Breaking News

ಜಿಲ್ಲಾ ಉಸ್ತುವಾರಿ ಸಚಿವರಿಂದ ಸೆಪ್ಟೆಂಬರ್ 25ಕ್ಕೆ ಜನತಾ ದರ್ಶನ

ಕೊಪ್ಪಳ ಸೆಪ್ಟೆಂಬರ್ 22 (ಕ.ವಾ.): ಜಿಲ್ಲಾ ಉಸ್ತುವಾರಿ ಸಚಿವರಿಂದ ಜನತಾ ದರ್ಶನ ಕಾರ್ಯಕ್ರಮವನ್ನು ಕೊಪ್ಪಳ ಜಿಲ್ಲಾಡಳಿತ ಭವನದ ಆಡಿಟೋರಿಯಂ ಹಾಲನಲ್ಲಿ ಸೆಪ್ಟೆಂಬರ್ 25ರ ಬೆಳಿಗ್ಗೆ 10 ಗಂಟೆಯಿಂದ ಸಂಜೆ 5-30 ಗಂಟೆಯವರೆಗೆ ಆಯೋಜಿಸಲಾಗಿದೆ ಎಂದು ಜಿಲ್ಲಾಧಿಕಾರಿಗಳಾದ ನಲಿನ್ ಅತುಲ್ ಅವರು ತಿಳಿಸಿದ್ದಾರೆ.
ರಾಜ್ಯದ ವಿವಿಧ ಭಾಗಗಳಿಂದ ನಾಗರಿಕರು ಬೆಂಗಳೂರಿಗೆ ತೆರಳಿ ಹಲವಾರು ರೀತಿಯ ಸಮಸ್ಯೆಗಳನ್ನು ಕುರಿತು ಮುಖ್ಯಮಂತ್ರಿಗಳನ್ನು ಭೇಟಿ ಮಾಡಿ ಅಹವಾಲುಗಳನ್ನು ಸಲ್ಲಿಸುತ್ತಾರೆ. ಅಂತಹ ಅಹವಾಲುಗಳನ್ನು ಜಿಲ್ಲಾ ಮಟ್ಟದಲ್ಲಿಯೇ ಆಲಿಸಿ ಸೂಕ್ತ ಪರಿಹಾರ ಒದಗಿಸುವ ನಿಟ್ಟಿನಲ್ಲಿ ಪ್ರತಿ ಜಿಲ್ಲೆಯಲ್ಲಿಯೂ ಜಿಲ್ಲಾ ಉಸ್ತುವಾರಿ ಸಚಿವರ ನೇತೃತ್ವದಲ್ಲಿ ಪ್ರತಿ ತಿಂಗಳು ಜನತಾ ದರ್ಶನ ಕಾರ್ಯಕ್ರಮ ಹಮ್ಮಿಕೊಂಡು ಜನರ ಅಹವಾಲುಗಳನ್ನು ಆಲಿಸಿ ಸಮಸ್ಯೆಗಳಿಗೆ ಪರಿಹಾರೋಪಾಯಗಳನ್ನು ಒದಗಿಸಬೇಕು ಎಂದು ಮಾನ್ಯ ಮುಖ್ಯಮಂತ್ರಿಗಳ ಅಪರ ಮುಖ್ಯ ಕಾರ್ಯದರ್ಶಿಗಳು ತಿಳಿಸಿದ್ದರಿಂದ ಜಿಲ್ಲಾಮಟ್ಟದಲ್ಲಿ
ಈ ಕಾರ್ಯಕ್ರಮ ಆಯೋಜಿಸಿದೆ. ಈ ಜನತಾ ದರ್ಶನ ಕಾರ್ಯಕ್ರಮದಲ್ಲಿ ಸಾರ್ವಜನಿಕರು ಭಾಗವಹಿಸಿ ತಮ್ಮ ಅಹವಾಲುಗಳನ್ನು ಸಲ್ಲಿಸಿ ಸಮಸ್ಯೆಗಳಿಗೆ ಪರಿಹಾರವನ್ನು ಕಂಡುಕೊಳ್ಳಲು ಹಾಗೂ ಸದರಿ ಕಾರ್ಯಕ್ರಮದ ಸದುಪಯೋಗ ಪಡೆದುಕೊಳ್ಳಲು ಈ ಮೂಲಕ ತಿಳಿಯಪಡಿಸಲಾಗಿದೆ ಎಂದು ಜಿಲ್ಲಾಧಿಕಾರಿಗಳ ಕಚೇರಿಯ ಪ್ರಕಟಣೆ ತಿಳಿಸಿದೆ.

ಜಾಹೀರಾತು

About Mallikarjun

Check Also

screenshot 2025 11 19 18 50 08 70 6012fa4d4ddec268fc5c7112cbb265e7.jpg

ಸುಳ್ವಾಡಿ ದುರಂತಕ್ಕೆ ಕಾರಣರಾದ ಇಮ್ಮಡಿ ಮಹಾದೇವಸ್ವಾಮಿಗೆ ಜಾಮೀನು ಸಂತ್ರಸ್ತರ ಆಕ್ರೋಶ . Victims' anger over bail granted to …

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.