Special prayers offered at Kedarnath for Minister Satish Jarkiholi to become the next Chief Minister
ಕೇದಾರನಾಥದಲ್ಲಿ ಸಚಿವ ಸತೀಶ್ ಜಾರಕಿಹೊಳಿ ಮುಂದಿನ ಮುಖ್ಯಮಂತ್ರಿ ಆಗಲಿ ಎಂದು ವಿಶೇಷ ಪೂಜೆ
ಜಾಹೀರಾತು

ಚಿಕ್ಕೋಡಿ, (ಕೇದಾರನಾಥ) : ಕರ್ನಾಟಕದ ಲೋಕೋಪಯೋಗಿ ಇಲಾಖೆ ಸಚಿವ ಹಾಗೂ ಬೆಳಗಾವಿ ಜಿಲ್ಲಾ ಉಸ್ತುವಾರಿ ಸಚಿವ ಸತೀಶ್ ಜಾರಕಿಹೊಳಿ ಅವರು ರಾಜ್ಯದ ಮುಂದಿನ ಮುಖ್ಯಮಂತ್ರಿ ಆಗಲಿ ಎಂದು ಹಾರೈಸಿ ಅವರ ಅಭಿಮಾನಿಗಳು ಉತ್ತರಾಖಂಡದ ಪವಿತ್ರ ಕೇದಾರನಾಥ ದೇವಸ್ಥಾನದಲ್ಲಿ ವಿಶೇಷ ಪೂಜೆ ಸಲ್ಲಿಸಿದರು.
ರಾಜ್ಯದ ಅಭಿವೃದ್ಧಿ, ರೈತರ ಕಲ್ಯಾಣ ಹಾಗೂ ಜನಸೇವೆಯ ಕಾರ್ಯಗಳು ಇನ್ನಷ್ಟು ಯಶಸ್ವಿಯಾಗಲಿ ಮತ್ತು ಸತೀಶ್ ಜಾರಕಿಹೊಳಿ ಅವರಿಗೆ ಇನ್ನಷ್ಟು ಉನ್ನತ ರಾಜಕೀಯ ಜವಾಬ್ದಾರಿಗಳು ದೊರಕಲಿ ಎಂದು ದೇವರಲ್ಲಿ ಪ್ರಾರ್ಥನೆ ಸಲ್ಲಿಸಿರುವುದಾಗಿ ಅಭಿಮಾನಿಗಳು ತಿಳಿಸಿದ್ದಾರೆ.
ಈ ಸಂದರ್ಭದಲ್ಲಿ ಅಭಿಮಾನಿಗಳು ವಿಶೇಷ ಪೂಜೆ, ಅರ್ಚನೆ ನಡೆಸಿ ರಾಜ್ಯದ ಸಮೃದ್ಧಿ, ಉತ್ತಮ ಮಳೆ ಹಾಗೂ ಜನರ ಸುಖ-ಶಾಂತಿಗಾಗಿ ಪ್ರಾರ್ಥಿಸಿದರು. ಈ ಪೂಜೆಯಲ್ಲಿ ಹಲವಾರು ಬೆಂಬಲಿಗರು ಮತ್ತು ಅಭಿಮಾನಿಗಳು ಭಾಗವಹಿಸಿದ್ದರು.
Total Views:
0


