ತಾಲ್ಲೂಕು ಮಟ್ಟದ ದಸರಾ ಕ್ರೀಡಾಕೂಟ: ಕ್ರೀಡಾಪಟುಗಳಿಗೆ ಆಹ್ವಾನ

H.Mallikarjun
H.Mallikarjun - Kalyanasiri
1 Min Read

Taluk-level Dasara Sports Meet: Invitation to Athletes




ತಾಲ್ಲೂಕು ಮಟ್ಟದ ದಸರಾ ಕ್ರೀಡಾಕೂಟ: ಕ್ರೀಡಾಪಟುಗಳಿಗೆ ಆಹ್ವಾನ

ಜಾಹೀರಾತು
ಜಾಹೀರಾತು


ಕೊಪ್ಪಳ ಆಗಸ್ಟ್ 18 (ಕರ್ನಾಟಕ ವಾರ್ತೆ): ಜಿಲ್ಲೆಯಲ್ಲಿ ತಾಲ್ಲೂಕು ಮಟ್ಟದ ದಸರಾ ಕ್ರೀಡಾಕೂಟ ಸಂಘಟಿಸಲಾಗುತ್ತಿದ್ದು, ಈ ಮೂಲಕ ಅರ್ಹ ಕ್ರೀಡಾಪಟುಗಳಿಗೆ ಆಹ್ವಾನಿಸಲಾಗಿದೆ ಎಂದು ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ಸಹಾಯಕ ನಿರ್ದೇಶಕರಾದ ವಿಠ್ಠಲ್ ಜಾಬಗೌಡರ ಅವರು ತಿಳಿಸಿದ್ದಾರೆ.
 ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ವತಿಯಿಂದ 2026-27ನೇ ಸಾಲಿನ ದಸರಾ ಕ್ರೀಡಾಕೂಟವನ್ನು ಪುರುಷ ಹಾಗೂ ಮಹಿಳೆಯರಿಗಾಗಿ ತಾಲ್ಲೂಕು, ಜಿಲ್ಲಾ, ವಿಭಾಗ ಹಾಗೂ ರಾಜ್ಯ ಮಟ್ಟದಲ್ಲಿ ಆಯೋಜಿಸಲಾಗುತ್ತಿದೆ. ತಾಲ್ಲೂಕು ಮಟ್ಟದ ದಸರಾ ಕ್ರೀಡಾಕೂಟವನ್ನು ಸೆಪ್ಟೆಂಬರ್ 5 ರೊಳಗಾಗಿ ಹಾಗೂ ಜಿಲ್ಲಾ ಮಟ್ಟದ ಕ್ರೀಡಾಕೂಟವನ್ನು ಸೆಪ್ಟೆಂಬರ್ 18 ರೊಳಗಾಗಿ ಸಂಘಟಿಸಲು ಸೂಚಿಸಲಾಗಿದೆ. ತಾಲ್ಲೂಕು ಮಟ್ಟದಲ್ಲಿ ಅಥ್ಲೆಟಿಕ್ಸ್, ವಾಲಿಬಾಲ್, ಫುಟ್ಬಾಲ್, ಖೋ-ಖೋ, ಕಬಡ್ಡಿ, ಥ್ರೋಬಾಲ್ ಹಾಗೂ ಯೋಗಾಸನ ಸ್ಪರ್ಧೆಗಳು ನಡೆಯಲಿವೆ.
 ಅದೇ ರೀತಿ ರಾಜ್ಯ ಮಟ್ಟದ ದಸರಾ ಕ್ರೀಡಾಕೂಟವು ಅಕ್ಟೋಬರ್ 11 ರಿಂದ 14 ರವರೆಗೆ ಮೈಸೂರಿನ ಚಾಮುಂಡಿ ವಿಹಾರ ಕ್ರೀಡಾಂಗಣದಲ್ಲಿ ನಡೆಯಲಿದೆ.
 ಕೊಪ್ಪಳ ಜಿಲ್ಲೆಯ ಆಸಕ್ತ ಪುರುಷ ಹಾಗೂ ಮಹಿಳಾ ಕ್ರೀಡಾಪಟುಗಳು, ದೈಹಿಕ ಶಿಕ್ಷಣ ಶಿಕ್ಷಕರು, ಶೈಕ್ಷಣಿಕ ಸಂಸ್ಥೆಗಳು ಹಾಗೂ ಎನ್‌ಜಿಒಗಳು ಕ್ರೀಡಾಕೂಟದಲ್ಲಿ ಭಾಗವಹಿಸಲು ಅಗತ್ಯ ಸಿದ್ಧತೆ ಮಾಡಿಕೊಳ್ಳುವಂತೆ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಕೋರಿದೆ.
 ಹೆಚ್ಚಿನ ಮಾಹಿತಿಗಾಗಿ ಸಹಾಯಕ ನಿರ್ದೇಶಕರ ಕಾರ್ಯಾಲಯ, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ, ಕೊಪ್ಪಳ ಜಿಲ್ಲಾ ಕಚೇರಿಯನ್ನು ಅಥವಾ ಕಚೇರಿ ದೂರವಾಣಿ ಸಂಖ್ಯೆ 08539-230121 ಗೆ ಸಂಪರ್ಕಿಸಬಹುದು ಎಂದು ಪ್ರಕಟಣೆ ತಿಳಿಸಿದೆ

Total Views: 0
ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು
Share This Article