ಹಾವು ಕಡಿತ ನಿಯಂತ್ರಣ ಜಾಗೃತಿ, ತಂಬಾಕು ನಿಯಂತ್ರಣ ಕಾರ್ಯಕ್ರಮ

H.Mallikarjun
H.Mallikarjun - Kalyanasiri
2 Min Read
ಜಾಹೀರಾತು

Snake bite control awareness, tobacco control program

ಹಾವು ಕಡಿತ ನಿಯಂತ್ರಣ ಜಾಗೃತಿ, ತಂಬಾಕು ನಿಯಂತ್ರಣ ಕಾರ್ಯಕ್ರಮ

ಜಾಹೀರಾತು


ಕೊಪ್ಪಳ ಜೂನ್ 23 (ಕರ್ನಾಟಕ ವಾರ್ತೆ): ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಇಲಾಖೆ, ಜಿಲ್ಲಾ ಸರ್ವೇಕ್ಷಣಾಧಿಕಾರಿಗಳ ಘಟಕ, ನಗರ ಪ್ರಾಥಮಿಕ ಆರೋಗ್ಯ ಕೇಂದ್ರ ಹಾಗೂ ವಾಸವಿ ಹಿರಿಯ ಪ್ರಾಥಮಿಕ ಶಾಲೆ ಕೊಪ್ಪಳ ಇವರ ಸಂಯುಕ್ತಾಶ್ರಯದಲ್ಲಿ ಇತ್ತೀಚೆಗೆ (ಜೂ. 20ರಂದು) ಶಾಲಾ ಆವರಣದಲ್ಲಿ “ರಾಷ್ಟ್ರೀಯ ಹಾವು ಕಡಿತ ನಿಯಂತ್ರಣ ಜಾಗೃತಿ” ಕಾರ್ಯಕ್ರಮ ಹಾಗೂ “ರಾಷ್ಟ್ರೀಯ ತಂಬಾಕು ನಿಯಂತ್ರಣ ಕಾರ್ಯಕ್ರಮ” ನಡೆಯಿತು.
 ಉಪ ಜಿಲ್ಲಾ ಆರೋಗ್ಯ ಶಿಕ್ಷಣಾಧಿಕಾರಿಗಳಾದ ದೇವಮ್ಮ ಅವರು ಮಾತನಾಡಿ, ಹಾವು ಕಡಿತದಿಂದ ಉಂಟಾಗುವ ಮರಣವನ್ನು ನಿಯಂತ್ರಿಸುವ ಕುರಿತು ಸಾರ್ವಜನಿಕರಿಗೆ ಅರಿವು ಮೂಡಿಸುವುದು ಈ ಕಾರ್ಯಕ್ರಮದ ಉದ್ದೇಶವಾಗಿದೆ. ಭಾರತ ಹಳ್ಳಿಗಳ ದೇಶ ಶೇ. 70 ಕ್ಕಿಂತಲೂ ಹೆಚ್ಚು ಜನರು ಕೃಷಿಯಲ್ಲಿ ಅವಲಂಬಿತರಾಗಿದ್ದಾರೆ. ಭಾರತದಲ್ಲಿ ಪ್ರಮುಖ 4 ವಿಷಕಾರಿ ಹಾವುಗಳಾದ ನಾಗರಹಾವು, ಕಟ್ಟಾವು, ಕೊಳಕು ಮಂಡಲ ಹಾವು ಹಾಗೂ ಗರಗಸ ಮಂಡಲ ಹಾವು ಕಡಿತದಿಂದ ಉಂಟಾಗುವ ಸಾವುಗಳಲ್ಲಿ 90% ಅಧಿಕ ಸಾವುಗಳಿಗೆ ಕಾರಣವಾಗುತ್ತವೆ. ಈ 4 ಹಾವುಗಳ ಬಗ್ಗೆ ಎಚ್ಚರಿಗೆ ವಹಿಸಬೇಕು ನಾಗರಹಾವು ಬಿಟ್ಟು ಉಳಿತ 03 ವಿಷಕಾರಿ ಹಾವುಗಳು ರಾತ್ರಿವೇಳೆ ಹೆಚ್ಚು ಚಟುವಟಿಕೆಯಿಂದಿರುತ್ತವೆ. ಹಾಗಾಗಿ ರಾತ್ರಿವೇಳೆ ಹೊರಗಡೆ ಹೋಗುವಾಗ ಟಾರ್ಚ್ ಬಳಸಬೇಕು. ಮನೆ ಅಂಗಳವನ್ನು ಇಲಿ ಹೆಗ್ಗನಗಳಂತಹ ಹಾವುಗಳು ತಿನ್ನುವ ಜೀವಿಗಳಿಂದ ಮುಕ್ತವಾಗಿಸುವುದು. ಹಾವುಗಳು ತಿನ್ನುವ ಜೀವಿಗಳಿಂದ ಮುಕ್ತವಾಗಿಸುವುದು. ಮನೆಯಂಗಳ ಅಥವಾ ಹೊಲಗದ್ದೆಗಳಲ್ಲಿ ಸಾಮಾನ್ಯವಾಗಿ ತಿರುಗಾಡುವ ಸ್ಥಳಗಳಲ್ಲಿ ಗಿಡಗಂಟಿಗಳನ್ನು ಕಡಿದು ಸ್ವಚ್ಚವಾಗಿಟ್ಟುಕೊಳ್ಳುವುದು ಎಂದರು.
 ಹಾವುಗಳಿರುವ ಸಾಧ್ಯತೆ ಹೆಚ್ಚಿರುವ ಸ್ಥಳಗಳಲ್ಲಿ ಕೆಲಸ ಮಾಡುವಾಗ ಶೂಗಳನ್ನು ಬಳಸುವುದು. ರಾತ್ರಿ ಮನೆಯ ಹೊರಗೆ ಹಾಗೂ ಹೊಲಗದ್ದೆಗಳಲ್ಲಿ ಮಲಗಬೇಕಾದಾಗ ನೆಲದಲ್ಲಿ ಮಲಗದೆ ಎತ್ತರ ಪ್ರದೇಶದ ಮಂಚ ಬಳಸುವುದು, ನೆಲದಲ್ಲಿ ಮಲಗಲೇ ಬೇಕೆಂದರೆ ಕಡ್ಡಾಯವಾಗಿ ಸೊಳ್ಳೆಪರದೆ ಬಳಸುವುದು ಹಾಗೂ ರೈತರು ಹೊಲದಲ್ಲಿ ದನ-ಕರಗಳಿಗೆ ಮೇವು ಹಾಗೂ ಹಸಿಹುಲ್ಲು ಕಿಳುವಾಗ ಕುಡುಗೊಲು ಬಳಸಬೇಕು. ಒಂದು ವೇಳೆ ಹಾವು ಕಚ್ಚಿದರೆ ತಕ್ಷಣ ಸಮೀಪದ ಸರ್ಕಾರಿ ಆಸ್ಪತ್ರೆಗೆ 40 ನಿಮಿಷದೊಳಗಾಗಿ ಹೋಗಿ ಚಿಕಿತ್ಸೆ ಪಡೆದುಕೊಳ್ಳಬೇಕು. ಹಾವು ಕಡೆದ ವ್ಯಕ್ತಿಯನ್ನು ಸಮಾದಾನ ಪಡಿಸಿ, ಗಾಬರಿ ಪಡಿಸಬೇಡಿ. ಹಾವಿನಿಂದ ನಿಧಾನವಾಗಿ ದೂರ ಸರಿಯಿರಿ. ರಕ್ತಬಂಧಕಪಟ್ಟಿ ಕಟ್ಟಬೇಡಿ. ಹಾವು ಕಡಿತಕ್ಕೊಳಗಾದ ವ್ಯಕ್ತಿಯನ್ನು ಎಡಭಾಗಕ್ಕೆ ಮಲಗಿಸಿ ಕಚ್ಚಿದ ಭಾಗವನ್ನು ಅಲುಗಾಡದಂತೆ ನೋಡಿಕೊಳ್ಳಿ. ಗಾಯವನ್ನು ಕತ್ತರಿಸಬೇಡಿ, ಏನನ್ನು ಹಚ್ಚಬೇಡಿ. ಹಾವು ಕಚ್ಚಿದ ವ್ಯಕ್ತಿಗೆ ಆಸ್ಪತ್ರೆಯಲ್ಲಿಯೇ ಚಿಕಿತ್ಸೆ ಕೊಡಿಸಿ. ನಾಟಿ ಔಷಧ ಅಥವಾ ಅಸುರಕ್ಷಿತ ಚಿಕಿತ್ಸಾ ಪದ್ದತಿಯನ್ನು ಅವಲಂಬಿಸಬೇಡಿ. ಒಟ್ಟಾರೆಯಾಗಿ ಪ್ರತಿಯೊಬ್ಬರೂ ತಮ್ಮ ತಮ್ಮ ಮನೆಯ ಸುತ್ತ-ಮುತ್ತಲಿನ ಪ್ರದೇಶ ಸ್ವಚ್ಛತೆಯಿಂದ ಇಟ್ಟುಕೊಂಡು ಇದರ ಬಗ್ಗೆ ಇತರರಿಗೂ ಮಾಹಿತಿ ನೀಡಿ, ಜಾಗೃತರಾಗಬೇಕೆಂದು ವಿದ್ಯಾರ್ಥಿಗಳಿಗೆ ತಿಳಿಸಿದರು.
 ಸಮಾಜ ಕಾರ್ಯಕರ್ತೆ ಸರಸ್ವತಿ ಅವರು ಮಾತನಾಡಿ, ತಂಬಾಕು ಸೇವನೆಯಿಂದಾಗುವ ಕ್ಯಾನ್ಸರ್ ಹೃದಯ ಸಂಬಂಧಿ ಕಾಯಿಲೆ, ಶ್ವಾಸಕೋಶದ ಕಾಯಿಲೆ, ಲಕ್ವಾ ಇತರೆ ಕಾಯಿಲೆಗಳು ಬರಬಹುದು. ಪ್ರತಿ ಸಿಗರೇಟ್, ಬೀಡಿ ಸೇವನೆಯಿಂದ 7 ನಿಮಿಷ ಆಯುಷ್ಯ ಕಡಿಮೆ ಮಾಡುತ್ತದೆ ಎಂದು ವಿಶ್ವ ಆರೋಗ್ಯ ಸಂಸ್ಥೆ ತಿಳಿಸುತ್ತದೆ. ಆದ್ದರಿಂದ ಎಲ್ಲರೂ ತಂಬಾಕು ಸೇವನೆಯಿಂದ ದೂರವಿದ್ದು, ಆರೋಗ್ಯವಂತ ಸಮಾಜ ನಿರ್ಮಾಣಕ್ಕೆ ಮುಂದಾಗಬೇಕೆಂದು ಹೇಳಿದರು.
 ಕಾರ್ಯಕ್ರಮದಲ್ಲಿ ಹಿರಿಯ ಆರೋಗ್ಯ ನಿರೀಕ್ಷಣಾಧಿಕಾರಿಗಳಾದ ಎಲ್.ವಿ ಸಜ್ಜನ್, ಸಹಾಯಕ ಪ್ರಾಧ್ಯಾಪಕರು, ಉಪನ್ಯಾಸಕರು ಹಾಗೂ ಇತರೆ ಸಿಬ್ಬಂದಿಗಳು ಮತ್ತು ವಿದ್ಯಾರ್ಥಿಗಳು ಭಾಗವಹಿಸಿ ಕಾರ್ಯಕ್ರಮವನ್ನು ಯಶಸ್ವಿಗೊಳಿಸಿದರು.
****

Total Views: 0
Share This Article