ಬೆಂಗಳೂರು: ಕೆಂಪೇಗೌಡ ಲೇಔಟ್–ಮುತ್ತಪ್ಪ ಕಾವಲು, ದೊಡ್ಡನಾಗಮಂಗಲ ಪ್ರದೇಶದಲ್ಲಿ ಕುಡಿಯುವ ನೀರು, ಒಳಚರಂಡಿ ಹಾಗೂ ರಸ್ತೆ ಸೌಲಭ್ಯಗಳನ್ನು ತುರ್ತಾಗಿ ಕಲ್ಪಿಸುವ ಒತ್ತಾಯಿಸಿ ಮನವಿ.

H.Mallikarjun
H.Mallikarjun - Kalyanasiri
2 Min Read









Bengaluru: A memorandum has been submitted urging the urgent provision of drinking water, sewage, and road facilities in the Kempegowda Layout–Muthappa Kavalu and Doddanagamangala areas.

ಬೆಂಗಳೂರು: ಕೆಂಪೇಗೌಡ ಲೇಔಟ್–ಮುತ್ತಪ್ಪ ಕಾವಲು, ದೊಡ್ಡನಾಗಮಂಗಲ ಪ್ರದೇಶದಲ್ಲಿ ಕುಡಿಯುವ ನೀರು, ಒಳಚರಂಡಿ ಹಾಗೂ ರಸ್ತೆ ಸೌಲಭ್ಯಗಳನ್ನು ತುರ್ತಾಗಿ ಕಲ್ಪಿಸುವ ಒತ್ತಾಯಿಸಿ ಮನವಿ.

ಜಾಹೀರಾತು

ಬೆಂಗಳೂರು:   ಕೆಂಪೇಗೌಡ ಲೇಔಟ್–ಮುತ್ತಪ್ಪ ಕಾವಲು, ದೊಡ್ಡನಾಗಮಂಗಲ ಪ್ರದೇಶದಲ್ಲಿ ಸುಮಾರು 200ಕ್ಕೂ ಹೆಚ್ಚು ಬಡ ಕುಟುಂಬಗಳು ಹಲವು ವರ್ಷಗಳಿಂದ ವಾಸಿಸುತ್ತಿದ್ದು, ಇಂದಿಗೂ ಶುದ್ಧ ಕುಡಿಯುವ ನೀರು, ಸಮರ್ಪಕ ಒಳಚರಂಡಿ ವ್ಯವಸ್ಥೆ ಹಾಗೂ ಉತ್ತಮ ರಸ್ತೆ ಸೌಲಭ್ಯಗಳಿಂದ ವಂಚಿತರಾಗಿದ್ದಾರೆ.

  1. ಕುಡಿಯುವ ನೀರು:
    ಪ್ರದೇಶದ ನಿವಾಸಿಗಳಿಗೆ ನಿಯಮಿತವಾಗಿ ಶುದ್ಧ ಕುಡಿಯುವ ನೀರು ದೊರೆಯದೆ, ಮಹಿಳೆಯರು ಮತ್ತು ಮಕ್ಕಳು ನೀರಿಗಾಗಿ ಪರದಾಡುವ ಪರಿಸ್ಥಿತಿ ಇದೆ. ಆದ್ದರಿಂದ ಪ್ರತಿಯೊಂದು ಕುಟುಂಬಕ್ಕೂ ಸಮರ್ಪಕ ಕುಡಿಯುವ ನೀರಿನ ಸಂಪರ್ಕ ಕಲ್ಪಿಸಿ, ತಕ್ಷಣದವರೆಗೆ ಪರ್ಯಾಯವಾಗಿ ನೀರಿನ ವ್ಯವಸ್ಥೆ ಮಾಡಬೇಕು.
  2. ಒಳಚರಂಡಿ:
    ಒಳಚರಂಡಿ ವ್ಯವಸ್ಥೆ ಸಮರ್ಪಕವಾಗಿಲ್ಲದ ಕಾರಣ ಕೊಳಚೆ ನೀರು ರಸ್ತೆಯಲ್ಲಿ ಹಾಗೂ ಮನೆಗಳ ಸುತ್ತಮುತ್ತ ನಿಂತು ದುರ್ವಾಸನೆ ಮತ್ತು ಸೊಳ್ಳೆಗಳ ಸಮಸ್ಯೆ ಉಂಟಾಗುತ್ತಿದೆ. ಆದ್ದರಿಂದ ಶಾಶ್ವತ ಒಳಚರಂಡಿ ವ್ಯವಸ್ಥೆ ನಿರ್ಮಿಸಿ, ಕೊಳಚೆ ನೀರು ಸರಾಗವಾಗಿ ಹರಿದುಹೋಗುವಂತೆ ಕ್ರಮ ಕೈಗೊಳ್ಳಬೇಕು.
  3. ರಸ್ತೆ:
    ಪ್ರದೇಶದ ರಸ್ತೆಗಳು ಹದಗೆಟ್ಟಿದ್ದು, ಮಳೆ ಬಂದಾಗ ಕೆಸರು ಮತ್ತು ನೀರು ನಿಂತು ಜನರು ಸಂಚರಿಸಲು ತೀವ್ರ ತೊಂದರೆಯಾಗುತ್ತಿದೆ. ಶಾಲಾ ಮಕ್ಕಳು, ವೃದ್ಧರು, ಮಹಿಳೆಯರು ಹಾಗೂ ತುರ್ತು ವಾಹನಗಳ ಸಂಚಾರಕ್ಕೂ ಸಮಸ್ಯೆಯಾಗುತ್ತಿದೆ. ಆದ್ದರಿಂದ ರಸ್ತೆಗಳ ತಕ್ಷಣ ದುರಸ್ತಿ ಮಾಡಿ, ಅಗತ್ಯವಿರುವ ಕಡೆಗಳಲ್ಲಿ ಶಾಶ್ವತ ರಸ್ತೆ ನಿರ್ಮಾಣ ಮಾಡಬೇಕು.
    ಆದ್ದರಿಂದ ಮಾನ್ಯ ಮುಖ್ಯಾಧಿಕಾರಿಗಳು ಸಂಬಂಧಪಟ್ಟ ಅಧಿಕಾರಿಗಳೊಂದಿಗೆ ಸ್ಥಳಕ್ಕೆ ಖುದ್ದಾಗಿ ಭೇಟಿ ನೀಡಿ, ಸ್ಥಳ ಪರಿಶೀಲನೆ ನಡೆಸಿ, ಕುಡಿಯುವ ನೀರು, ಒಳಚರಂಡಿ ಮತ್ತು ರಸ್ತೆ ಸಮಸ್ಯೆಗಳಿಗೆ ತುರ್ತಾಗಿ ಶಾಶ್ವತ ಪರಿಹಾರ ಕಲ್ಪಿಸಬೇಕಾಗಿ ನಮ್ಮ ಸಂಘಟನೆಯ ಪರವಾಗಿ ವಿನಂತಿಸುತ್ತೇವೆ.
    ಈ ಮೂಲಭೂತ ಸೌಲಭ್ಯಗಳ ಸಮಸ್ಯೆಯನ್ನು ನಿರ್ಲಕ್ಷಿಸಿದಲ್ಲಿ, ಬಡ ನಿವಾಸಿಗಳ ಪರವಾಗಿ ನಮ್ಮ ಸಂಘಟನೆಯು ಸಂಬಂಧಪಟ್ಟ ಉನ್ನತ ಅಧಿಕಾರಿಗಳ ಗಮನಕ್ಕೆ ವಿಷಯವನ್ನು ತಂದು ಸಂವಿಧಾನಬದ್ಧ ಹಾಗೂ ಕಾನೂನುಬದ್ಧ ಹೋರಾಟ ಕೈಗೊಳ್ಳಬೇಕಾದ ಅನಿವಾರ್ಯತೆ ಉಂಟಾಗುತ್ತದೆ.
    ತಾವು ಈ ಬಡ ಕುಟುಂಬಗಳ ಸಮಸ್ಯೆಯನ್ನು ಮಾನವೀಯ ದೃಷ್ಟಿಯಿಂದ ಪರಿಗಣಿಸಿ ಶೀಘ್ರ ಕ್ರಮ ಕೈಗೊಳ್ಳುವಿರಿ ಎಂಬ ವಿಶ್ವಾಸವಿದೆ.
    ಕೆಂಪೇಗೌಡ ಲೇವೆಟ್ ನಿವಾಸಿಗಳು , ಕರ್ನಾಟಕ ಪರಿಶಿಷ್ಟ ಜಾತಿ–ಪರಿಶಿಷ್ಟ ಪಂಗಡ ಮಹಿಳಾ ಸಬಲೀಕರಣ ಹೋರಾಟ ಸಮಿತಿ    ಸಂಸ್ಥಾಪಕ ರಾಜ್ಯಾಧ್ಯಕ್ಷರು ಡಾ. ಭೀಮಪುತ್ರಿ ನಾಗಮ್ಮ,  ಪ ಜಾ ಪ ಪಂ ಮಹಿಳಾ ಸಬಲೀಕರಣ ಕೊಪ್ಪಳ ಜಿಲ್ಲಾ ಅಧ್ಯಕ್ಷ ಶೀಮತಿ ಸೂಜಾತ,ಇತರರು  ಇದ್ದರು.


 


 

Total Views: 0
Share This Article