
Ganga Devi Jayanti celebrated on June 24th in Hosalli

ಹೊಸಳ್ಳಿಯಲ್ಲಿ ಜೂನ್ 24 ರಂದು ಗಂಗಾದೇವಿ ಜಯಂತಿ ಆಚರಣೆ

ಗಂಗಾವತಿ : ಪ್ರತಿ ವಷ೯ದಂತೆ ಈ ಬಾರಿಯು ಕೂಡ ಗಂಗಾಮತ ಸಮಾಜದ ವತಿಯಿಂದ ಜೂನ್ 24 ರಂದು ಗಂಗಾದೇವಿ ಜಯಂತಿ ಹಾಗೂ ಸಾಮೂಹಿಕ ವಿವಾಹಗಳು ನಡೆಯಲಿವೆ ಎಂದು ಗಂಗಾಮತ ಸಮಾಜದ ಅಧ್ಯಕ್ಷ ಸಿದ್ದಪ್ಪ ಕರೆಕುರಿ ಹೇಳಿದರು.
ಗಂಗಾಮತ ಸಮಾಜದ ವತಿಯಿಂದ ಭಾನುವಾರ ಹಮ್ಮಿಕೊಂಡ ಪತ್ರಿಕಾ ಗೋಷ್ಠಿಯಲ್ಲಿ ಭಾಗವಹಿಸಿ ಮಾತನಾಡಿದರು.
ಹೊಸಳ್ಳಿ ಗ್ರಾಮದಲ್ಲಿ ಗಂಗಾದೇವಿ ಜಯಂತಿಯನ್ನು ವಿಜೃಂಭಣೆಯಿಂದ ಆಚರಿಸಲು ಸಮಾಜದಿಂದ ಸಕಲ ಸಿದ್ಧತೆಗಳನ್ನು ಕೈಗೊಳ್ಳಲಾಗಿದೆ. ಜೂನ್ 23ರಂದು ಗಂಗಾದೇವಿ ದೇವಸ್ಥಾನದಲ್ಲಿ ನೂತನ ಪಾದಗಟ್ಟೆ ಪ್ರತಿಷ್ಠಾಪನೆ ಕಾರ್ಯಕ್ರಮ ನಡೆಯಲಿದೆ. ಹೆಬ್ಬಾಳ ಮಠದ ನಾಗಭೂಷಣ ಶಿವಾಚಾರ್ಯ ಮಹಾಸ್ವಾಮೀಜಿಗಳು ಹಾಗೂ ಕಲ್ಮಠದ ಕೊಟ್ಟೂರೇಶ್ವರ ಸ್ವಾಮೀಜಿ ಧಾರ್ಮಿಕ ವಿಧಿವಿಧಾನಗಳ ಮೂಲಕ ಪ್ರತಿಷ್ಠಾಪನೆ ಕಾಯ೯ಕ್ರಮವನ್ನು ನೆರವೇರಿಸಲಿದ್ದಾರೆ ಎಂದರು.
ಇನ್ನೂ ಜೂನ್ 24ರಂದು 23ನೇ ವರ್ಷದ ಗಂಗಾದೇವಿ ಜಯಂತಿ ಹಾಗೂ 2 ವಷ೯ದ ರಥೋತ್ಸವ ಕಾರ್ಯಕ್ರಮ ಜರುಗಲಿದ್ದೆ. ಜಯಂತಿ ದಿನದಂದು ಮಾಜಿ ಶಾಸಕ ಪರಣ್ಣ ಮುನವಳ್ಳಿ ಧ್ವಜಾರೋಹಣ ನೆರವೇರಿಸಲಿದ್ದಾರೆ. ಶಾಸಕ ಗಾಲಿ ಜನಾರ್ದನ ರೆಡ್ಡಿ ಗಂಗಾದೇವಿ ಪಾದಗಟ್ಟೆ ಉದ್ಘಾಟನೆ ಮಾಡಲಿದ್ದಾರೆ. ಬಳಿಕ ಜಯಂತಿಯ ಅಂಗವಾಗಿ ದೇವಿಯ ಮೂರ್ತಿಗೆ ಪಂಚಾಮೃತ ಅಭಿಷೇಕ, ಕುಂಕುಮಾರ್ಚನೆ, ಹೂವಿನ ಅಲಂಕಾರ, ಮಹಾಮಂಗಳಾರತಿ ಸೇರಿದಂತೆ ವಿವಿಧ ಧಾರ್ಮಿಕ ಪೂಜೆಗಳು ನಡೆಯಲಿವೆ. ಇದೇ ಸಂದರ್ಭದಲ್ಲಿ ಸಾಮೂಹಿಕ ವಿವಾಹ ಕಾರ್ಯಕ್ರಮವೂ ನಡೆಯಲಿದೆ.
ಸಂಜೆ ನಡೆಯಲಿರುವ ಗಂಗಾದೇವಿ ರಥೋತ್ಸವಕ್ಕೆ ಬಿಜೆಪಿ ಮುಖಂಡರಾದ ಜಿ. ಅರುಣಲಕ್ಷ್ಮಿ ಚಾಲನೆ ನೀಡಲಿದ್ದು, ಮಾಜಿ ಶಾಸಕರು, ಮಾಜಿ ಸಚಿವರು, ಮಾಜಿ ಸಂಸದರು ಸೇರಿದಂತೆ ಹಲವು ಗಣ್ಯರು ಭಾಗವಹಿಸಲಿದ್ದಾರೆ ಎಂದು ತಿಳಿಸಿದರು.
ಸಮಾಜದ ಉಪಾಧ್ಯಕ್ಷ ಡಾಣಿ ಮರಿಯಪ್ಪ, ಕಾಯ೯ದಶಿ೯ ಮೆಟ್ರಿ ಶ್ರೀನಿವಾಸ, ಸದಸ್ಯರಾದ ಪಿ.ಸಿದ್ದಪ್ಪ, ಬೋವಿ ಯಂಕಪ್ಪ, ಕುಂಟೋಜಿ ಹನುಮೇಶಪ್ಪ, ಚಂದ್ರಪ್ಪ ಹಾಗೂ ಇತರರಿದ್ದರು.
