Protest demonstration demanding the implementation of revised minimum wages, as well as permanency and job security.

ಪರಿಷ್ಕರಣೆ ಮಾಡಿರುವ ಕನಿಷ್ಟ ವೇತನ ಜಾರಿಗಾಗಿ ಹಾಗೂ ಖಾಯಂಗಾಗಿ ಮತ್ತು ಕೆಲಸದ ಭದ್ರತೆಗಾಗಿ ಒತ್ತಾಯಿಸಿ ಬೃಹತ್ ಪ್ರತಿಭಟನಾ ಧರಣಿ

ಗಂಗಾವತಿ: ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ, ಸಮಾಜ ಕಲ್ಯಾಣ ಇಲಾಖೆ, ಅಲ್ಪಸಂಖ್ಯಾತ ಕಲ್ಯಾಣ ಇಲಾಖೆ, ಪರಿಶಿಷ್ಟ ವರ್ಗಗಳ ಕಲ್ಯಾಣ ಇಲಾಖೆ ಹಾಗೂ ಕರ್ನಾಟಕ ವಸತಿ ಶಿಕ್ಷಣ ಸಂಸ್ಥೆಗಳ ಸಂಘದಲ್ಲಿ ಕಳೆದ 15-20 ವರ್ಷಗಳಿಂದ ಕಡಿಮೆ ಸಂಬಳಕ್ಕೆ ವಸತಿ ನಿಲಯ-ಶಾಲಾ ಕಾಲೇಜುಗಳಲ್ಲಿ ಕೆಲಸ ಮಾಡುತ್ತಿರುವ ಆಡುಗೆಯವರು, ಅಡುಗೆ ಸಹಾಯಕರು, ಸ್ವಚ್ಛತಾಗಾರರು, ಕಾವಲುಗಾರರು, ಡಿ ಗ್ರೂಪ್ ಆಟೆಂಡರ್, ಕಂಪ್ಯೂಟರ್ ಆಪರೇಟರ್, ಡಾಟಾ ಎಂಟ್ರಿ ಆಪರೇಟರ್‌ಗಳು, ಹೊರಗುತ್ತಿ ಅತಿಥಿ ಶಿಕ್ಷಕರು ಯಾವುದೇ ಭದ್ರತೆ ಇಲ್ಲದೆ ನಿರಂತರವಾಗಿ ಕೆಲಸ ಮಾಡುತ್ತಾ ಬಂದಿರುತ್ತಾರೆ. ಗುತ್ತಿಗೆದಾರರು, ವಾರ್ಡನ್‌ರವರು, ತಾಲ್ಲೂಕು ಮತ್ತು ಜಿಲ್ಲಾ ಮಟ್ಟದ ಅಧಿಕಾರಿಗಳು ಹೊರಗುತ್ತಿಗೆ ಸಿಬ್ಬಂದಿಗಳನ್ನು ಶೋಷಣೆ ಮಾಡುತ್ತಿರುತ್ತಾರೆ. ಮನಸ್ಸಿಗೆ ಬಂದ ಹಾಗೆ ಕೆಲಸದಿಂದ ತೆಗೆದುಹಾಕುವುದು ಮತ್ತು ಕಿರುಕುಳ ಕೊಡುವುದು ನಿರಂತರವಾಗಿ ನಡೆಯುತ್ತಿದೆ. ಹಾಗಾಗಿ ಪರಿಷ್ಕರಣೆ ಮಾಡಿರುವ ಕನಿಷ್ಟ ವೇತನ ಜಾರಿಗಾಗಿ ಹಾಗೂ ಖಾಯಂಗಾಗಿ ಮತ್ತು ಕೆಲಸದ ಭದ್ರತೆಗಾಗಿ ಒತ್ತಾಯಿಸಿ 2026 ಆಗಸ್ಟ್ 13 ರಂದು ತಹಶೀಲ್ದಾರರ ಮೂಲಕ ಮಾನ್ಯ ಮುಖ್ಯಮಂತ್ರಿಯವರಿಗೆ ಹಾಗೂ ಸಂಬಂಧಪಟ್ಟ ಇಲಾಖೆಗಳ ಅಧಿಕಾರಿಗಳಿಗೆ ಸಲ್ಲಿಸುತ್ತಿರುವ ಮನವಿ.ಈ ಕೆಳಕಂಡ ಬೇಡಿಕೆಗಳ ಬಗ್ಗೆ ಚರ್ಚಿಸಲು ತಮ್ಮ ಅಧ್ಯಕ್ಷತೆಯಲ್ಲಿ ಇಲಾಖೆಯ ಅಧಿಕಾರಿಗಳು ಹಾಗೂ ಸಂಘದ ಮುಖಂಡರ ಸಭೆಯನ್ನು ಕರೆಯಬೇಕಾಗಿ ಮನವಿ.
ಈ ಸಂದರ್ಭದಲ್ಲಿ ಜಿಲ್ಲಾ ಅಧ್ಯಕ್ಷ ಗ್ಯಾನೇಶ ಕಡಗದ ಕಾರ್ಯದರ್ಶಿ ದಾವಲ್ ಸಾಬ್ ಮುಖಂಡರಾದ ಪಕೀರಪ್ಪ.
ನೂರ ಪಾಷ ಮಂಜುನಾಥ, ಪಾರ್ವತಿ ಶೇಖರ ಶಾಂತಮ್ಮ ಹನುಮಂತ, ರಮೇಶ, ಆನಂದ, ರೇಖಾ ಗಂಗೇಶ.ಸೋಮಣ್ಣ ಆಡವಿ.ಮಂಜುನಾಥ, ವೆಂಕಟೇಶ, ರಾಧ. ಶಿವು.ದುರುಗಮ್ಮ, ಶಾರದ ಲಕ್ಷಮಿ ಇತರರು ಇದ್ದರು.
