Former MLA R. Narendra and Kusumraj—son of Minister Puttarangashetty—provided personal financial assistance to the victims of the Forest Department's firing

ಅರಣ್ಯ ಇಲಾಖೆಯ ಗುಂಡೆಟೆಗೆ ಬಲಿಯಾದವರಿಗೆ ವೈಯಕ್ತಿಕ ಧನ ಸಹಾಯ ಮಾಡಿದ ಮಾಜಿ ಶಾಸಕರಾದ ಆರ್ ನರೇಂದ್ರ ಮತ್ತು ಸಚಿವ ಪುಟ್ಟರಂಗಶೇಟ್ಟರ ಪುತ್ರ
ಕುಸುಮರಾಜ್ .


ವರದಿ : ಬಂಗಾರಪ್ಪ .ಸಿ
ಹನೂರು : ತಾಲೂಕಿನ ಮರಿಯಮಂಗಲ ಗ್ರಾಮದಲ್ಲಿ ಅರಣ್ಯ ಇಲಾಖೆ ಸಿಬ್ಬಂದಿಯ ಗುಂಡೇಟಿಗೆ ಬಲಿಯಾದ ಮೂವರ ಕುಟುಂಬಗಳನ್ನು ಹನೂರು ವಿಧಾನಸಭಾ ಕ್ಷೇತ್ರದ ಜನಪ್ರಿಯ ಮಾಜಿ ಶಾಸಕರಾದ ಶ್ರೀ ಆರ್. ನರೇಂದ್ರ ರಾಜುಗೌಡ ಅವರು ಭೇಟಿ ನೀಡಿ, ಮೃತರ ಕುಟುಂಬಸ್ಥರಿಗೆ ಸಾಂತ್ವನ ಹೇಳಿ ಅಂತಿಮ ನಮನ ಸಲ್ಲಿಸಿದರು.
ಹನೂರು ತಾಲ್ಲೂಕಿನ ಮೃತರ ಸ್ವ ಗ್ರಾಮದಲ್ಲಿ
ಮೃತರ ಕುಟುಂಬಗಳನ್ನು ಬೇಟಿಯಾಗಿ ನೋವು ಮತ್ತು ಸಂಕಟವನ್ನು ಹಂಚಿಕೊಂಡ ಅವರು, ಮೃತಪಟ್ಟ ಕುಟುಂಬಗಳಿಗೆ ಧೈರ್ಯ ತುಂಬಿದರು. ದುರ್ಘಟನೆಯಿಂದ ಕುಟುಂಬಗಳು ಅನುಭವಿಸುತ್ತಿರುವ ನೋವು ಅತ್ಯಂತ ದುಃಖಕರವಾಗಿದ್ದು, ಈ ಸಂದರ್ಭದಲ್ಲಿ ಅವರೊಂದಿಗೆ ನಿಲ್ಲುವುದು ನಮ್ಮೆಲ್ಲರ ಮಾನವೀಯ ಕರ್ತವ್ಯವಾಗಿದೆ ಎಂದು ಹೇಳಿದರು.
ಮೃತರ ಆತ್ಮಕ್ಕೆ ಶಾಂತಿ ದೊರೆಯಲಿ ಹಾಗೂ ಕುಟುಂಬಸ್ಥರಿಗೆ ಈ ಅಪಾರ ದುಃಖವನ್ನು ಭರಿಸುವ ಶಕ್ತಿ ನೀಡಲಿ ಎಂದು ಪ್ರಾರ್ಥಿಸಿದ ಅವರು, ಸಂತ್ರಸ್ತ ಕುಟುಂಬಗಳಿಗೆ ನ್ಯಾಯ ದೊರಕಬೇಕು ಮತ್ತು ಘಟನೆಯ ಕುರಿತು ನಿಷ್ಪಕ್ಷಪಾತವಾಗಿ ಪರಿಶೀಲನೆ ನಡೆಯಬೇಕು ಎಂದು ಒತ್ತಾಯಿಸಿದರು.
ಅರಣ್ಯ ಪ್ರದೇಶಗಳಲ್ಲಿ ವಾಸಿಸುವ ಗ್ರಾಮೀಣ ಜನರು ಮತ್ತು ಅರಣ್ಯ ಇಲಾಖೆ ನಡುವೆ ಸೌಹಾರ್ದಯುತ ವಾತಾವರಣ ನಿರ್ಮಾಣವಾಗಬೇಕು. ಇಂತಹ ಘಟನೆಗಳು ಮರುಕಳಿಸದಂತೆ ಸಂಬಂಧಪಟ್ಟ ಅಧಿಕಾರಿಗಳು ಅಗತ್ಯ ಕ್ರಮಗಳನ್ನು ಕೈಗೊಳ್ಳಬೇಕು. ಅಮಾಯಕ ಜನರ ಉಂಟಾಗದಂತೆ ಮುನ್ನೆಚ್ಚರಿಕೆ ಹಾಗೂ ಸೂಕ್ತ ವ್ಯವಸ್ಥೆಗಳನ್ನು ಕಲ್ಪಿಸುವುದು ಸರ್ಕಾರ ಮತ್ತು ಅಧಿಕಾರಿಗಳ ಜವಾಬ್ದಾರಿಯಾಗಿದೆ ಮತ್ತು ಪರಿಹಾರ ಒದಗಿಸಬೇಕು. ಕುಟುಂಬಗಳ ಮುಂದಿನ ಜೀವನಕ್ಕೆ ಅಗತ್ಯವಾದ ಭದ್ರತೆ ಹಾಗೂ ನೆರವು ನೀಡುವ ಕುರಿತು ಸರ್ಕಾರ ಸೂಕ್ತ ಕ್ರಮ ಕೈಗೊಳ್ಳಬೇಕು ಎಂದು ಮಾಜಿ ಶಾಸಕರಾದ ಆರ್. ನರೇಂದ್ರರವರು ನೊಂದವರಿಗೆ ತಿಳಿಸಿದರು.
ಈ ದುಃಖದ ಸಂದರ್ಭದಲ್ಲಿ ಮರಿಯಮಂಗಲ ಗ್ರಾಮದ ಸಂತ್ರಸ್ತ ಕುಟುಂಬಗಳೊಂದಿಗೆ ತಾವು ಸದಾ ನಿಲ್ಲುವುದಾಗಿ ಭರವಸೆ ನೀಡಿದ ಅವರು, ಮೃತರ ಆತ್ಮಕ್ಕೆ ಶ್ರದ್ಧಾಂಜಲಿ ಸಲ್ಲಿಸಿ ಕುಟುಂಬಸ್ಥರಿಗೆ ಧೈರ್ಯ ತುಂಬಿದರು.
ಇದೇ ಸಮಯದಲ್ಲಿ ಚಾಮರಾಜನಗರ ಜಿಲ್ಲಾ ಉಸ್ತುವಾರಿ ಸಚಿವರಾದ ಶ್ರೀ ಪುಟ್ಟರಂಗಶೆಟ್ಟಿ ಅವರ ಸುಪುತ್ರರಾದ ಕುಸುಮರಾಜ್ ಅವರು ಮತ್ತು ನರೇಂದ್ರ ರಾಜುಗೌಡ ರವರ ಜೊತೆಗೆ ಮೃತಪಟ್ಟ ಮೂವರ ಕುಟುಂಬಕ್ಕೆ ತಲಾ ವೈಯಕ್ತಿಕವಾಗಿ 2 ಲಕ್ಷ ರೂಪಾಯಿಯ ಪರಿಹಾರವನ್ನು ನೀಡಿದರು.
ಮೃತರ ಆತ್ಮಕ್ಕೆ ಶಾಂತಿ ಸಿಗಲಿ. ಕುಟುಂಬಸ್ಥರಿಗೆ ಈ ದುಃಖವನ್ನು ಭರಿಸುವ ಶಕ್ತಿ ನೀಡಲೆಂದು ಭಗವಂತನಲ್ಲಿ ಪ್ರಾರ್ಥಿಸುತ್ತೇನೆ ಎಂದು ಸಚಿವ ಪುಟ್ಟರಂಗಶೇಟ್ಟರ ಸುಪುತ್ರರಾದ ಕುಸುಮರಾಜ್ ತಿಳಿಸಿದರು.
ಇದೇ ಸಂದರ್ಭದಲ್ಲಿ ಜಿಲ್ಲಾ ಯುವ ಕಾಂಗ್ರೆಸ್ ಅಧ್ಯಕ್ಷರಾದ ಯೋಗೇಂದ್ರ . ಗ್ರಾಮ ಪಂಚಾಯಿತಿ ಮಾಜಿ ಅಧ್ಯಕ್ಷ ಜಾನ್ .ತಾಲ್ಲೂಕು ಪಂಚಾಯತಿ ಮಾಜಿ ಸದಸ್ಯರಾದ ಜಾವೆದ್ . ಸೊಸೈಟಿ ಬಸವರಾಜು .ಚೇತನ್ ದೊರೈರಾಜು. ಚಾಮುಲ್ ನಿರ್ದೇಶಕ ರಾದ ತಾರಿಖ್ . ಮಾಜಿ ಗ್ರಾಮಪ ಸದಸ್ಯ ಕುಮಾರ್ . ಮಲ್ಲಾರ್ . ವಿನ್ಸೆಂಟ್ . ಡೈರಿ ಅಧ್ಯಕ್ಷ ಜ್ಞಾನ ಪ್ರಕಾಶ್ . ಸೇರಿದಂತೆ ಇನ್ನಿತರರು ಹಾಜರಿದ್ದರು.





