ವಿಶೇಷ ಮತದಾರರ ಪಟ್ಟಿ ಪರಿಷ್ಕರಣೆ ಕುರಿತು ಡಾ. ಯತೀಂದ್ರ ಸಿದ್ದರಾಮಯ್ಯ ಅವರ ನೇತೃತ್ವದಲ್ಲಿ ಬೂತ್ ಮಟ್ಟದ ಸಭೆ

H.Mallikarjun
H.Mallikarjun - Kalyanasiri
1 Min Read

Booth-level meeting regarding the special revision of the electoral roll, led by Dr. Yathindra Siddaramaiah.

ವಿಶೇಷ ಮತದಾರರ ಪಟ್ಟಿ ಪರಿಷ್ಕರಣೆ ಕುರಿತು ಡಾ. ಯತೀಂದ್ರ ಸಿದ್ದರಾಮಯ್ಯ ಅವರ ನೇತೃತ್ವದಲ್ಲಿ ಬೂತ್ ಮಟ್ಟದ ಸಭೆ

ಜಾಹೀರಾತು

ಮೈಸೂರು, ಜುಲೈ 7: ಮೈಸೂರು ಜಿಲ್ಲೆಯ ವರುಣ ವಿಧಾನಸಭಾ ಕ್ಷೇತ್ರ ವ್ಯಾಪ್ತಿಗೆ ಒಳಪಡುವ ಬಿಳಿಗೆರೆ, ವರುಣ ಹಾಗೂ ತಿ. ನರಸೀಪುರ ಪುರಸಭೆ ವ್ಯಾಪ್ತಿಯಲ್ಲಿ ಇಂದು ವಿಶೇಷ ಮತದಾರರ ಪಟ್ಟಿ ಪರಿಷ್ಕರಣೆ (SIR) ಕುರಿತು ಬೂತ್ ಮಟ್ಟದ ಸಭೆ ನಡೆಯಿತು.

ನಗರಾಭಿವೃದ್ಧಿ ಸಚಿವರಾದ ಡಾ. ಯತೀಂದ್ರ ಸಿದ್ದರಾಮಯ್ಯ ಅವರ ನೇತೃತ್ವದಲ್ಲಿ ನಡೆದ ಸಭೆಯಲ್ಲಿ ವಿಶೇಷ ಮತದಾರರ ಪಟ್ಟಿ ಪರಿಷ್ಕರಣೆ ಪ್ರಕ್ರಿಯೆ ಕುರಿತು ಪಕ್ಷದ ಕಾರ್ಯಕರ್ತರಿಗೆ ಸಮಗ್ರ ಮಾಹಿತಿ ನೀಡಲಾಯಿತು.

ಸಭೆಯನ್ನು ಉದ್ದೇಶಿಸಿ ಮಾತನಾಡಿದ ಸಚಿವರಾದ ಡಾ. ಯತೀಂದ್ರ ಸಿದ್ದರಾಮಯ್ಯ ಅವರು, ಮತದಾರರ ಪಟ್ಟಿಯಲ್ಲಿ ಅರ್ಹ ಮತದಾರರ ಹೆಸರು ಸೇರ್ಪಡೆ, ತಿದ್ದುಪಡಿ ಹಾಗೂ ಅಗತ್ಯ ಬದಲಾವಣೆಗಳನ್ನು ನಿಯಮಾನುಸಾರ ಮಾಡಿಸಿಕೊಳ್ಳಲು ಸಾರ್ವಜನಿಕರಿಗೆ ಸೂಕ್ತ ಮಾರ್ಗದರ್ಶನ ಮತ್ತು ಅರಿವು ಮೂಡಿಸುವಂತೆ ಕಾರ್ಯಕರ್ತರು ಹಾಗೂ ಪದಾಧಿಕಾರಿಗಳಿಗೆ ಸೂಚಿಸಿದರು.

ಅಲ್ಲದೆ, ವಿಶೇಷ ಮತದಾರರ ಪಟ್ಟಿ ಪರಿಷ್ಕರಣೆ ಪ್ರಕ್ರಿಯೆಯಲ್ಲಿ ಪಕ್ಷದ ಕಾರ್ಯಕರ್ತರು ಜನರೊಂದಿಗೆ ನಿರಂತರ ಸಂಪರ್ಕದಲ್ಲಿದ್ದು, ಪ್ರತಿಯೊಬ್ಬ ಅರ್ಹ ಮತದಾರರು ತಮ್ಮ ಮತದಾನದ ಹಕ್ಕನ್ನು ಸಮರ್ಪಕವಾಗಿ ಚಲಾಯಿಸಲು ಅಗತ್ಯ ಕ್ರಮಗಳನ್ನು ಕೈಗೊಳ್ಳುವಂತೆ ಕರೆ ನೀಡಿದರು.

Total Views: 0
Share This Article