ಹಣದ ಬೇಡಿಕೆ ಭ್ರಷ್ಟತನ; ಪ್ರಾಥಮಿಕಕನಕಗಿರಿ ಪಟ್ಟಣ ಪಂಚಾಯಿತಿ ಮುಖ್ಯಾಧಿಕಾರಿ ಅಮಾನತಿಗೆ ಶಿಫಾರಸ್ಸು

H.Mallikarjun
H.Mallikarjun - Kalyanasiri
2 Min Read

 

Demanding money is corruption; the Primary report recommends dismissal of the Chief Officer of Kanakagiri Town Panchayat

 

ಹಣದ ಬೇಡಿಕೆ ಭ್ರಷ್ಟತನ; ಪ್ರಾರ್ಥಮಿಕ ವರದಿಯಿಂದ ದೃಢ-

ಕನಕಗಿರಿ ಪಟ್ಟಣ ಪಂಚಾಯಿತಿ ಮುಖ್ಯಾಧಿಕಾರಿ ಅಮಾನತಿಗೆ ಶಿಫಾರಸ್ಸ

 

ಕೊಪ್ಪಳ ಜುಲೈ 31 (ಕರ್ನಾಟಕ ವಾರ್ತೆ): ಲೇಔಟ್ ಅನುಮೋದನೆಗಾಗಿ ಮಾಲೀಕನೊಬ್ಬನಿಗೆ 3 ಲಕ್ಷಗಳ ಹಣದ ಬೇಡಿಕೆ ಇಟ್ಟಿರುವ ಬಗ್ಗೆ ಪ್ರಾಥಮಿಕ ತನಿಖಾ ವರದಿ ಆಧರಿಸಿ ಕನಕಗಿರಿ ಪಟ್ಟಣ ಪಂಚಾಯಿತಿ ಮುಖ್ಯಾಧಿಕಾರಿ ಲಕ್ಷö್ಮಣ ಕಟ್ಟಿಮನಿ ಅವರನ್ನು ಮುಖ್ಯಾಧಿಕಾರಿ ಹುದ್ದೆಯಿಂದ ಅಮಾನತು ಮಾಡಬೇಕು ಎಂದು ಕೊಪ್ಪಳ ಜಿಲ್ಲಾಧಿಕಾರಿಗಳಾದ ಡಾ.ಸುರೇಶ ಇಟ್ನಾಳ ಅವರು, ಪೌರಾಡಳಿತ ನಿರ್ದೇಶನಾಲಯ ಬೆಂಗಳೂರಿನ ನಿರ್ದೇಶಕರಿಗೆ ಶಿಫಾರಸ್ಸು ಮಾಡಿದ್ದಾರೆ.
ಲಕ್ಷö್ಮಣ ಕಟ್ಟಿಮನಿ ಅವರು ಲೇಔಟ್ ಅನುಮೋದನೆಗಾಗಿ ಮಾಲೀಕನೊಬ್ಬನಿಗೆ 3 ಲಕ್ಷಗಳ ಹಣದ ಬೇಡಿಕೆ ಇಟ್ಟಿರುವ ಕುರಿತು ದಿನಪತ್ರಿಕೆಗಳಲ್ಲಿ ಹಾಗು ಸುದ್ದಿ ವಾಹಿನಿಗಳಲ್ಲಿ ವರದಿಯಾಗಿತ್ತು. ಮತ್ತು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿತ್ತು. ಈ ಬಗ್ಗೆ ಕಾರಣ ಕೇಳಿ ನೋಟೀಸ್ ನೀಡಲಾಗಿತ್ತು.
ಲಕ್ಷö್ಮಣ ಕಟ್ಟಿಮನಿ ಜವಾಬ್ದಾರಿಯುತ ಹುದ್ದೆಯಲ್ಲಿದ್ದುಕೊಂಡು ವೃತಿ ನೈತಿಕತೆಯನ್ನು ಮರೆತು ಕರ್ತವ್ಯ ಶ್ರದ್ಧೆಯನ್ನು ಹೊಂದದೇ ಹಣದ ಬೇಡಿಕೆ ಇಟ್ಟು ಸರ್ಕಾರಿ ನೌಕರನಿಗೆ ತರವಲ್ಲದ ರೀತಿಯಲ್ಲಿ ವರ್ತಿಸಿ ಸರ್ಕಾರಿ ಕೆಲಸ ನಿರ್ವಹಿಸುವಲ್ಲಿ ಭ್ರಷ್ಟತನದ ಚಟುವಟಿಕೆಯಲ್ಲಿ ಭಾಗಿಯಾಗಿರುವುದು ಮೇಲ್ನೋಟಕ್ಕೆ ಕಂಡು ಬಂದಿರುತ್ತದೆ ಎಂದು ನಗರಾಭಿವೃದ್ಧಿ ಕೋಶದ ಯೋಜನಾ ನಿರ್ದೇಶಕರು ಪ್ರಾಥಮಿಕ ವರದಿ ಸಲ್ಲಿಸಿದ್ದಾರೆ. ಈ ವರದಿಯನ್ನು ಆಧರಿಸಿ, ಸದರಿ ನೌಕರರನ್ನು ವಿಚಾರಣೆಯನ್ನು ಕಾಯ್ದಿರಿಸಿ ಕರ್ನಾಟಕ ಸಿವಿಲ್ ಸೇವಾ ನಿಯಮಗಳನ್ವಯ ಸೇವೆಯಿಂದ ಅಮಾನುತುಗೊಳಿಸಬೇಕು ಎಂದು ಕೋರಿ ಪೌರಾಡಳಿತ ನಿರ್ದೇಶನಾಲಯ ಬೆಂಗಳೂರು ಇವರಿಗೆ ಜಿಲ್ಲಾಧಿಕಾರಿಗಳು ಶಿಫಾರಸ್ಸು ಮಾಡಿದ್ದಾರೆ.
ರಾಜಶೇಖರ ಅವರಿಗೆ ಹೆಚ್ಚುವರಿ ಪ್ರಭಾರ: ಲಕ್ಷö್ಮಣ ಕಟ್ಟಿಮನಿ ಅವರನ್ನು ಮುಖ್ಯಾಧಿಕಾರಿ ಹುದ್ದೆಯಿಂದ ಬಿಡುಗಡೆಗೊಳಿಸಿ ಸಕ್ಷö್ಮಮ ಪ್ರಾಧಿಕಾರಕ್ಕೆ ವರದಿ ಮಾಡಿಕೊಳ್ಳಲು ಸೂಚಿಸಿದ್ದು, ಕನಕಗಿರಿ ಪಟ್ಟಣ ಪಂಚಾಯಿತಿಯ ಎಲ್ಲ ಕೆಲಸ ಕಾರ್ಯಗಳು ಸುಗಮವಾಗಿ ನಿರ್ವಹಿಸಲು ಸಾರ್ವಜನಿಕ ಹಾಗೂ ಆಡಳಿತಾತ್ಮಕ ದೃಷ್ಟಿಯಿಂದ ರಾಜಶೇಖರ, ಕಾರ್ಯ ನಿರ್ವಾಹಕ ಅಧಿಕಾರಿಗಳು ತಾಲೂಕು ಪಂಚಾಯತ್ ಕನಕಗಿರಿ ಇವರನ್ನು ಕನಕಗಿರಿ ಪಟ್ಟಣ ಪಂಚಾಯಿತಿಯ ಮುಖ್ಯಾಧಿಕಾರಿ ಹುದ್ದೆಯ ಹೆಚ್ಚುವರಿ ಪ್ರಭಾರವನ್ನು ತಾತ್ಕಾಲಿಕವಾಗಿ ಹಾಗೂ ಮುಂದಿನ ಆದೇಶದವರೆಗೆ ವಹಿಸಿ ಆದೇಶಿಸಲಾಗಿದೆ ಎಂದು ಜಿಲ್ಲಾಧಿಕಾರಿಗಳು ತಿಳಿಸಿದ್ದಾರೆ.
Total Views: 0
Share This Article