
Koppal district tour of Andhra Pradesh Chief Minister N. Chandrababu Naidu today

ಇಂದು ಆಂಧ್ರಪ್ರದೇಶ ಮುಖ್ಯಮಂತ್ರಿ ಎನ್.ಚಂದ್ರಬಾಬು ನಾಯ್ಡು ಅವರ ಕೊಪ್ಪಳ ಜಿಲ್ಲಾ ಪ್ರವಾಸ

ಕೊಪ್ಪಳ ಜೂನ್ 24 (ಕರ್ನಾಟಕ ವಾರ್ತೆ): ಆಂಧ್ರಪ್ರದೇಶದ ಸನ್ಮಾನ್ಯ ಮುಖ್ಯಮಂತ್ರಿಗಳಾದ ಎನ್.ಚಂದ್ರಬಾಬು ನಾಯ್ಡು ಅವರು ಜೂನ್ 25ರಂದು ಕೊಪ್ಪಳ ಜಿಲ್ಲೆಯಲ್ಲಿ ಪ್ರವಾಸ ಕಾರ್ಯಕ್ರಮವನ್ನು ಹಮ್ಮಿಕೊಂಡಿದ್ದಾರೆ.
ಆAಧ್ರಪ್ರದೇಶ ಸಿಎಂ ಅವರು ಜೂ. 25ರಂದು ಬೆಳಗ್ಗೆ 9 ಗಂಟೆಗೆ ಕರ್ನೂಲ್ ಜಿಲ್ಲೆಯ ಜೊನ್ನಗಿರಿ ಗ್ರಾಮದ ಹೆಲಿಪ್ಯಾಡನಿಂದ ನಿರ್ಗಮಿಸಿ ಹೆಲಿಕಾಪ್ಟರ್ ಮೂಲಕ ಕೊಪ್ಪಳ ಜಿಲ್ಲೆಯ ಮುನಿರಾಬಾದ್ ಗ್ರಾಮದ ಇಂಡಿಯನ್ ರಿಸರ್ವ್ ಬೆಟಾಲಿಯನ್ ಮೈದಾನ, ಹೆಲಿಪ್ಯಾಡ್‌ಗೆ ಆಗಮಿಸುವರು. ಬಳಿಕ ಅಲ್ಲಿಂದ ಬೆಳಗ್ಗೆ 9.45ಕ್ಕೆ ನಿರ್ಗಮಿಸಿ ರಸ್ತೆಯ ಮೂಲಕ ಬೆಳಗ್ಗೆ 10 ಗಂಟೆಗೆ ತುಂಗಭದ್ರಾ ಅಣೆಕಟ್ಟಿಗೆ ಭೇಟಿ ನೀಡಿ, ನಂತರ ಮಧ್ಯಾಹ್ನ 10 ರಿಂದ ಮಧ್ಯಾಹ್ನ 2 ಗಂಟೆಯವರೆಗೆ ನಡೆಯುವ ತುಂಗಭದ್ರಾ ಅಣೆಕಟ್ಟು ಹೊಸ ಗೇಟುಗಳ ಉದ್ಘಾಟನಾ ಕಾರ್ಯಕ್ರಮದಲ್ಲಿ ಭಾಗವಹಿಸುವವರು. ನಂತರ ಮುನಿರಾಬಾದ್ ಗ್ರಾಮದ ಇಂಡಿಯನ್ ರಿಸರ್ವ್ ಬೆಟಾಲಿಯನ್ ಮೈದಾನದ ಹೆಲಿಪ್ಯಾಡಗೆ ತೆರಳಿ, ಅಲ್ಲಿಂದ ಅಂದು ಮಧ್ಯಾಹ್ನ ಮಧ್ಯಾಹ್ನ 2:15ಕ್ಕೆ ಹೆಲಿಕಾಪ್ಟರ್ ಮೂಲಕ ಕರ್ನೂಲ್ ಜಿಲ್ಲೆಯ ಕಡೆಗೆ ಪ್ರಯಾಣ ಬೆಳೆಸುವರು ಎಂದು ಆಂಧ್ರಪ್ರದೇಶ ಮುಖ್ಯಮಂತ್ರಿಗಳ ಆಪ್ತ ಕಾರ್ಯದರ್ಶಿ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
