ಇಂದು ಡಾ.ಮಹಾಂತ ಶಿವಯೋಗಿಗಳ ಜನ್ಮದಿನಾಚರಣೆಯ ಅಂಗವಾಗಿ ವ್ಯಸನ ಮುಕ್ತ ದಿನಾಚರಣೆ

H.Mallikarjun
H.Mallikarjun - Kalyanasiri
2 Min Read

Today, as part of celebrating Dr. Mahant Shivayogi’s birthday, it’s the De-addiction Day celebration.

ಇಂದು ಡಾ.ಮಹಾಂತ ಶಿವಯೋಗಿಗಳ ಜನ್ಮದಿನಾಚರಣೆಯ ಅಂಗವಾಗಿ ವ್ಯಸನ ಮುಕ್ತ ದಿನಾಚರಣೆ

4444

ಜಾಹೀರಾತು
ವ್ಯಸನ ಮುಕ್ತ ದಿನಾಚರಣೆಕೊಪ್ಪಳ ಜುಲೈ 31, (ಕರ್ನಾಟಕ ವಾರ್ತೆ): ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಜಿಲ್ಲಾ ಪೊಲೀಸ್ ಇಲಾಖೆ, ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ, ಜಿಲ್ಲಾ ತರಬೇತಿ ಕೇಂದ್ರ, ಪದವಿ ಪೂರ್ವ ಶಿಕ್ಷಣ ಇಲಾಖೆ, ಶಾಲಾ ಶಿಕ್ಷಣ ಹಾಗೂ ಸಾಕ್ಷರತಾ ಇಲಾಖೆ, ಆರೋಗ್ಯ ಇಲಾಖೆ, ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ, ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ, ಸಮಾಜ ಕಲ್ಯಾಣ ಇಲಾಖೆ, ಕೊಪ್ಪಳ ಹಾಗೂ ಕರ್ನಾಟಕ ರಾಜ್ಯ ಮದ್ಯಪಾನ ಸಂಯಮ ಮಂಡಳಿ, ಬೆಂಗಳೂರು ಇವರ ಸಹಯೋಗದಲ್ಲಿ ಆಗಸ್ಟ್ 1 ರಂದು ಡಾ.ಮಹಾಂತ ಶಿವಯೋಗಿಗಳ ಜನ್ಮದಿನಾಚರಣೆಯ ಅಂಗವಾಗಿ ವ್ಯಸನ ಮುಕ್ತ ದಿನಾಚರಣೆಯನ್ನು ಬೆಳಿಗ್ಗೆ 10 ಗಂಟೆಗೆ ಜಿಲ್ಲಾಡಳಿತ ಭವನದ ಆಡಿಟೋರಿಯಂ ಹಾಲ್ ನಲ್ಲಿ ಆಯೋಜಿಸಲಾಗಿದೆ.
ಕೊಪ್ಪಳ ಶಾಸಕರಾದ ಕೆ. ರಾಘವೇಂದ್ರ ‎ಹಿಟ್ನಾಳ ಅವರು ಕಾರ್ಯಕ್ರಮ ಉದ್ಘಾಟಿಸುವರು ಹಾಗೂ ಅಧ್ಯಕ್ಷತೆ ವಹಿಸುವರು. ಕರ್ನಾಟಕ ವಿಧಾನಸಭೆಯ ವಿರೋಧ ಪಕ್ಷದ ಮುಖ್ಯ ಸಚೇತಕರು ಹಾಗೂ ಕುಷ್ಟಗಿ ಶಾಸಕರಾದ ದೊಡ್ಡನಗೌಡ ಹನುಮಗೌಡ ಪಾಟೀಲ ಅವರು ಕಾರ್ಯಕ್ರಮದ ಘನ ಉಪಸ್ಥಿತಿ ವಹಿಸುವರು. ಮುಖ್ಯ ಅತಿಥಿಗಳಾಗಿ ಕೊಪ್ಪಳ ಸಂಸದರಾದ ಕೆ.ರಾಜಶೇಖರ ಬಸವರಾಜ ಹಿಟ್ನಾಳ, ಯಲಬುರ್ಗಾ ಶಾಸಕರಾದ ಬಸವರಾಜ ರಾಯರಡ್ಡಿ, ಕನಕಗಿರಿ ಶಾಸಕರಾದ ಶಿವರಾಜ ಸಂಗಪ್ಪ ತಂಗಡಗಿ, ಗಂಗಾವತಿ ಶಾಸಕರಾದ ಜಿ.ಜನಾರ್ಧನ ರೆಡ್ಡಿ, ವಿಧಾನ ಪರಿಷತ್ ಸದಸ್ಯರುಗಳಾದ ಶಶೀಲ್ ಜಿ. ನಮೋಶಿ, ಡಾ. ಚಂದ್ರಶೇಖರ ಬಿ. ಪಾಟೀಲ, ಶರಣಗೌಡ ಅನ್ನದಾನಗೌಡ ಪಾಟೀಲ ಬಯ್ಯಾಪೂರ ಹಾಗೂ ಹೇಮಲತಾ ನಾಯಕ, ಮುನಿರಾಬಾದ್ ಅಚ್ಚುಕಟ್ಟು ಪ್ರದೇಶಾಭಿವೃದ್ಧಿ ಪ್ರಾಧಿಕಾರ ತುಂಗಭದ್ರಾ ಯೋಜನೆಯ ಅಧ್ಯಕ್ಷರಾದ ಹಸನಸಾಬ ನಬೀಬ್ ಸಾಬ ದೋಟಿಹಾಳ, ಕೊಪ್ಪಳ ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷರಾದ ಪ್ರಸನ್ನ ವಿ. ಗಡಾದ, ಜಿಲ್ಲಾ ಮಟ್ಟದ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರದ ಅಧ್ಯಕ್ಷರಾದ ರೆಡ್ಡಿ ಶ್ರೀನಿವಾಸ ಅವರು ಪಾಲ್ಗೊಳ್ಳುವರು.
ವಿಶೇಷ ಆಹ್ವಾನಿತರಾಗಿ ವಸತಿ ಇಲಾಖೆ ಹಾಗೂ ಸಮಾಜ ಕಲ್ಯಾಣ ಇಲಾಖೆಯ ಕಾರ್ಯದರ್ಶಿಗಳು ಹಾಗೂ ಕೊಪ್ಪಳ ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿಗಳಾದ ಕೆ.ಪಿ ‎ಮೋಹನರಾಜ್ ಅವರು ಆಗಮಿಸುವರು.
ಕೊಪ್ಪಳದ ಉಪನ್ಯಾಸಕರಾದ ಶಿವನಗೌಡ ಪೊಲೀಸ್ ಪಾಟೀಲ್ ಅವರು ಡಾ.ಮಹಾಂತ ಶಿವಯೋಗಿಗಳ ಜನ್ಮದಿನಾಚರಣೆಯ ಅಂಗವಾಗಿ ಅವರ ಬಗ್ಗೆ ವಿಶೇಷ ಉಪನ್ಯಾಸ ನೀಡುವರು. ಹೊಸಪೇಟೆಯ ಚಿಕ್ಕಮಕ್ಕಳ ಮನೋತಜ್ಞರಾದ ಡಾ.ಲಕ್ಷಿö್ಮÃದೇವಿ ಎಮ್.ಪಾಟೀಲ್ ಅವರು ವ್ಯಸನದಿಂದಾಗುವ ದುಷ್ಪರಿಣಾಮಗಳ ಬಗ್ಗೆ ಹಾಗೂ ಕೊಪ್ಪಳ ನಗರ ಪೊಲೀಸ್ ಠಾಣೆಯ ಸಿಪಿಐ ಡಿ ಸುರೇಶ ಅವರು ವ್ಯಸನದ ಪರಿಣಾಮ: ಕಾನೂನು ತೊಡಕುಗಳು: ಪರಿಹಾರ ಎಂಬ ವಿಷಯಗಳ ಕುರಿತು ವಿಶೇಷ ಉಪನ್ಯಾಸ ನೀಡುವರು.
ಕಾರ್ಯಕ್ರಮದಲ್ಲಿ ಜಿಲ್ಲಾಧಿಕಾರಿಗಳಾದ ಡಾ. ಸುರೇಶ ಬಿ. ಇಟ್ನಾಳ್, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಗಳಾದ ವರ್ಣಿತ್ ನೇಗಿ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳಾದ ಡಾ.ರಾಮ್ ಎಲ್. ಅರಸಿದ್ದಿ, ಅಪರ ಜಿಲ್ಲಾಧಿಕಾರಿಗಳಾದ ಸಿದ್ರಾಮೇಶ್ವರ ಅವರು ಉಪಸ್ಥಿತರಿರುವರು ಎಂದು ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ ಸಹಾಯಕ ನಿರ್ದೇಶಕರಾದ ಗವಿಸಿದ್ದಪ್ಪ ಹೊಸಮನಿ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ
Total Views: 0
Share This Article