ಆ. 15 ರಿಂದ ಕೊಪ್ಪಳದಲ್ಲಿ ಸಸ್ಯ ಸಂತೆ ಮತ್ತು ತೋಟಗಾರಿಕೆ ಅಭಿಯಾನ

H.Mallikarjun
H.Mallikarjun - Kalyanasiri
2 Min Read

From Aug 15, there will be a plant fair and horticulture campaign in Koppal

ಆ. 15 ರಿಂದ ಕೊಪ್ಪಳದಲ್ಲಿ ಸಸ್ಯ ಸಂತೆ ಮತ್ತು ತೋಟಗಾರಿಕೆ ಅಭಿಯಾನ

ಕೊಪ್ಪಳ ಆಗಸ್ಟ್ 14 (ಕರ್ನಾಟಕ ವಾರ್ತೆ): ಕೊಪ್ಪಳ ತೋಟಗಾರಿಕಾ ಇಲಾಖೆ ವತಿಯಿಂದ “ತೋಟಗಾರಿಕೆ ಕ್ಷೇತ್ರಗಳಲ್ಲಿ ಅಭಿವೃದ್ಧಿ ಪಡಿಸಿದ ಉತ್ಕೃಷ್ಟ ಗುಣಮಟ್ಟದ ಸಸಿಗಳ ಮಾರಾಟ, ಒಣಭೂಮಿ ತೋಟಗಾರಿಕೆ ಬೇಸಾಯ ಹಾಗೂ ಆದಾಯ ಹೆಚ್ಚಿಸುವ ತೋಟಗಾರಿಕೆ ಸಸಿ ತಳಿಗಳ ಪರಿಚಯ, ಸ್ವದೇಶಿ ವಿದೇಶಿ ಹಣ್ಣುಗಳ ಸಸಿಗಳ ಪ್ರದರ್ಶನ ಹಾಗೂ ಮಾರಾಟ ಒಳಗೊಂಡ ‘ಸಸ್ಯಸಂತೆ ಮತ್ತು ತೋಟಗಾರಿಕೆ ಅಭಿಯಾನ- 2026’ವನ್ನು ಆಗಸ್ಟ್ 15 ರಿಂದ ಆ. 20 ರವರೆಗೆ ತೋಟಗಾರಿಕೆ ಜಂಟಿನಿರ್ದೇಶಕರ ಕಛೇರಿ ಆವರಣ ಆಯೋಜಿಸಲಾಗಿದ್ದು, ಆ. 15ರ ಬೆಳಿಗ್ಗೆ 10 ಗಂಟೆಗೆ ನಡೆಯಲಿದೆ.
ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಚಿವರಾದ ತಂಗಡಗಿ ಶಿವರಾಜ ಸಂಗಪ್ಪ ಅವರು ಕಾರ್ಯಕ್ರಮ ಉದ್ಘಾಟಿಸುವರು. ತೋಟಗಾರಿಕೆ, ಗಣಿ ಮತ್ತು ಭೂವಿಜ್ಞಾನ ಸಚಿವರಾದ ಎಸ್.ಎಸ್ ಮಲ್ಲರ್ಕಾಜುನ್, ಉನ್ನತ ಶಿಕ್ಷಣ ಸಚಿವರಾದ ಬಸವರಾಜ ರಾಯರಡ್ಡಿ ಹಾಗೂ ಕರ್ನಾಟಕ ವಿಧಾನಸಭೆಯ ವಿರೋಧ ಪಕ್ಷದ ಮುಖ್ಯ ಸಚೇತಕರು ಹಾಗೂ ಕುಷ್ಟಗಿ ಶಾಸಕರಾದ ದೊಡ್ಡನಗೌಡ ಹನುಮಗೌಡ ಪಾಟೀಲ ಅವರು ಕಾರ್ಯಕ್ರಮದ ಘನ ಉಪಸ್ಥಿತಿ ವಹಿಸುವರು. ಕೊಪ್ಪಳ ಶಾಸಕರಾದ ಕೆ.ರಾಘವೇಂದ್ರ ಹಿಟ್ನಾಳ ಅವರು ಸಮಾರಂಭದ ಅಧ್ಯಕ್ಷತೆ ವಹಿಸುವರು.
ಮುಖ್ಯ ಅತಿಥಿಗಳಾಗಿ ಸಂಸದರಾದ ಕೆ.ರಾಜಶೇಖರ್ ಹಿಟ್ನಾಳ, ಗಂಗಾವತಿ ಶಾಸಕರಾದ ಜಿ.ಜನಾರ್ಧನರೆಡ್ಡಿ, ವಿಧಾನ ಪರಿಷತ್ ಸದಸ್ಯರುಗಳಾದ ಶಶೀಲ್ ಜಿ.ನಮೋಶಿ, ಡಾ.ಚಂದ್ರಶೇಖರ್ ಬಿ.ಪಾಟೀಲ, ಶರಣಗೌಡ ಅನ್ನದಾನಗೌಡ ಪಾಟೀಲ ಬಯ್ಯಾಪೂರ ಹಾಗೂ ಹೇಮಲತಾ ನಾಯಕ, ಮುನಿರಾಬಾದ್ ತುಂಗಭದ್ರಾ ಯೋಜನೆ ಅಚ್ಚುಕಟ್ಟು ಪ್ರದೇಶಾಭಿವೃದ್ಧಿ ಪ್ರಾಧಿಕಾರದ (ಕಾಡಾ) ಅಧ್ಯಕ್ಷರಾದ ಹಸೇನ್ ಸಾಬ್ ನಬಿಸಾಬ್ ದೋಟಿಹಾಳ, ಕೊಪ್ಪಳ ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷರಾದ ಪ್ರಸನ್ನ ಗಡಾದ್, ಜಿಲ್ಲಾ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರದ ಅಧ್ಯಕ್ಷರಾದ ರೆಡ್ಡಿ ಶ್ರೀನಿವಾಸ್ ಅವರು ಪಾಲ್ಗೊಳ್ಳುವರು.
ವಿಶೇಷ ಆಹ್ವಾನಿತರಾಗಿ ಸಮಾಜ ಕಲ್ಯಾಣ ಇಲಾಖೆ ಸರ್ಕಾರದ ಕಾರ್ಯದರ್ಶಿಗಳು ಹಾಗೂ ಕೊಪ್ಪಳ ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿಗಳಾದ ಕೆ.ಪಿ.ಮೋಹನರಾಜ, ತೋಟಗಾರಿಕೆ ಹಾಗೂ ರೇಷ್ಮೆ ಇಲಾಖೆ ಸರ್ಕಾರದ ಕಾರ್ಯದರ್ಶಿಗಳಾದ ಆರ್. ಗಿರೀಶ್, ಕೊಪ್ಪಳ ಜಿಲ್ಲಾಧಿಕಾರಿಗಳಾದ ಡಾ. ಸುರೇಶ ಬಿ. ಇಟ್ನಾಳ, ಬೆಂಗಳೂರು ಲಾಲ್ ಬಾಗ್ ತೋಟಗಾರಿಕೆ ನಿರ್ದೇಶಕರಾದ ಇಬ್ರಾಹಿಂ ಮೈಗೂರ, ಕೊಪ್ಪಳ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಗಳಾದ ವರ್ಣಿತ್ ನೇಗಿ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳಾದ ಡಾ.ರಾಮ್ ಎಲ್ ಅರಸಿದ್ಧಿ, ಬೆಂಗಳೂರು ಲಾಲ್ ಬಾಗ್ ಕ್ಷೇತ್ರ ಮತ್ತು ನರ್ಸರಿ ಅಪರ ನಿರ್ದೇಶಕರಾದ ಕೆ.ಎನ್.ಪರಶಿವಮೂರ್ತಿ, ಬೆಂಗಳೂರು ಲಾಲ್ ಬಾಗ್ (ತೋಟದ ಬೆಳೆಗಳು) ತೋಟಗಾರಿಕೆ ಅಪರ ನಿರ್ದೇಶಕರು ಹಾಗೂ ಕೊಪ್ಪಳ ಜಿಲ್ಲಾ ನೋಡಲ್ ಅಧಿಕಾರಿಗಳಾದ ಶಕೀಲ್ ಅಹ್ಮದ್, ಮುನಿರಾಬಾದ್ ತೋಟಗಾರಿಕೆ ಮಹಾವಿದ್ಯಾಲಯದ ಡೀನ್ ಡಾ. ಪ್ರಭುಲಿಂಗ ಜಿ., ಕೊಪ್ಪಳ ಜಿಲ್ಲಾ ಹಾಪ್‌ಕಾಮ್ಸ್ ಅಧ್ಯಕ್ಷರಾದ ಯಂಕಣ್ಣ ಯರಾಶಿ, ಕೊಪ್ಪಳ ಜಿಲ್ಲಾ ಕೃಷಿಕ ಸಮಾಜದ ಅಧ್ಯಕ್ಷರಾದ ಶೇಖರಗೌಡ ಮಾಲಿಪಾಟೀಲ್ ಹಾಗೂ ಕ.ರಾ.ರೈ.ಉ.ಸಂ.ಸ.ಸಂ.ನಿ ನಿರ್ದೇಶಕರು ಹಾಗೂ ಕೊಪ್ಪಳದ ಅಭಿನವಶ್ರೀ ತೋಟಗಾರಿಕೆ ರೈತ ಉತ್ಪಾದಕರ ಸಂಸ್ಥೆಯ ಅಧ್ಯಕ್ಷರಾದ ಕೆ.ಶಿವರಾಮಪ್ಪ ಅವರು ಉಪಸ್ಥಿತರಿರುವರು.
ಕಾರ್ಯಕ್ರಮದಲ್ಲಿ ಕೊಪ್ಪಳದ ತೋಟಗಾರಿಕೆ ಜಂಟಿ ನಿರ್ದೇಶಕರಾದ ಕೃಷ್ಣ ಸಿ. ಉಕ್ಕುಂದ, ಕೊಪ್ಪಳ (ರಾ.ವ.) ಸಹಾಯಕ ತೋಟಗಾರಿಕೆ ನಿರ್ದೇಶಕರಾದ ಮಂಜುನಾಥ ಆರ್. ದೊಡ್ಡಪತ್ತಾರ ಹಾಗೂ ತೋಟಗಾರಿಕೆ ಇಲಾಖೆಯ ಅಧಿಕಾರಿಗಳು ಹಾಗೂ ಸಿಬ್ಬಂದಿಗಳು ಉಪಸ್ಥಿತರಿರುವರು ಎಂದು ಕೊಪ್ಪಳ ತೋಟಗಾರಿಕೆ ಇಲಾಖೆ ಪ್ರಕಟಣೆ ತಿಳಿಸಿದೆ.
Total Views: 0
ಜಾಹೀರಾತು
ಜಾಹೀರಾತು
Share This Article