ಎಸ್‌ಐಆರ್: ಕೊಪ್ಪಳ ಜಿಲ್ಲೆಯಲ್ಲಿ ಜುಲೈ 27 ರವರೆಗೆ 10,31,249 ಗಣತಿ ನಮೂನೆಗಳ ಡಿಜಿಟಲೀಕರಣ

H.Mallikarjun
H.Mallikarjun - Kalyanasiri
1 Min Read
ಜಾಹೀರಾತು
ಎಸ್‌ಐಆರ್: ಕೊಪ್ಪಳ ಜಿಲ್ಲೆಯಲ್ಲಿ ಜುಲೈ 27 ರವರೆಗೆ 10,31,249 ಗಣತಿ ನಮೂನೆಗಳ ಡಿಜಿಟಲೀಕರಣ
SIR: Digitization of 10,31,249 census samples in Koppal district until July 27
ಕೊಪ್ಪಳ ಜುಲೈ 27, (ಕರ್ನಾಟಕ ವಾರ್ತೆ): ಕೊಪ್ಪಳ ಜಿಲ್ಲೆಯಲ್ಲಿ ಮತದಾರರ ಪಟ್ಟಿಗಳ ವಿಶೇಷ ಸಮಗ್ರ ಪರಿಷ್ಕರಣೆ-2026 ಕಾರ್ಯ ಪ್ರಗತಿಯಲ್ಲಿದ್ದು, ಜೂನ್ 30 ರಿಂದ ಜುಲೈ 27ರ ಸಂಜೆ 06 ಗಂಟೆಯವರೆಗೆ ಒಟ್ಟು 10,31,249 ಗಣತಿ ನಮೂನೆಗಳ ಡಿಜಿಟಲೀಕರಣ ಕಾರ್ಯ ಪೂರ್ಣಗೊಂಡಿದೆ ಎಂದು ಅಪರ ಜಿಲ್ಲಾ ಚುನಾವಣಾಧಿಕಾರಿಗಳು ಆಗಿರುವ ಅಪರ ಜಿಲ್ಲಾಧಿಕಾರಿಗಳಾದ ಸಿದ್ರಾಮೇಶ್ವರ ಅವರು ತಿಳಿಸಿದ್ದಾರೆ.
ಕೊಪ್ಪಳ ಜಿಲ್ಲೆಯ 5 ವಿಧಾನಸಭಾ ಕ್ಷೇತ್ರಗಳಿಗೆ ಸಂಬAಧಿಸಿದAತೆ ಒಟ್ಟು 11,90,214 ಮತದಾರರಿದ್ದು, ಈ ಎಲ್ಲಾ ಮತದಾರರ ಮುದ್ರಿತವಾಗಿರುವ ಗಣತಿ ನಮೂನೆಗಳನ್ನು ಈಗಾಗಲೇ ಸಂಬAಧಪಟ್ಟ ಬೂತ್ ಮಟ್ಟದ ಅಧಿಕಾರಿಗಳಿಂದ ವಿತರಿಸಲಾಗಿದೆ. ಇಲ್ಲಿವರೆಗೆ ಒಟ್ಟು 10,31,249 ಗಣತಿ ನಮೂನೆಗಳನ್ನು ಡಿಜಿಟಲೀಕರಣ ಮಾಡಲಾಗಿರುತ್ತದೆ ಎಂದು ಅವರು ತಿಳಿಸಿದ್ದಾರೆ.

Total Views: 0
Share This Article