
Inauguration of 33 new spillway gates of Tungabhadra reservoir on June 25
ತುಂಗಭದ್ರಾ ಜಲಾಶಯದ ನೂತನ 33 ಸ್ಪಿಲ್‌ವೇ ಗೇಟುಗಳ ಲೋಕಾರ್ಪಣೆ ಕಾರ್ಯಕ್ರಮ ಜೂ. 25ಕ್ಕೆ

ಕೊಪ್ಪಳ ಜೂನ್ 23 (ಕರ್ನಾಟಕ ವಾರ್ತೆ): ಕರ್ನಾಟಕ ಸರ್ಕಾರ ಜಲಸಂಪನ್ಮೂಲ ಇಲಾಖೆ ಹಾಗೂ ತುಂಗಭದ್ರಾ ಮಂಡಳಿಯ ಸಹಯೋಗದೊಂದಿಗೆ ತುಂಗಭದ್ರಾ ಜಲಾಶಯಕ್ಕೆ ನೂತನವಾಗಿ ಅಳವಡಿಸಿದ 33 ಸ್ಪಿಲ್‌ವೇ ಗೇಟುಗಳ ಲೋಕಾರ್ಪಣೆ ಕಾರ್ಯಕ್ರಮವನ್ನು ಜೂನ್ 25ರ ಗುರುವಾರ ಬೆಳಿಗ್ಗೆ 11 ಗಂಟೆಗೆ ಕೊಪ್ಪಳ ಜಿಲ್ಲೆಯ ಮುನಿರಾಬಾದ್ ಸರ್ಕಾರಿ ಹೈಸ್ಕೂಲ್ ಗೌಂಡ್‌ನಲ್ಲಿ ಆಯೋಜಿಸಲಾಗಿದೆ.
ಕರ್ನಾಟಕ ಸರ್ಕಾರದ ಮುಖ್ಯಮಂತ್ರಿಗಳಾದ ಡಿ.ಕೆ. ಶಿವಕುಮಾರ್ ಅವರು ಕಾರ್ಯಕ್ರಮದ ಉದ್ಘಾಟನೆ ನೆರವೇರಿಸುವರು. ಭಾರತ ಸರ್ಕಾರದ ಕೇಂದ್ರ ಜಲಶಕ್ತಿ ಸಚಿವರಾದ ಸಿ.ಆರ್. ಪಾಟೀಲ್, ಆಂಧ್ರಪ್ರದೇಶ ಮುಖ್ಯಮಂತ್ರಿಗಳಾದ ಎನ್.ಚಂದ್ರಬಾಬು ನಾಯ್ಡು, ತೆಲಂಗಾಣ ಮುಖ್ಯಮಂತ್ರಿಗಳಾದ ಎ.ರೇವಂತ್ ರೆಡ್ಡಿ, ಕರ್ನಾಟಕ ಉಪ ಮುಖ್ಯಮಂತ್ರಿಗಳಾದ ಡಾ. ಜಿ.ಪರಮೇಶ್ವರ್, ಆಂಧ್ರಪ್ರದೇಶ ಉಪ ಮುಖ್ಯಮಂತ್ರಿಗಳಾದ ಕೆ.ಪವನ್ ಕಲ್ಯಾಣ್, ತೆಲಂಗಾಣ ಉಪ ಮುಖ್ಯಮಂತ್ರಿಗಳಾದ ಮಲ್ಲು ಭಟ್ಟಿ ವಿಕ್ರಮಾರ್ಕ, ಭಾರತ ಸರ್ಕಾರದ ಕೇಂದ್ರ ಜಲಶಕ್ತಿ ಹಾಗೂ ರೈಲ್ವೆ ಖಾತೆಗಳ ರಾಜ್ಯ ಸಚಿವರಾದ ವಿ. ಸೋಮಣ್ಣ, ಕೇಂದ್ರ ಜಲಶಕ್ತಿ ಖಾತೆ ರಾಜ್ಯ ಸಚಿವರಾದ ರಾಜ ಭೂಷಣ್ ಚೌದರಿ, ಕರ್ನಾಟಕ ವಿಧಾನ ಪರಿಷತ್ತಿನ ಸಭಾಪತಿಗಳಾದ ಬಸವರಾಜ ಎಸ್ ಹೊರಟ್ಟಿ, ಕರ್ನಾಟಕ ಸರ್ಕರದ ಭಾರಿ ಮತ್ತು ಮಧ್ಯಮ ನೀರಾವರಿ ಇಲಾಖೆ ಸಚಿವರಾದ ರಾಮಲಿಂಗಾ ರೆಡ್ಡಿ, ಮಾಜಿ ಮುಖ್ಯಮಂತ್ರಿಗಳು ಹಾಗೂ ಹಾವೇರಿ-ಗದಗ ಲೋಕಸಭಾ ಕ್ಷೇತ್ರ ಸಂಸದರಾದ ಬಸವರಾಜ ಬೊಮ್ಮಾಯಿ, ಆಂಧ್ರಪ್ರದೇಶದ ಜಲಸಂಪನ್ಮೂಲ ಇಲಾಖೆ ಮಾನ್ಯ ಸಚಿವರಾದ ಡಾ. ನಿಮ್ಮಲ ರಾಮನಾಯ್ಡು, ಆಂಧ್ರಪ್ರದೇಶದ ಹಣಕಾಸು, ಯೋಜನೆ, ವಾಣಿಜ್ಯ ತೆರಿಗೆ ಹಾಗೂ ಸಂಸದೀಯ ವ್ಯವಹಾರಗಳ ಇಲಾಖೆ ಸಚಿವರಾದ ಪಯ್ಯವುಲ ಕೇಶವ್, ತೆಲಂಗಾಣದ ನೀರಾವರಿ ಇಲಾಖೆ ಹಾಗೂ ಸಿಎಡಿ ಸಚಿವರಾದ ಎನ್.ಉತ್ತಮ್ ಕುಮಾರ ರೆಡ್ಡಿ, ಸರ್ಕಾರಿ ಮುಖ್ಯ ಸಚೇತಕರು ಹಾಗೂ ಶಾಸಕರಾದ ಸಲೀಂ ಅಹಮದ್, ಕರ್ನಾಟಕ ಪರಿಶಿಷ್ಟ ಪಂಗಡಗಳ ಅಭಿವೃದ್ಧಿ ಸಂಸ್ಥೆಯ ಅಧ್ಯಕ್ಷರು ಹಾಗೂ ರಾಯಚೂರು ಗ್ರಾಮೀಣ ವಿಧಾನಸಭಾ ಕ್ಷೇತ್ರದ ಶಾಸಕರಾದ ಬಸನಗೌಡ ದದ್ದಲ್, ಕರ್ನಾಟಕ ರಾಜ್ಯ ಖಾದಿ ಮತ್ತು ಗ್ರಾಮೋದ್ಯೋಗ ಮಂಡಳಿಯ ಅಧ್ಯಕ್ಷರು ಹಾಗೂ ಮಸ್ಕಿ ವಿಧಾನಸಭಾ ಕ್ಷೇತ್ರದ ಶಾಸಕರಾದ ಆರ್.ಬಸನಗೌಡ ತುರ್ವಿಹಾಳ, ರಾಜ್ಯ ಕೈಗಾರಿಕಾ ಮೂಲ ಸೌಲಭ್ಯ ಅಭಿವೃದ್ಧಿ ನಿಗಮದ ಅಧ್ಯಕ್ಷರು ಹಾಗೂ ಸಿಂಧನೂರು ವಿಧಾನಸಭಾ ಕ್ಷೇತ್ರದ ಶಾಸಕರಾದ ಹಂಪನಗೌಡ ಬಾದರ್ಲಿ, ಕರ್ನಾಟಕ ಖನಿಜ ಅಭಿವೃದ್ಧಿ ನಿಗಮ ನಿಯಮಿತದ ಅಧ್ಯಕ್ಷರು ಹಾಗೂ ರೋಣ ವಿಧಾನಸಭಾ ಕ್ಷೇತ್ರದ ಶಾಸಕರಾದ ಜಿ.ಎಸ್.ಪಾಟೀಲ್, ಕರ್ನಾಟಕ ಕೈಮಗ್ಗ ನಿಗಮ ನಿಯಮಿತದ ಅಧ್ಯಕ್ಷರು ಹಾಗೂ ಕಂಪ್ಲಿ ವಿಧಾನಸಭಾ ಕ್ಷೇತ್ರದ ಶಾಸಕರಾದ ಜೆ.ಎನ್. ಗಣೇಶ್, ಡಾ.ಬಾಬು ಜಗಜೀವನರಾಮ್ ಚರ್ಮ ಕೈಗಾರಿಕಾ ಅಭಿವೃದ್ಧಿ ನಿಗಮ ನಿಯಮಿತದ ಅಧ್ಯಕ್ಷರಾದ ಮುಂಡರಗಿ ನಾಗರಾಜ, ಕರ್ನಾಟಕ ವಿಧಾನಸಭೆಯ ವಿರೋಧ ಪಕ್ಷದ ಮುಖ್ಯ ಸಚೇತಕರು ಹಾಗೂ ಕುಷ್ಟಗಿ ವಿಧಾನಸಭಾ ಕ್ಷೇತ್ರದ ಶಾಸಕರಾದ ದೊಡ್ಡನಗೌಡ ಹನುಮನಗೌಡ ಪಾಟೀಲ್ ಮತ್ತು ಭಾರತ ಸರ್ಕಾರದ ಕೇಂದ್ರ ಜಲ ಆಯೋಗ ಅಧ್ಯಕ್ಷರಾದ ಅನುಪಮ್ ಪ್ರಸಾದ್ ಅವರು ಘನ ಉಪಸ್ಥಿತಿ ವಹಿಸುವರು.
ಕೊಪ್ಪಳ ವಿಧಾನಸಭಾ ಕ್ಷೇತ್ರದ ಶಾಸಕರಾದ ಕೆ. ರಾಘವೇಂದ್ರ ಹಿಟ್ನಾಳ್ ಅವರು ಸಮಾರಂಭದ ಅಧ್ಯಕ್ಷತೆ ವಹಿಸುವರು. ಮುಖ್ಯ ಅತಿಥಿಗಳಾಗಿ ಕೊಪ್ಪಳ ಸಂಸದರಾದ ಕೆ. ರಾಜಶೇಖರ ಹಿಟ್ನಾಳ್, ಬಾಗಲಕೋಟೆ ಸಂಸದರಾದ ಪಿ.ಸಿ. ಗದ್ದಿಗೌಡರ, ಬಳ್ಳಾರಿ ಸಂಸದರಾದ ಈ. ತುಕಾರಾಮ್, ದಾವಣಗೆರೆ ಸಂಸದರಾದ ಡಾ. ಪ್ರಭಾ ಮಲ್ಲಿಕಾರ್ಜುನ್, ರಾಯಚೂರು ಸಂಸದರಾದ ಜಿ.ಕುಮಾರ್ ನಾಯಕ್, ಬಳ್ಳಾರಿ ರಾಜ್ಯಸಭಾ ಸದಸ್ಯರಾದ ಡಾ. ಸೈಯದ್ ನಾಸಿರ್ ಹುಸೇನ್, ಕೊಪ್ಪಳ ಜಿಲ್ಲೆಯ ವ್ಯಾಪ್ತಿಗೆ ಬರುವ ವಿಧಾನಸಭೆ ಶಾಸಕರುಗಳಾದ ಬಸವರಾಜ ರಾಯರೆಡ್ಡಿ, ಶಿವರಾಜ ಎಸ್. ತಂಗಡಗಿ ಹಾಗೂ ಜಿ. ಜನಾರ್ಧನರೆಡ್ಡಿ ಹಾಗೂ ವಿಧಾನಪರಿಷತ್ ಶಾಸಕರುಗಳಾದ ಶಶೀಲ್ ಜಿ. ನಮೋಶಿ, ಡಾ. ಚಂದ್ರಶೇಖರ ಬಿ. ಪಾಟೀಲ್, ಶರಣಗೌಡ ಎ. ಪಾಟೀಲ್ ಬಯ್ಯಾಪುರ ಹಾಗೂ ಹೇಮಲತಾ ಪಿ. ನಾಯಕ್, ಮುನಿರಾಬಾದ್ ತುಂಗಾಭದ್ರಾ ಯೋಜನೆ (ಕಾಡಾ) ಅಚ್ಚುಕಟ್ಟು ಪ್ರದೇಶಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷರಾದ ಹಸನ್‌ಸಾಬ್ ನಬಿಸಾಬ್ ದೋಟಿಹಾಳ, ಕೊಪ್ಪಳ ಜಿಲ್ಲಾ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರದ ಅಧ್ಯಕ್ಷರಾದ ರೆಡ್ಡಿ ಶ್ರೀನಿವಾಸ ಅವರು ಪಾಲ್ಗೊಳ್ಳುವರು.
ಅದೇ ರೀತಿ ವಿಜಯನಗರ ಜಿಲ್ಲೆಯ ವ್ಯಾಪ್ತಿಗೆ ಬರುವ ವಿಧಾನಸಭೆ ಶಾಸಕರುಗಳಾದ ಹೆಚ್.ಆರ್. ಗವಿಯಪ್ಪ, ಕೆ.ನೇಮಿರಾಜ್ ನಾಯ್ಕ, ಡಾ. ಶ್ರೀನಿವಾಸ್ ಎನ್.ಟಿ., ಎಲ್.ಕೃಷ್ಣ ನಾಯಕ್, ಎಂ.ಪಿ. ಲತಾ ಮಲ್ಲಿಕಾರ್ಜುನ, ಬಿ.ದೇವೇಂದ್ರಪ್ಪ, ವಿಧಾನಪರಿಷತ್ ಶಾಸಕರದ ವೈ.ಎಂ. ಸತೀಶ್, ವಿಜಯನಗರ ಜಿಲ್ಲಾ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರದ ಅಧ್ಯಕ್ಷರಾದ ಕೆ. ಶಿವಮೂರ್ತಿ ಅವರು ಭಾಗವಹಿಸುವರು.
ಬಳ್ಳಾರಿ ಜಿಲ್ಲೆಯ ವ್ಯಾಪ್ತಿಗೆ ಬರುವ ವಿಧಾನಸಭೆ ಶಾಸಕರುಗಳಾದ ಬಿ.ನಾಗೇಂದ್ರ, ಬಿ.ಎಂ. ನಾಗರಾಜ, ನಾರಾ ಭರತ್ ರೆಡ್ಡಿ ಹಾಗೂ ಈ.ಅನ್ನಪೂರ್ಣ ತುಕಾರಾಮ್, ಬಳ್ಳಾರಿ ಜಿಲ್ಲಾ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರದ ಅಧ್ಯಕ್ಷರಾದ ಕೆ.ಇ. ಚಿದಾನಂದಪ್ಪ ಅವರು ಪಾಲ್ಗೊಳ್ಳುವರು.
ರಾಯಚೂರು ಜಿಲ್ಲೆಯ ವ್ಯಾಪ್ತಿಗೆ ಬರುವ ವಿಧಾನಸಭೆ ಶಾಸಕರುಗಳಾದ ಡಾ. ಎಸ್.ಶಿವರಾಜ್ ಪಾಟೀಲ್, ಜಿ.ಹಂಪಯ್ಯ ನಾಯಕ್ ಬಲ್ಲಟಗಿ, ಮಾನಪ್ಪ ಡಿ. ವಜ್ಜಲ್, ಕರೆಮ್ಮ ಜಿ. ನಾಯಕ, ವಿಧಾನಪರಿಷತ್ ಶಾಸಕರುಗಳಾದ ಎ.ವಸಂತ ಕುಮಾರ, ಬಸನಗೌಡ ಬಾದರ್ಲಿ ಹಾಗೂ ಎನ್.ಎಸ್. ಬೋಸರಾಜು, ರಾಯಚೂರು ಜಿಲ್ಲಾ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರದ ಅಧ್ಯಕ್ಷರಾದ ಪಾಮಯ್ಯ ಮುರಾರಿ ಅವರು ಭಾಗವಹಿಸುವರು.
ಗದಗ ಜಿಲ್ಲೆಯ ವ್ಯಾಪ್ತಿಗೆ ಬರುವ ವಿಧಾನಸಭೆ ಶಾಸಕರುಗಳಾದ ಹೆಚ್.ಕೆ. ಪಾಟೀಲ, ಸಿ.ಸಿ. ಪಾಟೀಲ್, ಡಾ. ಚಂದ್ರು ಲಮಾಣಿ, ವಿಧಾನಪರಿಷತ್ ಶಾಸಕರುಗಲಾದ ಪ್ರದೀಪ್ ಶೆಟ್ಟರ್ ಮತ್ತು ಎಸ್.ವಿ. ಸಂಕನೂರ, ಗದಗ ಜಿಲ್ಲಾ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರ ಅಧ್ಯಕ್ಷರಾದ ಬಿ.ಬಿ. ಅಸೂಟಿ ಅವರು ಪಾಲ್ಗೊಳ್ಳುವರು.
ವಿಶೇಷ ಆಹ್ವಾನಿತರಾಗಿ ಕರ್ನಾಟಕ ಸರ್ಕಾರದ ಮುಖ್ಯ ಕಾರ್ಯದರ್ಶಿಗಳಾದ ಡಾ. ಶಾಲಿನಿ ರಜನೀಶ್, ಆಂಧ್ರಪ್ರದೇಶ ಸರ್ಕಾರದ ಮುಖ್ಯ ಕಾರ್ಯದರ್ಶಿಗಳಾದ ಸಾಯಿ ಪ್ರಸಾದ್, ತೆಲಂಗಾಣ ಸರ್ಕಾರದ ಮುಖ್ಯ ಕಾರ್ಯದರ್ಶಿಗಳಾದ ಕೂಡ್ಲಿಗಿ ರಾಮಕೃಷ್ಣ ರಾವ್, ಭಾರತ ಸರ್ಕಾರದ ಕೇಂದ್ರ ಜಲಶಕ್ತಿ ಮಂತ್ರಾಲಯ ಜಲಸಂಪನ್ಮೂಲ, ನದಿ ಅಭಿವೃದ್ಧಿ ಮತ್ತು ಗಂಗಾ ಪುನರುಜೀವನ ಇಲಾಖೆಯ ಕಾರ್ಯದರ್ಶಿಗಳಾದ ವಿ.ಎಲ್. ಕಾಂತಾ ರಾವ್, ಹಣಕಾಸು ಇಲಾಖೆ ಸರ್ಕಾರದ ಅಪರ ಮುಖ್ಯ ಕಾರ್ಯದರ್ಶಿಗಳು ಹಾಗೂ ರಾಯಚೂರು ಜಿಲ್ಲೆ ಉಸ್ತುವಾರಿ ಕಾರ್ಯದರ್ಶಿಗಳಾದ ರಿತೇಶ್ ಕುಮಾರ್ ಸಿಂಗ್, ಆಂಧ್ರಪ್ರದೇಶ ಸರ್ಕಾರದ ಜಲಸಂಪನ್ಮೂಲ ಇಲಾಖೆಯ ವಿಶೇಷ ಮುಖ್ಯ ಕಾರ್ಯದರ್ಶಿಗಳಾದ ಶಶಿ ಭೂಷಣ್ ಕುಮಾರ್, ತೆಲಂಗಾಣ ಸರ್ಕಾರದ (ಐ & ಸಿ.ಎ.ಡಿ) ಕಾರ್ಯದರ್ಶಿಗಳಾದ ಇ, ಶ್ರೀಧರ, ವಸತಿ ಹಾಗೂ ಸಮಾಜ ಕಲ್ಯಾಣ ಇಲಾಖೆಯ ಸರ್ಕಾರದ ಕಾರ್ಯದರ್ಶಿಗಳು ಹಾಗೂ ಕೊಪ್ಪಳ ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿಗಳಾದ ಮೋಹನ್ ರಾಜ್ ಕೆ.ಪಿ., ಪ್ರವಾಸೋದ್ಯಮ ಇಲಾಖೆಯ ಸರ್ಕಾರದ ಕಾರ್ಯದರ್ಶಿಗಳು ಹಾಗೂ ಬಳ್ಳಾರಿ ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿಗಳಾದ ಡಾ. ತ್ರಿಲೋಕ್ ಚಂದ್ರ ಕೆ.ವಿ., ಸಿಬ್ಬಂದಿ ಮತ್ತು ಅಡಳಿತ ಸುಧಾರಣೆ ಇಲಾಖೆ ಸರ್ಕಾರದ ಕಾರ್ಯದರ್ಶಿಗಳು ಹಾಗೂ ವಿಜಯನಗರ ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿಗಳಾದ ಡಾ. ಕೆ.ಜಿ. ಜಗದೀಶ, ಕಲಬುರಗಿ ವಿಭಾಗ ಪ್ರಾದೇಶಿಕ ಆಯುಕ್ತರಾದ ಜಹೀರಾ ನಸೀಂ, ಬಳ್ಳಾರಿ ಜಿಲ್ಲಾಧಿಕಾರಿಗಳಾದ ನಾಗೇಂದ್ರ ಪ್ರಸಾದ್ ಕೆ., ವಿಜಯನಗರ ಜಿಲ್ಲಾಧಿಕಾರಿಗಳಾದ ಕವಿತಾ ಎಸ್. ಮನ್ನಿಕೇರಿ, ರಾಯಚೂರು ಜಿಲ್ಲಾಧಿಕಾರಿಗಳಾದ ಪೂವಿತ ಎಸ್., ಕೊಪ್ಪಳ ಜಿಲ್ಲಾಧಿಕಾರಿಗಳಾದ ಡಾ. ಸುರೇಶ್ ಬಿ. ಇಟ್ನಾಳ್, ರಾಯಚೂರು ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಗಳಾದ ಈಶ್ವರ್ ಕಾಂದೂ, ಕೊಪ್ಪಳ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಗಳಾದ ವರ್ಣಿತ್ ನೇಗಿ, ವಿಜಯನಗರ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಗಳಾದ ನೋಂಗ್ಜಾಯ್ ಮೊಹಮದ್ ಅಲಿ ಅಕ್ರಮ್ ಷಾ, ಬಳ್ಳಾರಿ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಗಳಾದ ಮುಹಮ್ಮದ್ ಹಾರಿಸ್ ಸುಮೇರ್, ಬಳ್ಳಾರಿ ವಲಯದ ಪೊಲೀಸ್ ಮಹಾ ನಿರೀಕ್ಷಕರಾದ ಡಾ. ಪಿ.ಎಸ್ ಹರ್ಷ, ಬಳ್ಳಾರಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳಾದ ಡಾ. ಸುಮನ್ ಡಿ. ಪೆನ್ನೇಕರ್, ರಾಯಚೂರು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳಾದ ಅರುಣಾಂಶು ಗಿರಿ, ಕೊಪ್ಪಳ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳಾದ ಡಾ. ರಾಮ್. ಎಲ್. ಅರಸಿದ್ದಿ, ವಿಜಯನಗರ ಜಿಲ್ಲಾ ಪೋಲೀಸ್ ವರಿಷ್ಠಾಧಿಕಾರಿಗಳಾದ ಜಾಹ್ನವಿ ಎಸ್., ತುಂಗಭದ್ರಾ ಮಂಡಳಿಯ ಅಧ್ಯಕ್ಷರಾದ ಎಸ್.ಎನ್ ಪಾಂಡೆ, ಆಂಧ್ರಪ್ರದೇಶ ಸರ್ಕಾರದ ಜಲಸಂಪನ್ಮೂಲ ಇಲಾಖೆ ಸಲಹೆಗಾರರಾದ ಎಮ್. ವೆಂಕಟೇಶ್ವರ ರಾವ್, ನವದೆಹಲಿಯ ಕೇಂದ್ರ ಜಲ ಶಕ್ತಿ ಸಚಿವಾಲಯದ ಜಂಟಿ ಕಾರ್ಯದರ್ಶಿಗಳು & ಹಣಕಾಸು ಸಲಹೆಗಾರರಾದ ಗೌರವ್ ಮಸಲ್ದಾನ್, ಆಂಧ್ರಪ್ರದೇಶ ಸರ್ಕಾರದ ಜಲಸಂಪನ್ಮೂಲ ಇಲಾಖೆಯ ಪ್ರಧಾನ ಇಂಜಿನಿಯರ್ (ನೀರಾವರಿ) ಕೆ. ನರಸಿಂಹಮೂರ್ತಿ, ಆಂಧ್ರಪ್ರದೇಶ ಸರ್ಕಾರದ ಕೇಂದ್ರೀಯ ವಿನ್ಯಾಸ ಸಂಸ್ಥೆಯ ಮುಖ್ಯ ಇಂಜಿನಿಯರ್ ಎ. ವಿಜಯ ಭಾಸ್ಕರ್, ಆಂಧ್ರಪ್ರದೇಶ ಸರ್ಕಾರದ ಪ್ರಧಾನ ಇಂಜಿನಿಯರ್ (ಆಡಳಿತ) ಎಮ್. ವರಪ್ರಸಾದ್, ಅನಂತಪುರ (ಯೋಜನೆ) ಮುಖ್ಯ ಇಂಜಿನಿಯರ್ ಕೆ. ನಾಗರಾಜ, ಕರ್ನೂಲ್ (ಯೋಜನೆ) ಮುಖ್ಯ ಇಂಜಿನಿಯರ್ ಕಬೀರ್ ಬಾಷಾ ಶೇಖ್, ತೆಲಂಗಾಣ ಸರ್ಕಾರದ ಪ್ರಧಾನ ಅಭಿಯಂತರರು (ಐ&ಸಿ.ಎ.ಡಿ) ಓ.ವಿ. ರಮೇಶ ಬಾಬು ಮತ್ತು ಜಲಾಶಯಗಳ ಗೇಟ್ ಪರಿಣಿತರು ಹಾಗೂ ಆಂಧ್ರಪ್ರದೇಶ ಸರ್ಕಾರದ ಸಲಹೆಗಾರರಾದ ಕನ್ನಯ್ಯ ನಾಯ್ಡು ಅವರು ಪಾಲ್ಗೊಳ್ಳುವರು.
ಕಾರ್ಯಕ್ರಮದಲ್ಲಿ ಇಂಧನ ಹಾಗೂ ಜಲಸಂಪನ್ಮೂಲ ಇಲಾಖೆ ಸರ್ಕಾರದ ಅಪರ ಮುಖ್ಯ ಕಾರ್ಯದರ್ಶಿಗಳಾದ ಗೌರವ ಗುಪ್ತ, ಜಲಸಂಪನ್ಮೂಲ ಇಲಾಖೆಯ ಕಾರ್ಯದರ್ಶಿಗಳಾದ ಕೃಷ್ಣಮೂರ್ತಿ ಬಿ. ಕುಲಕರ್ಣಿ, ಕರ್ನಾಟಕ ನೀರಾವರಿ ನಿಗಮ ನಿಯಮಿತದ ವ್ಯವಸ್ಥಾಪಕ ನಿರ್ದೇಶಕರಾದ ರಾಜೇಶ್ ಅಮ್ಮಿನಭಾವಿ, ತುಂಗಭದ್ರಾ ಮಂಡಳಿಯ ಕಾರ್ಯದರ್ಶಿಗಳಾದ ಓ.ಆರ್.ಕೆ ರೆಡ್ಡಿ, ಮುನಿರಾಬಾದ್ ಅಚ್ಚುಕಟ್ಟು ಪ್ರದೇಶಾಭಿವೃದ್ಧಿ ಪ್ರಾಧಿಕಾರ ತುಂಗಾಭದ್ರಾ ಯೋಜನೆಯ ಆಡಳಿತಾಧಿಕಾರಿಗಳಾದ ಸೈಯದ್ ಇಸಾಕ್ ಅಫ್ಸರ್, ಮುನಿರಾಬಾದ್ ನೀರಾವರಿ ಕೇಂದ್ರ ವಲಯದ ಮುಖ್ಯ ಅಭಿಯಂತರರಾದ ಶ್ರೀನಿವಾಸ ಬಿ. ಮಲ್ಲಿಗವಾಡ, ಯರಮರಸ್ ತುಂಗಭದ್ರಾ ಕಾಲುವೆ ನಿರ್ಮಾಣ ವೃತ್ತದ ಅಧೀಕ್ಷಕ ಅಭಿಯಂತರರಾದ ಸತ್ಯನಾರಾಯಣ ಶೆಟ್ಟಿ ಮತ್ತು ಹೊಸಪೇಟೆ ತುಂಗಭದ್ರಾ ಮಂಡಳಿಯ ಅಧೀಕ್ಷಕ ಅಭಿಯಂತರರಾದ ನಾರಾಯಣ್ ನಾಯಕ್ ಅವರು ಉಪಸ್ಥಿತರಿರುವರು ಎಂದು ಪ್ರಕಟಣೆ ತಿಳಿಸಿದೆ.
