
Statement by Vaddarahatti Gram Panchayat PDO Suresh Chalwadi on always taking the lead in protecting the environment

ನಿತ್ಯವೂ ಪರಿಸರ ಸಂರಕ್ಷಣೆಗೆ ಮುಂದಾಗಿ
ವಡ್ಡರಹಟ್ಟಿ ಗ್ರಾಮ ಪಂಚಾಯತ್ ಪಿಡಿಓ ಸುರೇಶ ಚಲವಾದಿ ಹೇಳಿಕೆ

ಗಂಗಾವತಿ : ಪ್ರತಿಯೊಬ್ಬರೂ ಪರಿಸರ ಸಂರಕ್ಷಣೆಗೆ ಮುಂದಾಗಬೇಕು. ಉತ್ತಮ ಆರೋಗ್ಯ ಹೊಂದಲು ನಮ್ಮ ಸುತ್ತಮುತ್ತ ಸ್ವಚ್ಛ, ಸುಂದರ ಪರಿಸರ ನಿರ್ಮಿಸುವುದು ಅತ್ಯಗತ್ಯವಾಗಿದೆ ಎಂದು ವಡ್ಡರಹಟ್ಟಿ ಗ್ರಾಮ ಪಂಚಾಯತ್ ಪಿಡಿಓ ಸುರೇಶ ಚಲವಾದಿ ಅವರು ಹೇಳಿದರು.
ತಾಲೂಕಿನ ವಡ್ಡರಹಟ್ಟಿ ಗ್ರಾಪಂ ಕಾರ್ಯಾಲಯದಲ್ಲಿ ವಿಶ್ವ ಪರಿಸರ ದಿನಾಚರಣೆ ಅಂಗವಾಗಿ ಶುಕ್ರವಾರ ಹಮ್ಮಿಕೊಂಡಿದ್ದ ವಿಶೇಷ ಗ್ರಾಮಸಭೆಯಲ್ಲಿ ಕಾರ್ಯಕ್ರಮದಲ್ಲಿ ಮಾತನಾಡಿದರು. ವರ್ಷದ ಒಂದು ದಿನ ಬದಲಿಗೆ ನಿತ್ಯವೂ ಪರಿಸರ ಸಂರಕ್ಷಣೆಗಾಗಿ ಮುಂದಾಗಬೇಕು. ಶಾಲಾ ಶಿಕ್ಷಕರು ಹಾಗೂ ಪಾಲಕರು ಮಕ್ಕಳಿಗೆ ಬಾಲ್ಯದಲ್ಲೇ ಪರಿಸರ ಕಾಳಜಿ ಬಗ್ಗೆ ಜಾಗೃತಿ ಮೂಡಿಸಬೇಕು. ಪ್ರತಿಯೊಬ್ಬರೂ ಮನೆಗೊಂದು ಸಸಿ ನೆಡಬೇಕು ಎಂದರು.
ಗ್ರಾಮ ಪಂಚಾಯತ್ ಆವರಣ ಸೇರಿ ವಿವಿಧೆಡೆ ಸಸಿ ನೆಡಲಾಯಿತು. ಈ ವೇಳೆ, ಗ್ರಾಪಂ ಕಾರ್ಯದರ್ಶಿಗಳಾದ ಈಶಪ್ಪ, ಅಂಗನವಾಡಿ ಕಾರ್ಯಕರ್ತೆಯರು, ಆಶಾ ಕಾರ್ಯಕರ್ತೆಯರು, ಗ್ರಾಪಂ ಸಿಬ್ಬಂದಿಗಳು ಸೇರಿ ಇತರರಿದ್ದರು.
