ಸಂಗಾಪುರ ಸರ್ಕಾರಿ ಶಾಲೆಯಲ್ಲಿ ಕುಡಿಯುವ ನೀರಿನ ಸಮಸ್ಯೆ – ಅಧಿಕಾರಿಗಳ ನಿರ್ಲಕ್ಷ್ಯ

H.Mallikarjun
H.Mallikarjun - Kalyanasiri
3 Min Read
ಜಾಹೀರಾತು

Drinking water problem at Singapore government school - children outraged by officials' negligence.

ಸಂಗಾಪುರ ಸರ್ಕಾರಿ ಶಾಲೆಯಲ್ಲಿ ಕುಡಿಯುವ ನೀರಿನ ಸಮಸ್ಯೆ – ಅಧಿಕಾರಿಗಳ ನಿರ್ಲಕ್ಷ್ಯಕ್ಕೆ ಮಕ್ಕಳ ಆಕ್ರೋಶ.

ಜಾಹೀರಾತು

ಕೊಪ್ಪಳ ಜಿಲ್ಲೆ ಗಂಗಾವತಿ ತಾಲೂಕಿನ ಸಂಗಾಪುರ ಗ್ರಾಮದ ಉನ್ನತೀಕರಿಸಿದ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಕುಡಿಯುವ ನೀರಿನ ಸಮಸ್ಯೆ ತೀವ್ರವಾಗಿ ಉಂಟಾಗಿದ್ದು, ವಿದ್ಯಾರ್ಥಿಗಳು ಹಾಗೂ ಅಡುಗೆ ಸಿಬ್ಬಂದಿಗಳು ಸಂಕಷ್ಟ ಅನುಭವಿಸುತ್ತಿದ್ದಾರೆ.

ಶಾಲೆಯ ಆವರಣದಲ್ಲಿರುವ ಕುಡಿಯುವ ನೀರಿನ ಟ್ಯಾಂಕ ಕೆಟ್ಟು ಹೋಗಿರುವ ಕಾರಣ ಮಕ್ಕಳಿಗೆ ಕುಡಿಯುವ ನೀರು ದೊರೆಯದ ಪರಿಸ್ಥಿತಿ ನಿರ್ಮಾಣವಾಗಿದೆ.

ಇದರ ಜೊತೆಗೆ ಮಧ್ಯಾಹ್ನದ ಬಿಸಿಯೂಟ ತಯಾರಿಸುವ ಕಾರ್ಯಕ್ಕೂ ನೀರಿನ ಕೊರತೆಯಿಂದ ಸಮಸ್ಯೆ ಉಂಟಾಗಿದೆ ಎಂದು ತಿಳಿದುಬಂದಿದೆ.

ಈ ಕುರಿತು ಮಾಹಿತಿ ತಿಳಿದ ಮಹಾನಾಯಕ ಜನಜಾಗೃತಿ ವೇದಿಕೆಯ ರಾಜ್ಯಾಧ್ಯಕ್ಷ ಎಸ್.ಎಸ್. ಜಂಬಣ್ಣ ಅವರು ಸರಕಾರಿ ಶಾಲೆಗೆ ಭೇಟಿ ನೀಡಿದ್ದಾರೆ.

ಸಮಸ್ಯೆಯನ್ನು ತಿಳಿದಾಗ ಸಂಬಂಧಪಟ್ಟ ಅಧಿಕಾರಿಗಳನ್ನು ಸಂಪರ್ಕಿಸಲು ಪ್ರಯತ್ನಿಸಿದ್ದಾರೆ.

ಆದರೆ ಗ್ರಾಮ ಪಂಚಾಯಿತಿ ಅಭಿವೃದ್ಧಿ ಅಧಿಕಾರಿ (PDO) ಅವರಿಗೆ ಕುಡಿಯುವ ನೀರಿನ ಸಮಸ್ಯೆ ಬಗ್ಗೆ ದೂರವಾಣಿ ಮೂಲಕ ಕರೆ ಮಾಡಿದಾಗ ಅವರು ಕರೆ ಸ್ವೀಕರಿಸದೇ, “I i can’t talk now call you back later” ಎಂಬ ಸಂದೇಶವನ್ನು ಕಳುಹಿಸಿದ್ದಾರೆ.
ಸಂಗಾಪುರ್ ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗಳಿಗೆ ಯಾವುದೇ ಸಮಸ್ಯೆ ಬಗ್ಗೆ ಕರೆ ಮೂಲಕ ತಿಳಿಸಿದರೆ ನಮಗೆ ಸಿಗುವುದು ಸಮಸ್ಯೆಯ ಪರಿಹಾರ ಅಲ್ಲ ನಮಗೆ ಸಿಗುವುದೇ ಒಂದೇ ಸಂದೇಶ i can’t talk now call you back later”

ಗಮನಾರ್ಹ ವಿಷಯ ಏನೆಂದರೆ, ಇದೇ ಸಮಸ್ಯೆ ಕುರಿತು ಈ ಹಿಂದೆ ಶಾಲೆಯ ಮುಖ್ಯ ಶಿಕ್ಷಕರು ಗ್ರಾಮ ಪಂಚಾಯಿತಿಗೆ ಹಲವು ಬಾರಿ ಮನವಿ ಪತ್ರ ಸಲ್ಲಿಸಿ, ಕೆಟ್ಟು ಹೋಗಿರುವ ಟ್ಯಾಂಕರ್ ಅನ್ನು ದುರಸ್ತಿ ಮಾಡಿ ಶಾಲೆಗೆ ಸಮರ್ಪಕವಾಗಿ ನೀರು ಪೂರೈಸುವಂತೆ ಮನವಿ ಮಾಡಿದ್ದಾರೆ. ಆದರೆ ಆ ಮನವಿಗೆ ಯಾವುದೇ ರೀತಿಯ ಕ್ರಮ ಕೈಗೊಳ್ಳಲಾಗಿಲ್ಲ ಎಂದು ತಿಳಿದುಬಂದಿದೆ.

ಬಳಿಕ ಎಸ್.ಎಸ್. ಜಂಬಣ್ಣ ಅವರು ಶಾಲೆಯಲ್ಲಿ ಕುಡಿಯುವ ನೀರಿನ ಸಮಸ್ಯೆಯ ಬಗ್ಗೆ ಜಿಲ್ಲಾಧಿಕಾರಿಗಳನ್ನು ದೂರವಾಣಿ ಮೂಲಕ ಸಂಪರ್ಕಿಸಿದ್ದು ಜಿಲ್ಲಾಧಿಕಾರಿಗಳು ಒಂದೇ ರಿಂಗ್‌ನಲ್ಲಿ ಕರೆ ಸ್ವೀಕರಿಸಿ ಉತ್ತಮ ಪ್ರತಿಕ್ರಿಯೆ ನೀಡಿದ್ದಾರೆ. ಸಮಸ್ಯೆಯನ್ನು ಸಂಬಂಧಿಸಿದ ಅಧಿಕಾರಿಗಳ ಗಮನಕ್ಕೆ ತಂದು ಶೀಘ್ರ ಪರಿಹರಿಸುವಂತೆ ಭರವಸೆ ನೀಡಿದ್ದಾರೆ ಎಂದು ತಿಳಿಸಿದ್ದಾರೆ.

ಇದಾದ ನಂತರ ರಾಜ್ಯಾಧ್ಯಕ್ಷರು ನೇರವಾಗಿ ಗ್ರಾಮ ಪಂಚಾಯಿತಿ ಕಚೇರಿಗೆ ತೆರಳಿ ಕಾರ್ಯದರ್ಶಿಯನ್ನು ಭೇಟಿ ಮಾಡಿ ಕೂಡಲೇ ಸಮಸ್ಯೆ ಬಗೆಹರಿಸುವಂತೆ ಒತ್ತಾಯಿಸಿದರು. ಇದಕ್ಕೆ ಸ್ಪಂದಿಸಿದ ಕಾರ್ಯದರ್ಶಿಗಳು ಸಮಸ್ಯೆಯನ್ನು ತುರ್ತಾಗಿ ಪರಿಹರಿಸುವ ಭರವಸೆ ನೀಡಿದ್ದು, ಸಂಬಂಧಪಟ್ಟ ವಾಟರ್‌ಮ್ಯಾನ್ ಅವರನ್ನು ಸ್ಥಳಕ್ಕೆ ಕಳುಹಿಸಿ ದುರಸ್ತಿ ಕಾರ್ಯ ಆರಂಭಿಸಲು ಸೂಚನೆ ನೀಡಿದ್ದಾರೆ.

ಈ ಸಂದರ್ಭದಲ್ಲಿ ಮಾತನಾಡಿದ ಶಾಲಾ ಮಕ್ಕಳು, “ನಮಗೆ ಪಾಠ ಹೇಳಬೇಕಾದ ಶಿಕ್ಷಕರು ಕುಡಿಯುವ ನೀರು ತರಲು ಸಮಯ ಕಳೆಯುವ ಪರಿಸ್ಥಿತಿ ಬಂದಿದೆ. ಇದರಿಂದ ನಮ್ಮ ಶಿಕ್ಷಣಕ್ಕೂ ತೊಂದರೆಯಾಗುತ್ತಿದೆ.

ಈ ಸಮಸ್ಯೆಗೆ ಕಾರಣವಾದ ಅಧಿಕಾರಿಗಳ ವಿರುದ್ಧ ಕ್ರಮ ಕೈಗೊಂಡು ಅವರನ್ನು ಅಮಾನತುಗೊಳಿಸಬೇಕು” ಎಂದು ಆಗ್ರಹಿಸಿದರು.

ಈ ಕುರಿತು ಪ್ರತಿಕ್ರಿಯೆ ನೀಡಿದ ಮಹಾನಾಯಕ ಜನಜಾಗೃತಿ ವೇದಿಕೆಯ ರಾಜ್ಯಾಧ್ಯಕ್ಷರಾದ ಎಸ್.ಎಸ್. ಜಂಬಣ್ಣ ಅವರು, “ಕುಡಿಯುವ ನೀರಿನಂತಹ ಮೂಲಭೂತ ಸೌಲಭ್ಯವನ್ನು ಶಾಲಾ ಮಕ್ಕಳಿಗೆ ಒದಗಿಸುವಲ್ಲಿ ಅಧಿಕಾರಿಗಳು ನಿರ್ಲಕ್ಷ್ಯ ವಹಿಸಿರುವುದು ಖಂಡನೀಯ. ಶಾಲಾ ಮಕ್ಕಳ ಆರೋಗ್ಯ ಮತ್ತು ಶಿಕ್ಷಣದ ವಿಷಯದಲ್ಲಿ ಯಾವುದೇ ನಿರ್ಲಕ್ಷ್ಯವನ್ನು ಸಹಿಸುವುದಿಲ್ಲ. ಕೂಡಲೇ ಸಮಸ್ಯೆಯನ್ನು ಶಾಶ್ವತವಾಗಿ ಬಗೆಹರಿಸಿ ಅಗತ್ಯ ಕ್ರಮ ಕೈಗೊಳ್ಳಬೇಕು.

ಅಧಿಕಾರಿಗಳು ಇದೇ ರೀತಿಯ ನಿರ್ಲಕ್ಷ್ಯವನ್ನು ಮುಂದುವರಿಸಿದರೆ ಮಹಾನಾಯಕ ಜನಜಾಗೃತಿ ವೇದಿಕೆಯ ವತಿಯಿಂದ ಉಗ್ರ ಹೋರಾಟ ಹಮ್ಮಿಕೊಳ್ಳಲಾಗುವುದು” ಎಂದು ಎಚ್ಚರಿಕೆ ನೀಡಿದರು.

ಸರ್ಕಾರಿ ಶಾಲೆಯಲ್ಲಿ ಮೂಲಭೂತ ಸೌಲಭ್ಯಗಳ ಕೊರತೆ ಕಂಡುಬಂದಿರುವುದು ಸಾರ್ವಜನಿಕರಲ್ಲೂ ಅಸಮಾಧಾನಕ್ಕೆ ಕಾರಣವಾಗಿದ್ದು, ಸಂಬಂಧಪಟ್ಟ ಅಧಿಕಾರಿಗಳು ತ್ವರಿತ ಕ್ರಮ ಕೈಗೊಂಡು ಸಮಸ್ಯೆಯನ್ನು ಶಾಶ್ವತವಾಗಿ ಪರಿಹರಿಸುತ್ತಾರೆಯೇ ಎಂಬುದನ್ನು ಕಾದು ನೋಡಬೇಕಾಗಿದೆ.

Total Views: 0
Share This Article