ಅಲ್ಪಸಂಖ್ಯಾತರ ವಿದ್ಯಾರ್ಥಿಗಳಿಗೆ ಮೆಟ್ರಿಕ್ ನಂತರದ ಶುಲ್ಕ ಮರುಪಾವತಿ: ಅರ್ಜಿ ಆಹ್ವಾನ

H.Mallikarjun
H.Mallikarjun - Kalyanasiri
2 Min Read

Post-matric fee reimbursement for minority students: Applications invited

ಅಲ್ಪಸಂಖ್ಯಾತರ ವಿದ್ಯಾರ್ಥಿಗಳಿಗೆ ಮೆಟ್ರಿಕ್ ನಂತರದ ಶುಲ್ಕ ಮರುಪಾವತಿ: ಅರ್ಜಿ ಆಹ್ವಾನ


ಕೊಪ್ಪಳ ಜುಲೈ 03 (ಕರ್ನಾಟಕ ವಾರ್ತೆ): 2026-27ನೇ ಸಾಲಿನ ಮೆಟ್ರಿಕ್ ನಂತರದ ಕೋರ್ಸುಗಳಲ್ಲಿ ವ್ಯಾಸಂಗ ಮಾಡುತ್ತಿರುವ ಅಲ್ಪಸಂಖ್ಯಾತರ ಸಮುದಾಯದ ವಿದ್ಯಾರ್ಥಿಗಳಿಗೆ ಶುಲ್ಕ ಮರುಪಾವತಿ ಯೋಜನೆಯಡಿ ಆನ್‌ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ.
2026-27ನೇ ಸಾಲಿನ ಮೆಟ್ರಿಕ್ ನಂತರದ ಕೋರ್ಸುಗಳಾದ ಪಿ.ಯು.ಸಿ, ಡಿಪ್ಲೋಮಾ, ಐ.ಟಿ.ಐ., ಪದವಿ ಮತ್ತು ಸ್ನಾತಕೋತ್ತರ ಪದವಿಯಲ್ಲಿ ವ್ಯಾಸಂಗ ಮಾಡುತ್ತಿರುವ ಅಲ್ಪಸಂಖ್ಯಾತರ ಸಮುದಾಯದ ಮುಸ್ಲಿಂ, ಕ್ರಿಶ್ಚಿಯನ್, ಜೈನ್, ಬೌದ್ಧ, ಸಿಖ್, ಪಾರ್ಸಿ ವಿದ್ಯಾರ್ಥಿಗಳಿಗೆ ಶುಲ್ಕ ಮರುಪಾವತಿ ಯೋಜನೆಯಡಿ ಅರ್ಜಿ ಸಲ್ಲಿಸುವ ಪ್ರಕ್ರಿಯೆ ಈಗಾಗಲೇ ಪ್ರಾರಂಭವಾಗಿದ್ದು, ವಿದ್ಯಾರ್ಥಿಗಳು ಪೋರ್ಟಲ್ https://ssp.karnataka.gov.in ನಲ್ಲಿ ಆನ್‌ಲೈನ್ ಮೂಲಕ ಸೆಪ್ಟೆಂಬರ್ 30 ರೊಳಗೆ ಅರ್ಜಿ ಸಲ್ಲಿಸಬೇಕು.

ಜಾಹೀರಾತು

ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಕರ್ನಾಟಕ ರಾಜ್ಯಕ್ಕೆ ಸೇರಿದವರಾಗಿರಬೇಕು. ವಿದ್ಯಾರ್ಥಿಗಳು ಅಲ್ಪಸಂಖ್ಯಾತ ಸಮುದಾಯ (ಮುಸ್ಲಿಂ, ಕ್ರಿಶ್ಚಿಯನ್, ಸಿಖ್, ಜೈನ್, ಬೌದ್ಧ ಮತ್ತು ಪಾರ್ಸಿ). ಜನಾಂಗಕ್ಕೆ ಸೇರಿದವರಾಗಿರಬೇಕು.  ಕಳೆದ ಸೆಮಿಸ್ಟರ್/ವಾರ್ಷಿಕ ಪರೀಕ್ಷೆಯಲ್ಲಿ  ಕನಿಷ್ಠ ಶೇ.50 ಅಂಕಗಳನ್ನು ಪಡೆದಿರಬೇಕು. ಮೆಟ್ರಿಕ್ ನಂತರದ ಕೋರ್ಸುಗಳ ಶುಲ್ಕ ಮರುಪಾವತಿ ಯೋಜನೆಗಾಗಿ ಕುಟುಂಬದ ವಾರ್ಷಿಕ ಆದಾಯವು  ರೂ.2 ಲಕ್ಷಗಳನ್ನು  ಮೀರಿರಬಾರದು. ವೃತ್ತಿಪರ ಹಾಗೂ ತಾಂತ್ರಿಕ ಕೋರ್ಸುಗಳಿಗೆ (ಮೆರಿಟ್-ಕಮ್-ಮೀನ್ಸ್) ಶುಲ್ಕ ಮರುಪಾವತಿ ಯೊಜನೆಗಾಗಿ ಕುಟುಂಬದ ವಾರ್ಷಿಕ ಆದಾಯವು  ರೂ. 2.5 ಲಕ್ಷ ಮೀರಿರಬಾರದು. ವಿದ್ಯಾರ್ಥಿಗಳು ಅರ್ಜಿ ಸಲ್ಲಿಸುವ ಪೂರ್ವದಲ್ಲಿ ವಿದ್ಯಾರ್ಥಿಗಳ ಬ್ಯಾಂಕ್ ಖಾತೆಗೆ ಆಧಾರ್ ಜೋಡಣೆಯಾಗಿ/ ಎನ್.ಪಿ.ಸಿ.ಐ ಮ್ಯಾಪಿಂಗ್ ಆ್ಯಕ್ಟಿವ್ ಆಗಿರುವ ಬಗ್ಗೆ ಖಾತ್ರಿ ಪಡಿಸಿಕೊಳ್ಳಬೇಕು. ಶುಲ್ಕ ಮರುಪಾವತಿಯ  ಪ್ರಕ್ರಿಯೆಯು ಸರ್ಕಾರದಿಂದ ಕಾಲಕಾಲಕ್ಕೆ ಹೊರಡಿಸಲಾಗುವ ಸರ್ಕಾರದ ಆದೇಶಗಳು ಹಾಗೂ ಮಾರ್ಗಸೂಚಿಗಳಿಗೆ ಒಳಪಟ್ಟಿರುತ್ತದೆ.
ಹೆಚ್ಚಿನ ಮಾಹಿತಿಗಾಗಿ ಅಲ್ಪಸಂಖ್ಯಾತರ ನಿರ್ದೇಶನಾಲಯದ ಅಧಿಕೃತ ವೆಬ್‌ಸೈಟ್  https://dom.karnataka.gov.in ಅನ್ನು ವೀಕ್ಷಿಸಬಹುದು ಅಥವಾ ಕೊಪ್ಪಳ ಜಿಲ್ಲಾ ಅಲ್ಪಸಂಖ್ಯಾತರ ಕಛೇರಿ ಹಾಗೂ ಜಿಲ್ಲಾ ಅಲ್ಪಸಂಖ್ಯಾತರ ಮಾಹಿತಿ ಕೇಂದ್ರ, ಕೊಪ್ಪಳ ಮೌಲಾನಾ ಅಜಾದ್ ಭವನ ಹೊಸಪೇಟೆ ರಸ್ತೆ ಕೊಪ್ಪಳ: 08539-225070, ತಾಲ್ಲೂಕು ಅಲ್ಪಸಂಖ್ಯಾತರ ಮಾಹಿತಿ ಕೇಂದ್ರ, ಕುಷ್ಟಗಿ ಮೊ.ಸಂ: 8747861392, ಇವರನ್ನು ಸಂಪರ್ಕಿಸಬಹುದು ಎಂದು ಕೊಪ್ಪಳ ತಾಲೂಕು ಅಲ್ಪಸಂಖ್ಯಾತರ ವಿಸ್ತರಣಾಧಿಕಾರಿಗಳಾದ ರವಿ ಪೂಜಾರ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Total Views: 0
Share This Article