ಗಂಗಾವತಿ ಬಸ್ ನಿಲ್ದಾಣದಲ್ಲಿ ಸಿಸಿಟಿವಿ ಹಾಗೂ ಸ್ವಚ್ಛತೆ ಪರಿಶೀಲನೆ: ಡಿವೈಎಸ್ಪಿ ಜೆ.ಎಸ್. ನ್ಯಾಮಗೌಡರ್ ಭೇಟಿ

H.Mallikarjun
H.Mallikarjun - Kalyanasiri
1 Min Read
ಜಾಹೀರಾತು
CCTV and cleanliness inspection at Gangavathi bus stand: DySP J.S. Namagowdar visits

ಗಂಗಾವತಿ ಬಸ್ ನಿಲ್ದಾಣದಲ್ಲಿ ಸಿಸಿಟಿವಿ ಹಾಗೂ ಸ್ವಚ್ಛತೆ ಪರಿಶೀಲನೆ: ಡಿವೈಎಸ್ಪಿ ಜೆ.ಎಸ್. ನ್ಯಾಮಗೌಡರ್ ಭೇಟಿ

ಜಾಹೀರಾತು

ಗಂಗಾವತಿ, ಜೂನ್ 8: ನಗರದ ಪ್ರಮುಖ ಬಸ್ ನಿಲ್ದಾಣಕ್ಕೆ ಇಂದು ಗಂಗಾವತಿ ಡಿವೈಎಸ್ಪಿ ಜೆ.ಎಸ್. ನ್ಯಾಮಗೌಡರ್ ಭೇಟಿ ನೀಡಿ, ಅಲ್ಲಿನ ಸಿಸಿಟಿವಿ ಕ್ಯಾಮೆರಾ ವ್ಯವಸ್ಥೆ ಹಾಗೂ ಸ್ವಚ್ಛತಾ ನಿರ್ವಹಣೆಯ ಕುರಿತು ಸ್ಥಳ ಪರಿಶೀಲನೆ ನಡೆಸಿದರು.
ಬಸ್ ನಿಲ್ದಾಣದಲ್ಲಿ ಪ್ರಯಾಣಿಕರ ಸುರಕ್ಷತೆ ಮತ್ತು ಸಾರ್ವಜನಿಕ ಸೌಲಭ್ಯಗಳ ಬಗ್ಗೆ ವಿಶೇಷ ಗಮನ ಹರಿಸಿದ ಡಿವೈಎಸ್ಪಿ ಜೆ.ಎಸ್.ನ್ಯಾಮಗೌಡರ್ ಹಾಗೂ ಗಂಗಾವತಿ ನಗರ ಪೊಲೀಸ್ ಠಾಣೆ ಪಿಐ ಪ್ರಕಾಶ್ ಯಾತನೂರು ಅವರು, ಅಳವಡಿಸಲಾಗಿರುವ ಸಿಸಿಟಿವಿ ಕ್ಯಾಮೆರಾಗಳ ಕಾರ್ಯನಿರ್ವಹಣೆಯನ್ನು ಪರಿಶೀಲಿಸಿ, ಅಗತ್ಯವಿರುವ ಕಡೆಗಳಲ್ಲಿ ಹೆಚ್ಚುವರಿ ಕ್ಯಾಮೆರಾಗಳನ್ನು ಅಳವಡಿಸುವ ಕುರಿತು ಅಧಿಕಾರಿಗಳೊಂದಿಗೆ ಚರ್ಚಿಸಿದರು. ಸಾರ್ವಜನಿಕ ಸ್ಥಳಗಳಲ್ಲಿ ಸಿಸಿಟಿವಿ ವ್ಯವಸ್ಥೆ ಅಪರಾಧ ತಡೆ ಹಾಗೂ ಭದ್ರತೆ ದೃಷ್ಟಿಯಿಂದ ಅತ್ಯಂತ ಮಹತ್ವದ್ದಾಗಿದೆ ಎಂದು ಅವರು ತಿಳಿಸಿದರು.
ರಾಜ್ಯದಿಂದ ವಿವಿಧ ಭಾಗಗಳಲ್ಲಿ ಬಸ್ ನಿಲ್ದಾಣಗಳ ಭದ್ರತೆ ಮತ್ತು ಮೇಲ್ವಿಚಾರಣೆಗಾಗಿ ಸಿಸಿಟಿವಿ ವ್ಯವಸ್ಥೆಗೆ ಹೆಚ್ಚಿನ ಒತ್ತು ನೀಡಲಾಗುತ್ತಿದೆ ಇದೇ ವೇಳೆ ಬಸ್ ನಿಲ್ದಾಣದ ಸ್ವಚ್ಛತಾ ವ್ಯವಸ್ಥೆಯನ್ನು ವೀಕ್ಷಿಸಿದ ಅವರು, ಪ್ರಯಾಣಿಕರಿಗೆ ಸ್ವಚ್ಛತೆ ಮತ್ತು ಆರೋಗ್ಯಕರ ವಾತಾವರಣ ಕಲ್ಪಿಸುವಂತೆ ಸಂಬಂಧಿಸಿದ ಅಧಿಕಾರಿಗಳಿಗೆ ಸೂಚನೆ ನೀಡಿದರು. ಕಸ ವಿಲೇವಾರಿ, ಶೌಚಾಲಯಗಳ ನಿರ್ವಹಣೆ ಹಾಗೂ ನಿಲ್ದಾಣದ ಸುತ್ತಮುತ್ತಲಿನ ಸ್ವಚ್ಛತೆ ಬಗ್ಗೆ ಬೈಕ್ ಪಾರ್ಕಿಂಗ್ ನಿಯಮಿತವಾಗಿ ಗಮನಹರಿಸುವಂತೆ ತಿಳಿಸಿದರು. ಸಾರ್ವಜನಿಕ ಬಸ್ ನಿಲ್ದಾಣಗಳಲ್ಲಿ ಸ್ವಚ್ಛತೆ ಮತ್ತು ಮೂಲಭೂತ ಸೌಲಭ್ಯಗಳ ನಿರ್ವಹಣೆ ಪ್ರಯಾಣಿಕರ ಅನುಕೂಲಕ್ಕಾಗಿ ಅತ್ಯಗತ್ಯವಾಗಿದೆ ಎಂದು ಹೇಳಿದರು,
ಈ ಸಂದರ್ಭದಲ್ಲಿ ನಗರ ಪೊಲೀಸ್ ಠಾಣೆ ಪಿಐ ಪ್ರಕಾಶ ಯಾತನೂರು,ಡಿಪೋ ಮ್ಯಾನೇಜರ್ ಪ್ರವೀಣ್ ಯಾರನಾಳ, ಪೊಲೀಸ್ ಸಿಬ್ಬಂದಿ ಮರಿಶಾಂತಗೌಡ,ಮೈಲಾರಪ್ಪ ಹಾಗೂ ಸಂಬಂಧಿತ ಇಲಾಖೆಯ ಅಧಿಕಾರಿಗಳು ಉಪಸ್ಥಿತರಿದ್ದರು.

Total Views: 2
Share This Article