ಜಿಲ್ಲಾ ಆರೋಗ್ಯ ಇಲಾಖೆ: ವಿವಿಧ ಹುದ್ದೆಗಳ ನೇಮಕಾತಿಗೆ ಅರ್ಜಿ ಆಹ್ವಾನ

H.Mallikarjun
H.Mallikarjun - Kalyanasiri
1 Min Read

District Health Department: Invitation to apply for various positions

ಜಿಲ್ಲಾ ಆರೋಗ್ಯ ಇಲಾಖೆ: ವಿವಿಧ ಹುದ್ದೆಗಳ ನೇಮಕಾತಿಗೆ ಅರ್ಜಿ ಆಹ್ವಾನ


ಕೊಪ್ಪಳ ಆಗಸ್ಟ್ 03, (ಕರ್ನಾಟಕ ವಾರ್ತೆ): ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯಲ್ಲಿ ಖಾಲಿ ಇರುವ ಕಿರಿಯ ಪ್ರಯೋಗಶಾಲಾ ತಾಂತ್ರಿಕ ಅಧಿಕಾರಿ, ಫಾರ್ಮಸಿ ಅಧಿಕಾರಿ ಹಾಗೂ ಶುಶ್ರೂಷಾಧಿಕಾರಿ ಹುದ್ದೆಗಳನ್ನು ಗುತ್ತಿಗೆ ಆಧಾರದ ಮೇಲೆ ಒಂದು ವರ್ಷದ ಅವಧಿಗೆ ಭರ್ತಿ ಮಾಡಲಾಗುತ್ತಿದ್ದು, ಅರ್ಹ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ.
ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು  www.koppal.nic.in     ಜಿಲ್ಲಾ ವೆಬ್‌ಸೈಟ್‌ನಿಂದ ಅರ್ಜಿ ನಮೂನೆಯನ್ನು ಡೌನ್‌ಲೋಡ್ ಮಾಡಿಕೊಂಡು ಭರ್ತಿ ಮಾಡಿ, ಅಗತ್ಯ ಮೂಲ ದಾಖಲೆಗಳು ಹಾಗೂ ಎರಡು ಸ್ವಯಂ ದೃಢೀಕೃತ ನಕಲು ಪ್ರತಿಗಳೊಂದಿಗೆ ಆಗಸ್ಟ್ 7ರಂದು ಬೆಳಿಗ್ಗೆ 10 ರಿಂದ ಸಂಜೆ 4 ಗಂಟೆಯವರೆಗೆ ನಡೆಯಲಿರುವ ನೇರ ಸಂದರ್ಶನಕ್ಕೆ ಖುದ್ದಾಗಿ ಹಾಜರಾಗಬೇಕು.
ಹುದ್ದೆಗಳ ಅರ್ಹತೆ, ನೇಮಕಾತಿ ಷರತ್ತುಗಳು ಹಾಗೂ ಇತರೆ ಸಂಪೂರ್ಣ ಮಾಹಿತಿಗಾಗಿ ಜಿಲ್ಲಾ ವೆಬ್‌ಸೈಟ್‌ನಲ್ಲಿರುವ ನೇಮಕಾತಿ ಅಧಿಸೂಚನೆಯನ್ನು ಪರಿಶೀಲಿಸುವಂತೆ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
Total Views: 1
Share This Article