ್ತರಗಳನ್ನು ಅತಿ ಹೆಚ್ಚು ಹಣ ನೀಡುವವರಿಗೆ ಹರಾಜು ಹಾಕಲಾಗಿದೆ. ರಾಷ್ಟ್ರೀಯ ಪರೀಕ್ಷಾ ಸಂಸ್ಥೆಯು (NTA) “ಕೋಚಿಂಗ್ ಮಾಫಿಯಾ”ದ ಕೈಗೊಂಬೆಯಂತೆ

ವರ್ತಿಸುತ್ತಿರುವುದು ಇಡೀ ವ್ಯವಸ್ಥೆಯ ಹದಗೆಟ್ಟ ಸ್ಥಿತಿಯನ್ನು ತೋರಿಸುತ್ತಿದೆ. ಈ ವ್ಯವಸ್ಥೆಯು `ವಿದ್ಯಾರ್ಥಿಗಳಲ್ಲಿ ತೀವ್ರ ಆತಂಕ ಮತ್ತು ಹತಾಶೆಯನ್ನು ಮೂಡಿಸಿದೆ. ಕೇವಲ ಲಾಭಕ್ಕಾಗಿ ಸಾರ್ವಜನಿಕ ಶಿಕ್ಷಣ ವ್ಯವಸ್ಥೆಯನ್ನು ವ್ಯವಸ್ಥಿತವಾಗಿ ನಾಶಪಡಿಸುತ್ತಿರುವುದು ಖಂಡನೀಯ” ಕೆಲವರ ಸಂಸ್ಥೆಯು (ಎನ್‌ಟಿಎ) ‘ಕೋಚಿಂಗ್ ಮಾಫಿಯಾ’ದ ಕೈಗೊಂಬೆಯಂತೆ ಎಂದರು. “ನಮ್ಮ ವಿದ್ಯಾರ್ಥಿಗಳ ಭವಿಷ್ಯದ ಅಡಿಪಾಯವನ್ನೇ ಭ್ರಷ್ಟಾಚಾರ ಮತ್ತು ಆಡಳಿತಾತ್ಮಕ ನಿರ್ಲಕ್ಷ್ಯ-ಕೈ ಬಲಿ ನೀಡಲಾಗುತ್ತಿದೆ. ಶಿಕ್ಷಣ ವ್ಯವಸ್ಥೆಯನ್ನು ಮಾರುಕಟ್ಟೆಯನ್ನಾಗಿ ಮಾಡಿಕೊಂಡಿರುವವರಿಂದ ಇಂತಹ ಸಮಸ್ಯೆಗಳು ಪದೇ ಪದೇ ಹಲವು ಕೇಂದ್ರೀಕೃತ ಪರೀಕ್ಷೆಗಳಲ್ಲಿ ಮರುಕಳಿಸುತ್ತಿವೆ ಎಂದು ಆಕ್ರೋಶ ವ್ಯಕ್ತಪಡಿಸಿದರು.

ಪಾರದರ್ಶಕವಾಗಿ ಮತ್ತು ಸುರಕ್ಷಿತವಾಗಿ ಪರೀಕ್ಷೆಗಳನ್ನು ನಡೆಸುವಲ್ಲಿ ಪದೇ ಪದೇ ವಿಫಲವಾಗಿ ದೇಶದ ನಂಬಿಕೆಯನ್ನು ಕಳೆದುಕೊಂಡಿರುವ ರಾಷ್ಟ್ರೀಯ ಪರೀಕ್ಷಾ ಸಂಸ್ಥೆಯನ್ನು ಸಂಪೂರ್ಣವಾಗಿ ರದ್ದುಗೊಳಿಸಬೇಕು. ಪ್ರಶ್ನೆ ಪತ್ರಿಕೆ ಸೋರಿಕೆ-ಯ ಹಿಂದೆ ಇರುವ ವ್ಯಕ್ತಿಗಳು ಮತ್ತು ಮಾಫಿಯಾ’ವನ್ನು ಪತ್ತೆಹಚ್ಚಲು ಉನ್ನತ ಮಟ್ಟದ ಸ್ವತಂತ್ರ ನ್ಯಾಯಾಂಗ ತನಿಖೆಯಾಗಬೇಕು ಹಾಗೂ ತಪ್ಪಿತಸ್ಥರಿಗೆ ನಿದರ್ಶನೀಯ ಶಿಕ್ಷೆಯಾಗಬೇಕು. ಪ್ರವೇಶ ಪರೀಕ್ಷಾ ಪದ್ಧತಿಯನ್ನು ಅಮೂಲಾಗ್ರವಾಗಿ ಬದಲಿಸಿ, ಅದು ಸಾಮಾನ್ಯರಿಗೂ ಲಭ್ಯವಿರುವಂತೆ, ಪಾರದರ್ಶಕವಾಗಿ ಮತ್ತು ಖಾಸಗಿ ವಾಣಿಜ್ಯ ಹಿತಾಸಕ್ತಿಗಳಿಂದ ಮುಕ್ತವಾಗಿರುವಂತೆ ನೋಡಿಕೊಳ್ಳಬೇಕು.ಅನ್ಯಾಯದ ವಿರುದ್ಧ ಹೋರಾಡಲು ಪ್ರತಿಯೊಬ್ಬ ವಿದ್ಯಾರ್ಥಿ ಮತ್ತು ಶಿಕ್ಷಣ ಪ್ರೇಮಿ ಸಮುದಾಯ ಮುಂದೆ ಬರಬೇಕು” ಎಂದು ಕರೆ ನೀಡಿದರು. ಪ್ರತಿಭಟನೆಯಲ್ಲಿ ಎಐಡಿಎಸ್‌ಓ ಜಿಲ್ಲಾ ಸಂಘಟನಾಕಾರರಾದ ಪ್ರದೀಪ್, ಶಾರದ, ಪೋಷಕರಾದ ಸಿದ್ದಲಿಂಗರೆಡ್ಡಿ, ಶರಣು ಗಡ್ಡಿ, ವಿದ್ಯಾರ್ಥಿಗಳಾದ ಅಭಿಷೇಕ್, ಪಲ್ಲವಿ,ಪ್ರತಿಭಾ, ಸ್ಫೂರ್ತಿ,ಸ್ನೇಹ ಸೇರಿದಂತೆ ನೂರಾರು ವಿದ್ಯಾರ್ಥಿಗಳು ಪಾಲ್ಗೊಂಡಿದ್ದರು.

Total Views: 0
Share This Article