ಜೂ. 26ರಂದು ಹೆಚ್.ಎಂ. ರೇವಣ್ಣ ಅವರ ಅಧ್ಯಕ್ಷತೆಯಲ್ಲಿಕೊಪ್ಪಳ ಜಿಲ್ಲಾ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿ ಸಭೆ

H.Mallikarjun
H.Mallikarjun - Kalyanasiri
1 Min Read
ಜಾಹೀರಾತು

On June 26, the Koppal District Guarantee Schemes Implementation Committee met under the chairmanship of H.M. Revanna.

ಜಾಹೀರಾತು

ಜೂ. 26ರಂದು ಹೆಚ್.ಎಂ. ರೇವಣ್ಣ ಅವರ ಅಧ್ಯಕ್ಷತೆಯಲ್ಲಿ
ಕೊಪ್ಪಳ ಜಿಲ್ಲಾ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿ ಸಭೆ


ಕೊಪ್ಪಳ ಜೂನ್ 22 (ಕರ್ನಾಟಕ ವಾರ್ತೆ): ಕರ್ನಾಟಕ ರಾಜ್ಯ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರದ ಅಧ್ಯಕ್ಷರಾದ ಹೆಚ್.ಎಂ. ರೇವಣ್ಣ ಅವರ ಅಧ್ಯಕ್ಷತೆಯಲ್ಲಿ ಕೊಪ್ಪಳ ಜಿಲ್ಲಾ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿ ಸಭೆಯನ್ನು ಜೂನ್ 26ರಂದು ಅಪರಾಹ್ನ 12 ಗಂಟೆಗೆ ಜಿಲ್ಲಾ ಪಂಚಾಯತ್ ಜೆ.ಹೆಚ್. ಪಟೇಲ್ ಸಭಾಂಗಣದಲ್ಲಿ ಆಯೋಜಿಸಲಾಗಿದೆ.
ರಾಜ್ಯಾಧ್ಯಕ್ಷರು, ಕೊಪ್ಪಳ ಜಿಲ್ಲಾ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿಯೊಂದಿಗೆ ಚರ್ಚಿಸಲಿದ್ದು, ಜಿಲ್ಲಾ ಉಪಾಧ್ಯಕ್ಷರು, ಸದಸ್ಯರು, ಎಲ್ಲಾ ತಾಲ್ಲೂಕುಗಳ ಅಧ್ಯಕ್ಷರು ಮತ್ತು ಇತರೆ ಪದಾಧಿಕಾರಿಗಳು ಸಭೆಯಲ್ಲಿ ಪಾಲ್ಗೊಳ್ಳಬೇಕು. ಪಂಚ ಗ್ಯಾರಂಟಿ ಯೋಜನೆಗಳಿಗೆ ಸಂಬಂಧಿಸಿದಂತೆ ಜಿಲ್ಲೆಯ ಎಲ್ಲಾ ಅನುಷ್ಠಾನಾ ಇಲಾಖೆಗಳ ಅಧಿಕಾರಿಗಳು ಸೂಕ್ತ ಮಾಹಿತಿಯೊಂದಿಗೆ ಕಡ್ಡಾಯವಾಗಿ ಈ ಸಭೆಗೆ ಹಾಜರಾಗಬೇಕು ಎಂದು ಕೊಪ್ಪಳ ಜಿಲ್ಲಾ ಮಟ್ಟದ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರದ ಅಧ್ಯಕ್ಷರಾದ ರೆಡ್ಡಿ ಶ್ರೀನಿವಾಸ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Total Views: 0
Share This Article