
Request from activists demanding that Dinesh Gundu Rao be given the post of Deputy Chief Minister.

ದಿನೇಶ್ ಗುಂಡೂರಾವ್ ಅವರಿಗೆ ಉಪಮುಖ್ಯಮಂತ್ರಿ ಸ್ಥಾನ ನೀಡಲು: ಆಗ್ರಹಿಸಿ ಕಾರ್ಯಕರ್ತರಿಂದ ಮನವಿ .

ವರದಿ:ಬಂಗಾರಪ್ಪ .ಸಿ.
ಬೆಂಗಳೂರು : ಗಾಂಧಿನಗರ ವಿಧಾನಸಭಾ ಕ್ಷೇತ್ರದ ಮುಖಂಡರು ಕೆಪಿಸಿಸಿ ಮುಂಭಾಗದಲ್ಲಿ ಮನವಿ ಪತ್ರ ಸಲ್ಲಿಸಿದ ಸಮಯದಲ್ಲಿ
ಅನೇಕ ಮುಖಂಡರು ಹಾಜರಿದ್ದರು. ಸುದ್ದಿಗಾರರೊಂದಿಗೆ ಮಾತನಾಡಿದ ಅವರು ತಮ್ಮ ನೆಚ್ಚಿನ ನಾಯಕರಾದ ದಿನೇಶ್ ಗುಂಡೂರಾವ್ ಅವರಿಗೆ ರಾಜ್ಯ ಸರ್ಕಾರದಲ್ಲಿ ಉಪಮುಖ್ಯಮಂತ್ರಿ ಸ್ಥಾನ ನೀಡಬೇಕೆಂದು ಆಗ್ರಹಿಸಿದರು.
ಅವರು ಕಾಂಗ್ರೆಸ್ ಪಕ್ಷದ ಸಂಘಟನೆ ಬಲವರ್ಧನೆ, ಜನಪರ ಕಾರ್ಯಗಳು ಹಾಗೂ ಪಕ್ಷದ ಸಿದ್ಧಾಂತಗಳನ್ನು ಜನರಿಗೆ ತಲುಪಿಸುವಲ್ಲಿ ದಿನೇಶ್ ಗುಂಡೂರಾವ್ ಅವರು ಮಹತ್ವದ ಪಾತ್ರ ವಹಿಸಿದ್ದಾರೆ. ಪಕ್ಷದ ಬೆಳವಣಿಗೆ ಮತ್ತು ಸರ್ಕಾರದ ಯಶಸ್ಸಿಗೆ ಅವರ ಕೊಡುಗೆ ಅಪಾರವಾಗಿದ್ದು, ಅವರ ಅನುಭವ ಮತ್ತು ನಾಯಕತ್ವವನ್ನು ಪರಿಗಣಿಸಿ ಉಪಮುಖ್ಯಮಂತ್ರಿ ಹುದ್ದೆಯನ್ನು ನೀಡುವುದು ಸೂಕ್ತವಾಗಿದೆ ಎಂದು ಅಭಿಪ್ರಾಯಪಟ್ಟರು.
ರಾಜ್ಯದ ಅಭಿವೃದ್ಧಿ, ಸಾಮಾಜಿಕ ನ್ಯಾಯ ಹಾಗೂ ಜನಸಾಮಾನ್ಯರ ಸಮಸ್ಯೆಗಳ ಪರಿಹಾರಕ್ಕೆ ದಿನೇಶ್ ಗುಂಡೂರಾವ್ ಅವರಂತಹ ಅನುಭವಿ ನಾಯಕರ ಸೇವೆ ಇನ್ನಷ್ಟು ಪರಿಣಾಮಕಾರಿಯಾಗಿ ಬಳಕೆಯಾಗಬೇಕಿದೆ. ಆದ್ದರಿಂದ ಪಕ್ಷದ ಹೈಕಮಾಂಡ್ ಹಾಗೂ ರಾಜ್ಯ ನಾಯಕತ್ವವು ಅವರಿಗೆ ಉಪಮುಖ್ಯಮಂತ್ರಿ ಸ್ಥಾನ ನೀಡುವ ಕುರಿತು ಸಕಾರಾತ್ಮಕವಾಗಿ ಚಿಂತನೆ ನಡೆಸಬೇಕು ಎಂದು ಕಾಂಗ್ರೆಸ್ ಮುಖಂಡರು ಒತ್ತಾಯಿಸಿದರು
ಇದೇ ಸಂದರ್ಭದಲ್ಲಿ ಮಾಜಿ ಬಿಬಿಎಂಪಿ ಸದಸ್ಯರಾದ ಟೀ ಮಲ್ಲೇಶ್. ಬ್ಲಾಕ್ ಅಧ್ಯಕ್ಷರಾದ ಸರವಣ , ಸತ್ಯನಾರಾಯಣ , ಗಾಂಧಿನಗರ ಗ್ಯಾರಂಟಿ ಯೋಜನೆ ಸಮಿತಿ ಅಧ್ಯಕ್ಷ ಉಮೇಶ್ ಬಾಬು ರಘುನಾಥ್, ರಾಜ್ ಕಾರ್ತಿಕ್, ಶಶಿಕುಮಾರ್, ಕ್ವಿನ್ ಎಲಿಜಬೆತ್ ಚಕ್ರವರ್ತಿ. ಹಾಗೂ ಅನೇಕ ಕಾಂಗ್ರೆಸ್ ,ಪಕ್ಷದ ಮುಖಂಡರು ಕಾರ್ಯಕರ್ತರು ಹಾಗೂ ಬೆಂಬಲಿಗರು ಉಪಸ್ಥಿತರಿದ್ದರು.
