ದಲಿತ ಸೇನೆಯ ರಾಜ್ಯಾಧ್ಯಕ್ಷರ ಹುಟ್ಟುಹಬ್ಬ ಪ್ರಯುಕ್ತನೂತನ ಕಾರ್ಯಾಲಯ ಹಾಗೂ ಕಲಿಕಾ ಸಾಮಗ್ರಿಗಳ ವಿತರಣೆ.

H.Mallikarjun
H.Mallikarjun - Kalyanasiri
1 Min Read
ಜಾಹೀರಾತು




Distribution of new office and learning materials on the occasion of the birthday of the state president of the Dalit Army.

ದಲಿತ ಸೇನೆಯ ರಾಜ್ಯಾಧ್ಯಕ್ಷರ ಹುಟ್ಟುಹಬ್ಬ ಪ್ರಯುಕ್ತ
ನೂತನ ಕಾರ್ಯಾಲಯ ಹಾಗೂ ಕಲಿಕಾ ಸಾಮಗ್ರಿಗಳ ವಿತರಣೆ.

ಜಾಹೀರಾತು

ಗಂಗಾವತಿ: ಕರ್ನಾಟಕ ದಲಿತ ಸೇನೆ ರಾಜ್ಯಾಧ್ಯಕ್ಷರಾದ ಹನುಮಂತ ಜಿ. ಯಲಸಂಗಿ ಅವರ ಹುಟ್ಟುಹಬ್ಬ ಜೂನ್-01 ರಂದು ಜರುಗಲಿದ್ದು, ಅದರ ಪ್ರಯುಕ್ತ ರವಿವಾರದಂದು ಕೊಪ್ಪಳ ಜಿಲ್ಲಾ ಘಟಕದ ನೂತನ ಕಾರ್ಯಾಲಯ ಉದ್ಘಾಟನೆ ಹಾಗೂ ಸರ್ಕಾರಿ ಶಾಲೆಯ ಬಡ ಮಕ್ಕಳಿಗೆ ಕಲಿಕಾ ಸಾಮಗ್ರಿಗಳ ವಿತರಣೆ ಕಾರ್ಯಕ್ರಮವನ್ನು ಶ್ರೀರಾಮನಗರದಲ್ಲಿ ಜಿಲ್ಲಾಧ್ಯಕ್ಷರಾದ ಉಡಚಪ್ಪ ನೇತೃತ್ವದಲ್ಲಿ ಜರುಗಿತು.
ಈ ಸಂದರ್ಭದಲ್ಲಿ ಜಿಲ್ಲಾಧ್ಯಕ್ಷ ಉಡುಚಪ್ಪ ಅವರು ಮಾತನಾಡಿ ಸಂವಿಧಾನ ಶಿಲ್ಪಿ ಡಾ. ಬಿ.ಆರ್ ಅಂಬೇಡ್ಕರ್ ಅವರ ಆಶಯದಂತೆ, ವ್ಯಕ್ತಿ ಸಮಾಜದಲ್ಲಿ ಉನ್ನತ ಸ್ಥಾನ ಪಡೆಯಲು ಶಿಕ್ಷಣ ಅತ್ಯಾವಶ್ಯಕವಾಗಿದ್ದು ಪ್ರತಿಯೊಬ್ಬರು ಶಿಕ್ಷಣವನ್ನು ಪಡೆದುಕೊಳ್ಳುವುದರ ಮೂಲಕ ಸಮಾಜಮುಖಿಯಾಗಿ ಉನ್ನತ ಸ್ಥಾನಕ್ಕೆ ಬರಬೇಕೆಂದು ಕರೆ ನೀಡಿದರು. ಅಜ್ಞಾನ ಅಂಧಕಾರ ಮೂಢನಂಬಿಕೆಗಳನ್ನು ಬದಿಗಿಟ್ಟು ಶಿಕ್ಷಣವನ್ನು ಪಡೆದುಕೊಳ್ಳುವುದರ ಮೂಲಕ ಸಂಸ್ಕಾರಯುತವಾಗಿ ಜೀವಿಸಬೇಕೆಂದು ತಿಳಿಸಿದರು.
ತಾಲೂಕ ಅಧ್ಯಕ್ಷ ಮಂಜುನಾಥ್ ಮಾತನಾಡಿ ಶತಶತಮಾನಗಳಿಂದ ಶೋಷಣೆಗೆ ಒಳಗಾದ ದಲಿತರು ಗುಣಮಟ್ಟದ ಶಿಕ್ಷಣವನ್ನು ಪಡೆದುಕೊಂಡು ಅಂಬೇಡ್ಕರ್ ಅವರ ಕನಸು ನನಸಾಗಿಸುವಲ್ಲಿ ಕಾರ್ಯಕರ್ತರು ಶ್ರಮಿಸಬೇಕು. ಶಿಕ್ಷಣದ ಬಗ್ಗೆ ಅಪಾರ ಅಭಿಮಾನ ಹೊಂದಿದ ರಾಜ್ಯಾಧ್ಯಕ್ಷರ ಸಲಹೆಯಂತೆ ಸರ್ಕಾರದಿಂದ ಪಡೆಯಬಹುದಾದ ಎಲ್ಲಾ ರೀತಿಯ ಸೌಲಭ್ಯಗಳನ್ನು ಕಲ್ಪಿಸುವಲ್ಲಿ ಕಾರ್ಯಕರ್ತರು ಕಾರ್ಯೋನ್ಮುಖರಾಗಬೇಕೆಂದು ಹೇಳಿದರು.
ಈ ಸಂದರ್ಭದಲ್ಲಿ ಶಿವಕುಮಾರ್, ಡಿ. ಪರಶುರಾಮ್, ಹೆಚ್. ಮಂಜುನಾಥ್, ಜಗದೀಶ್, ನರೇಶ್ ಸೇರಿದಂತೆ ಮತ್ತಿತರರು ಉಪಸ್ಥಿತರಿದ್ದರು.‌‌

Total Views: 0
Share This Article