Former Anegundi Gram Panchayat member Adinarayana passes away.

ಆನೆಗುಂದಿ ಗ್ರಾ.ಪಂ.ಮಾಜಿ ಸದಸ್ಯ ಆದಿನಾರಾಯಣ ನಿಧನ
ಜಾಹೀರಾತು

ಗಂಗಾವತಿ: ಆ;10:ತಾಲೂಕಿನ ಸಾಣಾಪುರ ಗ್ರಾಮದ ನಿವಾಸಿ, ಆನೆಗುಂದಿ ಗ್ರಾ.ಪಂ.ಮಾಜಿ ಸದಸ್ಯ ಆದಿನಾರಾಯಣ ಮೂರ್ತಿ ಅವರು ಸೋಮವಾರ ಬೆಳಿಗ್ಗೆ ನಿಧನರಾಗಿದ್ದಾರೆ. ಮೃತರಿಗೆ ಒಬ್ಬ ಪುತ್ರ ಹಾಗೂ ಪುತ್ರಿ ಇದ್ದಾರೆ. ಗಂಗಾವತಿ ಭಾಗದಲ್ಲಿ ಉತ್ತಮ ಛಾಯಾಗ್ರಾಹಕರಾಗಿದ್ದರು. ವಿಶೇಷವಾಗಿ ಹಂಪಿ ಉತ್ಸವ, ಆನೆಗುಂದಿ ಉತ್ಸವ ಗಳಲ್ಲಿ ಸಕ್ರಿಯವಾಗಿ ಕೆಲಸ ನಿರ್ವಹಿಸಿ ಜಿಲ್ಲೆಯಲ್ಲಿ ಮಾದರಿಯಾಗಿದ್ದರು. ಗಂಗಾವತಿ ಶಾಸಕ, ಮಾಜಿ ಸಚಿವ ಗಾಲಿ ಜನಾರ್ಧನ ರೆಡ್ಡಿ, ಕೆಎಂಎಫ್ ಮಾಜಿ ಅಧ್ಯಕ್ಷ, ಮಾಜಿ ಶಾಸಕ ಗಾಲಿ ಸೋಮಶೇಖರ್ ರೆಡ್ಡಿ , ಮಾಜಿ ಸಚಿವ ಇಕ್ಬಾಲ್ ಅನ್ಸಾರಿ, ಮಾಜಿ ಸಚಿವ ಕರುಣಾಕರ ರೆಡ್ಡಿ ಸೇರಿದಂತೆ ಅನೇಕ ಗಣ್ಯರು, ಹಾಲಿ ಹಾಗೂ ಮಾಜಿ ಜನಪ್ರತಿನಿಧಿಗಳು, ಬಂಧುಗಳು, ಕುಟುಂಬಸ್ಥರು ಮೃತರ ಆತ್ಮಕ್ಕೆ ದೇವರು ಶಾಂತಿ, ನೆಮ್ಮದಿಯನ್ನು ನೀಡಲಿ, ಕುಟುಂಬಸ್ಥರಿಗೆ ದುಃಖ ಭರಿಸುವ ಶಕ್ತಿಯನ್ನು ನೀಡಲಿ ಎಂದು ಪ್ರಾರ್ಥಿಸಿದ್ದಾರೆ.
Total Views:
0
