ಶ್ರುತಿ ಸಿ. ಅವರಿಗೆ ಮೈಸೂರು ವಿ.ವಿ.ಯಿಂದ ಪಿಎಚ್.ಡಿ. ಪದವಿ

H.Mallikarjun
H.Mallikarjun - Kalyanasiri
1 Min Read
ಜಾಹೀರಾತು

Shruti C. has a Ph.D. degree from the University of Mysore

ಶ್ರುತಿ ಸಿ. ಅವರಿಗೆ ಮೈಸೂರು ವಿ.ವಿ.ಯಿಂದ ಪಿಎಚ್.ಡಿ. ಪದವಿ

ಜಾಹೀರಾತು


ಬೆಂಗಳೂರು,ಮೇ.28: ಬಾಗೇಪಲ್ಲಿ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ವಾಣಿಜ್ಯಶಾಸ್ತ್ರ ವಿಭಾಗದಲ್ಲಿ ಸಹಾಯಕ ಪ್ರಾಧ್ಯಾಪಕರಾಗಿ ಕಾರ್ಯನಿರ್ವಹಿಸುತ್ತಿರುವ ಹಾಗೂ ಮೈಸೂರು ವಿಶ್ವವಿದ್ಯಾಲಯದ ಸಂಶೋಧನಾ ವಿದ್ಯಾರ್ಥಿನಿಯಾಗಿರುವ ಶ್ರುತಿ ಸಿ. ಅವರಿಗೆ “ಸಂಘಟನಾತ್ಮಕ ಸಂಸ್ಕೃತಿ, ನೌಕರರ ಬದ್ಧತೆ ಮತ್ತು ಕಾರ್ಯಕ್ಷಮತೆ – ಉಡುಪಿ ಹಾಗೂ ದಕ್ಷಿಣ ಕನ್ನಡ ಜಿಲ್ಲೆಗಳ ಸಾರ್ವಜನಿಕ ವಲಯದ ಬ್ಯಾಂಕುಗಳು ಮತ್ತು ಖಾಸಗಿ ವಲಯದ ಬ್ಯಾಂಕುಗಳ ತುಲನಾತ್ಮಕ ಅಧ್ಯಯನ” ಕುರಿತ ಮಹಾ ಪ್ರಬಂಧಕ್ಕೆ ಮೈಸೂರು ವಿಶ್ವವಿದ್ಯಾಲಯ ಡಾಕ್ಟರೇಟ್ (ಪಿಎಚ್.ಡಿ.) ಪದವಿ ಪ್ರದಾನ ಮಾಡಿದೆ.
ಡಾ. ಎ. ಬಿ. ವಿಜಯಕುಮಾರ್ ಅವರ ಯಶಸ್ವಿ ಮಾರ್ಗದರ್ಶನದಲ್ಲಿ ಪಿಎಚ್.ಡಿ. ದೊರೆತಿದೆ. ಶ್ರುತಿ ಸಿ. ಅವರು ಶಿಕ್ಷಣ ಕ್ಷೇತ್ರದಲ್ಲಿ ನಿರಂತರ ಪರಿಶ್ರಮ, ಶಿಸ್ತು ಹಾಗೂ ಸಂಶೋಧನಾ ಮನೋಭಾವದ ಮೂಲಕ ಗಮನಾರ್ಹ ಸಾಧನೆ ಮಾಡಿದ್ದಾರೆ ಎಂದು ಪೋಷಕರಾದ ಚಂದ್ರಶೇಖರ್ ಹಾಗೂ ಸುಭದ್ರಾದಂಪತಿಗಳು ಹರ್ಷವನ್ನು ವ್ಯಕ್ತಪಡಿಸಿದ್ದಾರೆ .

Total Views: 0
Share This Article