ಸಿವಿಲ್ ಪೊಲೀಸ್ ಕಾನ್ಸ್ಟೇಬಲ್ ಪರೀಕ್ಷೆ ಪ್ರಕ್ರಿಯೆ ಪಾರದರ್ಶಕವಾಗಿ ನಡೆಸಲು ಕ್ರಮವಹಿಸಿ : ಜಿಲ್ಲಾಧಿಕಾರಿ ಡಾ.ಸುರೇಶ ಬಿ.ಇಟ್ನಾಳ ಸೂಚನೆ

H.Mallikarjun
H.Mallikarjun - Kalyanasiri
4 Min Read

Take steps to conduct the Civil Police Constable exam process transparently: District Commissioner Dr. Suresh B. Itnal’s instructions

 

ಸಿವಿಲ್ ಪೊಲೀಸ್ ಕಾನ್ಸ್ಟೇಬಲ್ ಪರೀಕ್ಷೆ ಪ್ರಕ್ರಿಯೆ ಪಾರದರ್ಶಕವಾಗಿ ನಡೆಸಲು ಕ್ರಮವಹಿಸಿ : ಜಿಲ್ಲಾಧಿಕಾರಿ ಡಾ.ಸುರೇಶ ಬಿ.ಇಟ್ನಾಳ ಸೂಚನೆ


ಕೊಪ್ಪಳ ಜುಲೈ 30, (ಕರ್ನಾಟಕ ವಾರ್ತೆ): ಆಗಸ್ಟ್ 2 ರಂದು ಜಿಲ್ಲೆಯಾದ್ಯಂತ ನಡೆಯಲಿರುವ ಮಿಕ್ಕುಳಿದ ವೃಂದದ ಹಾಗೂ ಸ್ಥಳೀಯ ವೃಂದದ ಸಿವಿಲ್ ಪೊಲೀಸ್ ಕಾನ್ಸ್ಟೇಬಲ್ ಪರೀಕ್ಷೆಯು ಒಟ್ಟು 24 ಪರೀಕ್ಷಾ ಕೇಂದ್ರಗಳಲ್ಲಿ ನಡೆಯಲಿದ್ದು, ಪರೀಕ್ಷಾ ಪ್ರಕ್ರಿಯೆಯನ್ನು ಅತ್ಯಂತ ಪಾರದರ್ಶಕ ಮತ್ತು ಶಿಸ್ತುಬದ್ಧವಾಗಿ ನಡೆಸಲು ನಿಯೋಜಿತ ಪರೀಕ್ಷಾ ವೀಕ್ಷಕರು,  ಅಧಿಕಾರಿಗಳು ಮತ್ತು ಸಿಬ್ಬಂದಿಗಳು ಕ್ರಮವಹಿಸುವಂತೆ ಜಿಲ್ಲಾಧಿಕಾರಿ ಡಾ.ಸುರೇಶ ಬಿ.ಇಟ್ನಾಳ ಅವರು ಸೂಚನೆ ನೀಡಿದರು.
ಗುರುವಾರದಂದು ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಏರ್ಪಡಿಸಿದ್ದ ಮಿಕ್ಕುಳಿದ ವೃಂದದ ಹಾಗೂ ಸ್ಥಳೀಯ ವೃಂದದ ಸಿವಿಲ್ ಪೊಲೀಸ್ ಕಾನ್ಸ್ಟೇಬಲ್ ಪರೀಕ್ಷಾ ಕೇಂದ್ರಗಳಲ್ಲಿ ಕೈಗೊಳ್ಳಬೇಕಾದ ಮುಂಜಾಗ್ರತೆ ಕುರಿತು ನಡೆದ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.
ಪರೀಕ್ಷಾ ಕೇಂದ್ರಗಳಿಗೆ ಶಿವದಾರ, ಜನಿವಾರ, ಮಾಂಗಲ್ಯ, ಮೂಗುತಿ ಮತ್ತು ವಿಭೂತಿಗೆ ಅವಕಾಶವಿದೆ. ನಿಯೋಜಿತರಾಗಿರುವ ಅಧಿಕಾರಿ/ಸಿಬ್ಬಂದಿಗಳು  ಡ್ರೆಸ್ ಕೋಡ್ ಅಧಿಕಾರಿಗಳು, ಪರೀಕ್ಷೆ ಪ್ರಾರಂಭವಾಗುವ ಮುನ್ನವೇ ನಿಗದಿತ ಪರೀಕ್ಷಾ ಕೊಠಡಿಗೆ ತೆರಳಿ ವರದಿ ಮಾಡಿಕೊಳ್ಳಬೇಕು. ಪ್ರಾಧಿಕಾರವು ನೀಡಿರುವ ಉಡುಪಿನ ಸಂಹಿತೆ ಮತ್ತು ನಿರ್ದೇಶನಗಳಿಗೆ ಅನುಗುಣವಾಗಿ ಅಭ್ಯರ್ಥಿಗಳು ಪಾಲಿಸುತ್ತಿದ್ದಾರೆಯೇ ಎಂಬುದನ್ನು ಸೂಕ್ಷö್ಮವಾಗಿ ಮೇಲ್ವಿಚಾರಣೆ ಮಾಡಬೇಕು. ಸಿಬ್ಬಂದಿಗಳು ಪ್ರಾಧಿಕಾರದ ನಿರ್ದೇಶನದಂತೆ ಅಭ್ಯರ್ಥಿಗಳ ಫ್ರಿಸ್ಕಿಂಗ್ (ಅಂಗಶೋಧನೆ) ಪ್ರಕ್ರಿಯೆಯನ್ನು ಸರಿಯಾಗಿ ನಡೆಸುತ್ತಿರುವುದನ್ನು ಖಾತರಿಪಡಿಸಿಕೊಳ್ಳಬೇಕು ಎಂದರು.
ಪ್ರಾಧಿಕಾರದಿAದ `ಫೇಶಿಯಲ್ ರೆಕಗ್ನಿಷನ್’ ಸಂಬAಧ ನಿಯೋಜಿತರಾದ ನೋಡಲ್ ಅಧಿಕಾರಿ ಹಾಗೂ ಸಿಬ್ಬಂದಿಗಳ ಕಾರ್ಯವೈಖರಿಯನ್ನು ಮೇಲ್ವಿಚಾರಣೆ ಮಾಡಬೇಕು. ಕೊಠಡಿಯಲ್ಲಿರುವ ಸಿ.ಸಿ.ಟಿ.ವಿ ಕ್ಯಾಮೆರಾಗಳು ಹಾಗೂ ಇತರ ಸಂಪರ್ಕ ಸಾಧನಗಳು ಸರಿಯಾಗಿ ಕಾರ್ಯನಿರ್ವಹಿಸುತ್ತಿವೆಯೇ ಎಂಬುದನ್ನು ತಪಾಸಣೆ ಮಾಡಬೇಕು. ಪರೀಕ್ಷಾ ಸಿಬ್ಬಂದಿ, ತಪಾಸಣಾ ತಂಡಗಳು, ಸ್ವಚ್ಛತಾ ಸಿಬ್ಬಂದಿ ಸೇರಿದಂತೆ ಯಾರೂ ಸಹ ಪರೀಕ್ಷಾ ಕೇಂದ್ರ ಅಥವಾ ನಿಷೇಧಿತ ಪ್ರದೇಶಗಳಿಗೆ ಯಾವುದೇ ರೀತಿಯ ಅನಗತ್ಯ ಅಥವಾ ತಾಂತ್ರಿಕ ಸಾಧನಗಳನ್ನು ತೆಗೆದುಕೊಂಡು ಹೋಗದಂತೆ ಕಟ್ಟುನಿಟ್ಟಾಗಿ ತಡೆಯಬೇಕು.
ಯಾವುದೇ ರೀತಿಯ ಭದ್ರತಾ ಲೋಪ ಅಥವಾ ಕಾರ್ಯವಿಧಾನದಲ್ಲಿ ಉಲ್ಲಂಘನೆಗಳು ಕಂಡುಬAದಲ್ಲಿ ತಕ್ಷಣವೇ ಅದನ್ನು ತಡೆದು, ಈ ಕುರಿತು ಸಂಬAಧಪಟ್ಟ ಪ್ರಾಧಿಕಾರಕ್ಕೆ ತಕ್ಷಣ ವರದಿ ಮಾಡಬೇಕು. ಪರೀಕ್ಷಾರ್ಥಿಗಳಿಗೆ ಅನುಕೂಲವಾಗುವಂತೆ ಶುದ್ಧ ಕುಡಿಯುವ ನೀರು, ಶೌಚಾಲಯ ವ್ಯವಸ್ಥೆ, ಸರಿಯಾದ ಬೆಳಕು ಹಾಗೂ ತರಗತಿಗಳಲ್ಲಿ ಗಡಿಯಾರ ಸೇರಿ ಮೂಲಭೂತ ಸೌಕರ್ಯಗಳನ್ನು ಕಡ್ಡಾಯವಾಗಿ ಒದಗಿಸಬೇಕು. ಮಹಿಳಾ ಅಭ್ಯರ್ಥಿಗಳ ಪರಿಶೀಲನೆಗೆ ಪ್ರತ್ಯೇಕ ವ್ಯವಸ್ಥೆ ಮಾಡಬೇಕು ಎಂದು ಸೂಚನೆ ನೀಡಿದರು.
ಪರೀಕ್ಷಾ ಅವಧಿಯಲ್ಲಿ ಪರೀಕ್ಷಾ ಕೇಂದ್ರಗಳ ಸುತ್ತಮುತ್ತಲಿರುವ ಎಲ್ಲಾ ಜೆರಾಕ್ಸ್ ಅಂಗಡಿಗಳು ಹಾಗೂ ಸೈಬರ್ ಕೆಫೆಗಳನ್ನು ಕಡ್ಡಾಯವಾಗಿ ಮುಚ್ಚತಕ್ಕದ್ದು. ಈ ಆದೇಶವನ್ನು ಕಟ್ಟುನಿಟ್ಟಾಗಿ ಪಾಲಿಸಲು ಮತ್ತು ಪರೀಕ್ಷಾ ಕೇಂದ್ರಗಳ ಸುತ್ತಲೂ ಸೂಕ್ತ ಭದ್ರತೆ ಒದಗಿಸಲು ಜಿಲ್ಲಾ ಪೊಲೀಸ್ ಅಧೀಕ್ಷಕರಿಗೆ ನಿರ್ದೇಶನ ನೀಡಲಾಗಿದೆ. ಪರೀಕ್ಷಾ ನಿಯೋಜಿತ ಎಲ್ಲ ಅಧಿಕಾರಿಗಳು, ಸಿಬ್ಬಂದಿ ಕೆಇಎ ನೀಡಿರುವ ಎಲ್ಲ ಮಾರ್ಗಸೂಚಿ, ಸೂಚನೆಗಳನ್ನು ಕಡ್ಡಾಯವಾಗಿ ಓದಿಕೊಂಡು ಸರಿಯಾಗಿ ಅರ್ಥಮಾಡಿಕೊಳ್ಳಬೇಕು. ಪರೀಕ್ಷಾ ಕರ್ತವ್ಯದಲ್ಲಿ ಯಾವುದೇ ಗೊಂದಲವಾಗಬಾರದು. ಕೊಠಡಿ ಮೇಲ್ವಿಚಾರಕರಿಗೂ ಸೂಕ್ತ ಮಾರ್ಗದರ್ಶನ ನೀಡಿ ಎಂದು ಪರೀಕ್ಷಾ ಕೇಂದ್ರಗಳ ಮುಖ್ಯಸ್ಥರಿಗೆ ತಿಳಿಸಿದರು.
ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ.ರಾಮ್ ಎಲ್.ಅರಸಿದ್ದಿ ಅವರು ಮಾತನಾಡಿ, ಆಗಸ್ಟ್ 2 ರಂದು ಬೆಳಿಗ್ಗೆ 10.30 ಗಂಟೆಯಿAದ ಮಧ್ಯಾಹ್ನ 12 ಗಂಟೆಯವರೆಗೆ ಮಿಕ್ಕುಳಿದ ವೃಂದ ಹಾಗೂ ಸಂಜೆ 4 ಗಂಟೆಯಿAದ 5.30 ರವರೆಗೆ ಸ್ಥಳೀಯ ವೃಂದದ ಪರೀಕ್ಷೆಗಳು ನಡೆಯಲಿವೆ. ಜಿಲ್ಲೆಯ ಕೊಪ್ಪಳ ನಗರ, ಭಾಗ್ಯನಗರ ಹಾಗೂ ಗಂಗಾವತಿಯಲ್ಲಿ ಒಟ್ಟು 24 ಪರೀಕ್ಷಾ ಕೇಂದ್ರಗಳನ್ನು ಸ್ಥಾಪಿಸಲಾಗಿದೆ. ಮಿಕ್ಕುಳಿದ ವೃಂದದಲ್ಲಿ ಕೊಪ್ಪಳದ 16 ಪರೀಕ್ಷಾ ಕೇಂದ್ರಗಳಲ್ಲಿ 5,480 ಅಭ್ಯರ್ಥಿಗಳು ಹಾಗೂ ಗಂಗಾವತಿಯ 8 ಪರೀಕ್ಷಾ ಕೇಂದ್ರಗಳಲ್ಲಿ 2,665 ಅಭ್ಯರ್ಥಿಗಳು ಸೇರಿದಂತೆ ಒಟ್ಟು 8,145 ಅಭ್ಯರ್ಥಿಗಳು ಹಾಗೂ ಸ್ಥಳೀಯ ವೃಂದದಲ್ಲಿ ಕೊಪ್ಪಳದ 16 ಪರೀಕ್ಷಾ ಕೇಂದ್ರಗಳಲ್ಲಿ 4,922 ಅಭ್ಯರ್ಥಿಗಳು ಮತ್ತು ಗಂಗಾವತಿಯ 4 ಪರೀಕ್ಷಾ ಕೇಂದ್ರಗಳಲ್ಲಿ 1,327 ಅಭ್ಯರ್ಥಿಗಳು ಸೇರಿದಂತೆ ಒಟ್ಟು 6,249 ಅಭ್ಯರ್ಥಿಗಳು ಪರೀಕ್ಷೆ ಬರೆಯಲಿದ್ದಾರೆ ಎಂದು ಸಭೆಗೆ ಮಾಹಿತಿ ನೀಡಿದರು.
ಎಲ್ಲ ಪರೀಕ್ಷಾ ಕೇಂದ್ರಗಳನ್ನು ಈಗಾಗಲೇ ಪರಿಶೀಲಿಸಲಾಗಿದೆ, ಪರೀಕ್ಷಾ ಕೇಂದ್ರದಲ್ಲಿ ಯಾವುದೇ ಅಕ್ರಮ ನಡೆಯದಂತೆ ಕ್ರಮವಹಿಸಲು ಬಿಗಿ ಪೊಲೀಸ್ ಬಂದೋಬಸ್ತ್ ವ್ಯವಸ್ಥೆ ಮಾಡಲಾಗಿದೆ, ಪ್ರಶ್ನೆ ಪತ್ರಿಕೆಗಳ ಸಾಗಾಣಿಕೆಗೆ ತ್ರಿ ಸದಸ್ಯ ಸಮಿತಿಯನ್ನು ರಚಿಸಲಾಗಿದೆ. ಮಾರ್ಗಾಧಿಕಾರಿಗಳನ್ನು ನೇಮಕ ಮಾಡಲಾಗಿರುತ್ತದೆ. ಪ್ರತಿ ಪರೀಕ್ಷಾ ಕೇಂದ್ರಗಳಲ್ಲಿ ಸಿಸಿಟಿವಿ ಮತ್ತು ವೆಬ್‌ಕಾಸ್ಟಿಂಗ್ ವ್ಯವಸ್ಥೆಯನ್ನು ಅಳವಡಿಸಲಾಗಿದೆ. ಪೊಲೀಸ್ ಇಲಾಖೆಯಿಂದ ವೆಬ್‌ಕ್ಯಾಸ್ಟಿಂಗ್ ಕಾರ್ಯವನ್ನು ಕೈಗೊಳ್ಳಲಾಗುವುದು. ಪ್ರತಿ ಪರೀಕ್ಷಾ ಕೇಂದ್ರಗಳಲ್ಲಿ ಜಾಮರ್‌ಗಳನ್ನು ಅಳವಡಿಸಲಾಗುತ್ತದೆ. ಪ್ರತಿ ಪರೀಕ್ಷಾ ಕೇಂದ್ರಕ್ಕೆ ಒಬ್ಬರನ್ನು ವೀಕ್ಷಕ ಅಧಿಕಾರಿಗಳನ್ನು ನೇಮಕ ಮಾಡಲಾಗಿರುತ್ತದೆ. ಪ್ರತಿ ಪರೀಕ್ಷಾ ಕೇಂದ್ರಕ್ಕೆ ಒಬ್ಬರನ್ನು ವಸ್ತç ಸಂಹಿತೆ ಅಧಿಕಾರಿಗಳನ್ನು ನೇಮಕ ಮಾಡಲಾಗಿರುತ್ತದೆ. ಪ್ರತಿ ಪರೀಕ್ಷಾ ಕೇಂದ್ರಕ್ಕೆ ಒಬ್ಬರನ್ನು ಪ್ರಶ್ನೆ ಪತ್ರಿಕೆ ಪಾಲಕರು ಮತ್ತು ಜಾಗೃತ ದಳದ ಸದಸ್ಯರನ್ನು ನೇಮಕ ಮಾಡಲಾಗಿರುತ್ತದೆ ಎಂದು ಮಾಹಿತಿ ನೀಡಿದರು.
ಸಭೆಯಲ್ಲಿ ಅಪರ ಜಿಲ್ಲಾಧಿಕಾರಿ ಸಿದ್ರಾಮೇಶ್ವರ, ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ಹೇಮಂತ್‌ಕುಮಾರ, ಜಿಲ್ಲಾ ನಗರಾಭಿವೃದ್ಧಿ ಕೋಶದ ಯೋಜನಾ ನಿರ್ದೇಶಕ ಮಂಜುನಾಥ ಗುಂಡೂರ, ಡಿಡಿಪಿಯು ಜಗದೀಶ್, ಕೊಪ್ಪಳ ಡಿವೈಎಸ್‌ಪಿ ಮುತ್ತಣ್ಣ ಸವರಗೋಳ, ಗಂಗಾವತಿ ಡಿವೈಎಸ್‌ಪಿ ನ್ಯಾಮಗೌಡರ್, ಸೇರಿದಂತೆ ವಿವಿಧ ಇಲಾಖೆಗಳ ಜಿಲ್ಲಾ ಮಟ್ಟದ ಅಧಿಕಾರಿಗಳು, ಪರೀಕ್ಷಾ ಕೇಂದ್ರಗಳ ನಿಯೋಜಿತ ಅಧಿಕಾರಿಗಳು, ಸಿಬ್ಬಂದಿ ಉಪಸ್ಥಿತರಿದ್ದರು.
Total Views: 0
Share This Article