District-level rally and convention of adolescent girls on August 5
ಆಗಸ್ಟ್ 5 ರಂದು ಜಿಲ್ಲಾ ಮಟ್ಟದ ಜಾಥಾ ಮತ್ತು ಹದಿಹರೆಯದ ಹೆಣ್ಣುಮಕ್ಕಳ ಸಮಾವೇಶ
ಕೊಪ್ಪಳ ಆಗಸ್ಟ್ 03, (ಕರ್ನಾಟಕ ವಾರ್ತೆ): ಬಳ್ಳಾರಿ ರೀಡ್ಸ್ ಸಂಸ್ಥೆ, ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ ಕೊಪ್ಪಳ, ಮಕ್ಕಳ ವಿಶೇಷ ಪೊಲೀಸ್ ಘಟಕ, ಜಿಲ್ಲಾ ಮಕ್ಕಳ ರಕ್ಷಣಾ ಘಟಕ ಹಾಗೂ ಶಾಲಾ ಶಿಕ್ಷಣ ಇಲಾಖೆ (ಪದವಿಪೂರ್ವ) ಇವರುಗಳ ಸಂಯುಕ್ತಾಶ್ರಯದಲ್ಲಿ ಬಾಲ್ಯವಿವಾಹ ನಿಷೇಧ, ಪೋಕ್ಸೋ, ಸೈಬರ್ ಕ್ರೆöÊಂ, ಮಾದಕ ದ್ರವ್ಯ ಮುಕ್ತ ಹಾಗೂ ಮಕ್ಕಳ ಮೇಲಿನ ದೌರ್ಜನ್ಯ ತಡೆ ಕುರಿತು ಜಿಲ್ಲಾಮಟ್ಟದ ಜಾಥಾ ಮತ್ತು ಹದಿಹರೆಯದ ಹೆಣ್ಣುಮಕ್ಕಳ ಸಮಾವೇಶವನ್ನು ಆಗಸ್ಟ್ 5 ರಂದು ಹಮ್ಮಿಕೊಳ್ಳಲಾಗಿದೆ.
ಜಾಥಾ ಕಾರ್ಯಕ್ರಮದ ಉದ್ಘಾಟನೆಯನ್ನು ಆಗಸ್ಟ್ 5 ರಂದು ಬೆಳಿಗ್ಗೆ 10.30 ಗಂಟೆಗೆ ಕೊಪ್ಪಳದ ಎಸ್. ಪಿ. ಕಛೇರಿಯಲ್ಲಿ ಆಯೋಜಿಸಿದ್ದು, ಸಮಾವೇಶವನ್ನು ಕೊಪ್ಪಳ ತಾಲೂಕು ಪಂಚಾಯತಿ ಎದುರಿನ ಬಾಲಕಿಯರ ಸರ್ಕಾರಿ ಪದವಿ ಪೂರ್ವ ಕಾಲೇಜಿನಲ್ಲಿ ಬೆಳಿಗ್ಗೆ 11 ಗಂಟೆಗೆ ಆಯೋಜಿಸಲಾಗಿದೆ.
ಜಾಥಾ ಹಾಗೂ ಸಮಾವೇಶದ ಉದ್ಘಾಟನೆಯನ್ನು ಹಿರಿಯ ಸಿವಿಲ್ ನ್ಯಾಯಾಧೀಶರು ಹಾಗೂ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿಗಳಾದ ಮಹಾಂತೇಶ ಎಸ್.ದರಗದ ಹಾಗೂ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳಾದ ಡಾ. ರಾಮ್ ಎಲ್. ಅರಸಿದ್ದಿ ಅವರು ನೆರವೇರಿಸುವರು. ಅಧ್ಯಕ್ಷತೆಯನ್ನು ಬಳ್ಳಾರಿ ರೀಡ್ಸ್ ಸಂಸ್ಥೆಯ ಕಾರ್ಯನಿರ್ವಾಹಕ ನಿರ್ದೇಶಕರಾದ ಸಿ ತಿಪ್ಪೇಶಪ್ಪ ಅವರು ವಹಿಸಿಕೊಳ್ಳುವರು.
ಮುಖ್ಯ ಅತಿಥಿಗಳಾಗಿ ಜಿಲ್ಲಾ ಹೆಚ್ಚುವರಿ ಪೊಲೀಸ್ ಅಧೀಕ್ಷಕರಾದ ಆರ್ ಹೇಮಂತ್ ಕುಮಾರ್, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಉಪ ನಿರ್ದೇಶಕರಾದ ಅಮರೇಶ್ ಹಾವಿನ್, ಮಕ್ಕಳ ಕಲ್ಯಾಣ ಸಮಿತಿಯ ಅಧ್ಯಕ್ಷರಾದ ಪ್ರಕಾಶ್ ಶಿವಪ್ಪ ಕಡಗದ, ಜಿಲ್ಲಾ ಮಕ್ಕಳ ರಕ್ಷಣಾ ಘಟಕದ ರಕ್ಷಣಾಧಿಕಾರಿಗಳಾದ ಸಿಂಧು ಅಂಗಡಿ, ಜಿಲ್ಲಾ ಪೊಲೀಸ್ ಸೈಬರ್ ಕ್ರೆöÊಂ ಡಿ.ವೈ.ಎಸ್.ಪಿ ಗಳಾದ ಸಿದ್ದಲಿಂಗಪ್ಪಗೌಡ ಪಾಟೀಲ್, (ಪದವಿ ಪೂರ್ವ) ಶಾಲಾ ಶಿಕ್ಷಣ ಇಲಾಖೆಯ ಉಪ ನಿರ್ದೇಶಕರಾದ ಜಿ.ಎಚ್ ಜಗದೀಶ್, ಸೈಬರ್ ಕ್ರೆöÊಂ ಸರ್ಕಲ್ ಇನ್ಸ್ಪೆಕ್ಟರ್ ಡಿ.ಎಸ್.ಆಂಜನೇಯ ಅವರು ಆಗಮಿಸುವರು. ಕರ್ನಾಟಕ ರಾಜ್ಯ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗದ ನಿಕಟಪೂರ್ವ ಸದಸ್ಯರಾದ ಡಾ. ಹೆಚ್.ಸಿ ರಾಘವೇಂದ್ರ ಅವರು ಸಂಪನ್ಮೂಲ ವ್ಯಕ್ತಿಗಳಾಗಿ ಆಗಮಿಸುವರು ಎಂದು ಪ್ರಕಟಣೆ ತಿಳಿಸಿದೆ
Total Views:
0
