ಗೋಮರ್ಸಿ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ಅಭಿವೃದ್ಧಿಗೆ ಮನವಿ.

H.Mallikarjun
H.Mallikarjun - Kalyanasiri
1 Min Read
ಜಾಹೀರಾತು
Appeal for the development of Gomersi Government Higher Primary School.




ಗೋಮರ್ಸಿ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ಅಭಿವೃದ್ಧಿಗೆ ಮನವಿ.

ಜಾಹೀರಾತು

ರಾಯಚೂರು ಜಿಲ್ಲೆಯ ಸಿಂಧನೂರು ತಾಲೂಕಿನ ಮಾಡಸಿರವಾರ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ,ಗೋಮರ್ಸಿಯಲ್ಲಿ ಮೂಲಭೂತ ಸೌಕರ್ಯಗಳ ಕೊರತೆ ಹಾಗೂ ಅಭಿವೃದ್ಧಿ ಕಾಮಗಾರಿಗಳ ಅಗತ್ಯತೆಯನ್ನು ಮನಗಂಡು, ಗ್ರಾಮದ ಮುಖಂಡರು, ಶಾಲಾ ಶಿಕ್ಷಕರು hagu ಸಾರ್ವಜನಿಕರು ಇಂದು ಮಾಡಸಿರವಾರ ಗ್ರಾಮ ಪಂಚಾಯಿತಿಯ ಅಭಿವೃದ್ಧಿ ಅಧಿಕಾರಿಗಳಿಗೆ (PDO) ಗೋಮರ್ಸಿಯಲ್ಲಿ ಮನವಿ ಪತ್ರ ಸಲ್ಲಿಸಿದರು.

ಶಾಲೆಯಲ್ಲಿ ಹೆಚ್ಚುವರಿ ಕೊಠಡಿಗಳ ನಿರ್ಮಾಣ, ಶೌಚಾಲಯಗಳ ದುರಸ್ತಿ, ಶುದ್ಧ ಕುಡಿಯುವ ನೀರಿನ ವ್ಯವಸ್ಥೆ, ಶಾಲಾ ಆವರಣದ ಸ್ವಚ್ಛತೆ, ಆಟದ ಮೈದಾನದ ಅಭಿವೃದ್ಧಿ, ಕಾಂಪೌಂಡ್ ನಿರ್ಮಾಣ ಸೇರಿದಂತೆ ವಿದ್ಯಾರ್ಥಿಗಳಿಗೆ ಅಗತ್ಯವಿರುವ ಮೂಲಭೂತ ಸೌಲಭ್ಯಗಳನ್ನು ಒದಗಿಸುವಂತೆ ಮನವಿಯಲ್ಲಿ ಒತ್ತಾಯಿಸಲಾಗಿದೆ.

ಈ ಸಂದರ್ಭದಲ್ಲಿ ಮಾತನಾಡಿದ ನಿರುಪಾದಿ ಕೆ ಗೋಮರ್ಸಿ, ಸರ್ಕಾರಿ ಶಾಲೆಗಳಲ್ಲಿ ಗುಣಮಟ್ಟದ ಶಿಕ್ಷಣದ ಜೊತೆಗೆ ಅಗತ್ಯ ಮೂಲಸೌಕರ್ಯಗಳು ಲಭ್ಯವಾಗುವುದು ಅತ್ಯಂತ ಮುಖ್ಯವಾಗಿದ್ದು, ಗೋಮರ್ಸಿ ಶಾಲೆಯ ಅಭಿವೃದ್ಧಿಗೆ ಗ್ರಾಮ ಪಂಚಾಯಿತಿ ಹಾಗೂ ಸಂಬಂಧಿಸಿದ ಇಲಾಖೆಗಳು ವಿಶೇಷ ಗಮನ ಹರಿಸಬೇಕೆಂದು ಆಗ್ರಹಿಸಿದರು.

ಮನವಿ ಸ್ವೀಕರಿಸಿದ ಗ್ರಾಮ ಪಂಚಾಯಿತಿ ಅಧಿಕಾರಿಗಳು ಶಾಲೆಯ ಸಮಸ್ಯೆಗಳನ್ನು ಪರಿಶೀಲಿಸಿ, ನಿಯಮಾನುಸಾರ ಅಗತ್ಯ ಕ್ರಮ ಕೈಗೊಳ್ಳುವುದಾಗಿ ಭರವಸೆ ನೀಡಿದರು.

ಈ ಸಂದರ್ಭದಲ್ಲಿ ಶಾಲಾ ಶಿಕ್ಷಕರು,ಗ್ರಾಮಸ್ಥರಾದ ಅಪ್ಪಯ್ಯ ,ಸಂಶುದ್ದೀನ್, ಉಮೇಶ್ ಉಪ್ಪಾರ, ವಿರುಪಣ್ಣ, ಅಜ್ಮೀರ್ ಸಾಬ್,ನಾಗಪ್ಪ,ವೀರೇಶ್ ಸೇರಿದಂತೆ ಅನೇಕ ಸಾರ್ವಜನಿಕರು ಉಪಸ್ಥಿತರಿದ್ದರು.

Total Views: 0
Share This Article