ಪ್ಟೆಂಬರ್ 12 ರಂದು ಜಿಲ್ಲೆಯಾದ್ಯಂತ ರಾಷ್ಟ್ರೀಯ ಲೋಕ್ ಅದಾಲತ್

H.Mallikarjun
H.Mallikarjun - Kalyanasiri
2 Min Read

 

National Lok Adalat across the district on September 12

ಪ್ಟೆಂಬರ್ 12 ರಂದು ಜಿಲ್ಲೆಯಾದ್ಯಂತ ರಾಷ್ಟ್ರೀಯ ಲೋಕ್ ಅದಾಲತ್

ಜಾಹೀರಾತು
ಜಾಹೀರಾತು

ರಾಜೀಯಾಗಬಲ್ಲ ಪ್ರಕರಣಗಳ ಸುಲಭ ಇತ್ಯರ್ಥಕ್ಕೆ ಅವಕಾಶ: ನ್ಯಾ. ಮಹಾಂತೇಶ ದರಗದ
ಕೊಪ್ಪಳ ಆಗಸ್ಟ್ 19, (ಕರ್ನಾಟಕ ವಾರ್ತೆ): ಸೆಪ್ಟೆಂಬರ್ 12 ರಂದು ಕೊಪ್ಪಳ ಜಿಲ್ಲೆಯಾದ್ಯಂತ ಹಮ್ಮಿಕೊಂಡಿರುವ “ ರಾಷ್ಟ್ರೀಯ  ಲೋಕ್ ಅದಾಲತ್” ಕಾರ್ಯಕ್ರಮದಲ್ಲಿ ರಾಜೀ ಆಗಬಹುದಾದ ಎಲ್ಲಾ ತರಹದ ಪ್ರಕರಣಗಳನ್ನು ಇತ್ಯರ್ಥಪಡಿಸಿಕೊಳ್ಳಲು ಅವಕಾಶವಿದೆ ಎಂದು ಹಿರಿಯ ಸಿವಿಲ್ ನ್ಯಾಯಾಧೀಶರು ಹಾಗೂ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿಗಳಾದ ಮಹಾಂತೇಶ ಎಸ್. ದರಗದ ಹೇಳಿದರು.
ಅವರು ಮಂಗಳವಾರದಂದು ಕೊಪ್ಪಳ ಜಿಲ್ಲಾ ನ್ಯಾಯಾಲಯದ ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿಗಳ ಕಚೇರಿ ಸಭಾಂಗಣದಲ್ಲಿ ಕರೆದ ಪೂರ್ವಭಾವಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು.
ಕೊಪ್ಪಳ ಜಿಲ್ಲೆಯ ಎಲ್ಲಾ ನ್ಯಾಯಾಲಯಗಳಲ್ಲಿ ಸೆ.12 ರಂದು ರಾಷ್ಟ್ರೀಯ ಲೋಕ್ ಅದಾಲತ್ ನಡೆಯಲಿದ್ದು, ಜಿಲ್ಲೆಯ ಸಾರ್ವಜನಿಕರು ತಮ್ಮ ವ್ಯಾಜ್ಯ ಪೂರ್ವ ಹಾಗೂ ನ್ಯಾಯಾಲಯಗಳಲ್ಲಿ ಬಾಕಿ ಇರುವ ಪ್ರಕರಣಗಳನ್ನು ತಕ್ಷಣ ಪರಿಹಾರ ಪಡೆದುಕೊಳ್ಳಲು ಇದೊಂದು ಸುವರ್ಣಾವಕಾಶವಾಗಿದೆ. ಯಾವುದೇ ಖರ್ಚು ಇಲ್ಲದೇ ಶೀಘ್ರ ತೀರ್ಮಾನಕ್ಕಾಗಿ ಲೋಕ್ ಅದಾಲತ್ ಒಂದು ವಿಶೇಷ ಅವಕಾಶವಾಗಿದೆ. ನ್ಯಾಯಾಲಯಗಳಲ್ಲಿ ಬಾಕಿ ಇರುವ ಪ್ರಕರಣಗಳ ದಾವೆದಾರರು ಹಾಗೂ ಕಕ್ಷಿದಾರರು   ರಾಷ್ಟ್ರೀಯ    ಲೋಕ ಅದಾಲತ್‌ನಲ್ಲಿ ಭಾಗವಹಿಸಿ ತಮ್ಮ ಪ್ರಕರಣಗಳನ್ನು ಇತ್ಯರ್ಥಪಡಿಸಿಕೊಳ್ಳಬಹುದಾಗಿದೆ ಎಂದರು.
ವ್ಯಾಜ್ಯ ಪೂರ್ವ ಪ್ರಕರಣಗಳಾದ ಚಿಕ್ ಅಮಾನ್ಯದ ಪ್ರಕರಣಗಳು, ಬ್ಯಾಂಕ್ ವಸೂಲಾತಿ ಪ್ರಕರಣಗಳು, ಉದ್ಯೋಗದಲ್ಲಿ ಪುನರ್ ಸ್ಥಾಪಿಸಲ್ಪಡುವ ಪ್ರಕರಣಗಳು, ವಿದ್ಯುತ್ ಹಾಗೂ ನೀರಿನ ಶುಲ್ಕಗಳು, ಇತರ ಪ್ರಕರಣಗಳಾದ ರಾಜೀಯಾಗಬಲ್ಲ ಅಪರಾಧಿಕ ಪ್ರಕರಣಗಳು, ವೈವಾಹಿಕ ಪ್ರಕರಣಗಳು ಮತ್ತು ಇತರ ಸಿವಿಲ್ ಪ್ರಕರಣಗಳು, ಕರ್ನಾಟಕ ರಿಯಲ್ ಎಸ್ಟೇಟ್ ಪ್ರಾಧಿಕಾರಕ್ಕೆ ಸಂಬಂಧಪಟ್ಟ ಪ್ರಕರಣಗಳು (ಆರ್.ಇ.ಆರ್.ಎ), ಜಿಲ್ಲಾ ಗ್ರಾಹಕರ ವೇದಿಕೆಯಲ್ಲಿನ ಪ್ರಕರಣಗಳು, ಸಾಲ ವಸೂಲಾತಿ, ನ್ಯಾಯಾಧೀಕರಣದ ಪ್ರಕರಣಗಳು, ಕರ್ನಾಟಕ ವಿದ್ಯುತ್ ನಿಯಂತ್ರಣ ಆಯೋಗ, ಖಾಯಂ ಜನತಾ ನ್ಯಾಯಾಲಯದಲ್ಲಿನ ಪ್ರಕರಣಗಳು ಮತ್ತು ನ್ಯಾಯಾಲಯದಲ್ಲಿ ಬಾಕಿ ಇರುವ ಪ್ರಕರಣಗಳಾದ ರಾಜೀಯಾಗಬಲ್ಲ ಅಪರಾಧಿಕ ಪ್ರಕರಣಗಳು, ಚೆಕ್ ಅಮಾನ್ಯದ ಪ್ರಕರಣಗಳು, ಬ್ಯಾಂಕ್ ವಸೂಲಾತಿ ಪ್ರಕರಣಗಳು, ಮೋಟಾರು ಅಪಘಾತ ಪರಿಹಾರ ನ್ಯಾಯಾಧೀಕರಣದ ಪ್ರಕರಣಗಳು, ಕಾರ್ಮಿಕ ವಿವಾದಗಳು, ವಿದ್ಯುತ್ ಹಾಗೂ ನೀರಿನ ಶುಲ್ಕಗಳು, ವೈವಾಹಿಕ ಪ್ರಕರಣಗಳು, ಭೂಸ್ವಾಧೀನ ಪ್ರಕರಣಗಳು, ವೇತನ ಮತ್ತು ಭತ್ಯೆಗಳಿಗೆ ಸಂಬಂಧಿಸಿದ ಸೇವಾ ಪ್ರಕರಣಗಳು ಹಾಗೂ ಪಿಂಚಣಿ ಪ್ರಕರಣಗಳು, ಕಂದಾಯ ಪ್ರಕರಣಗಳು ರಾಜೀಯಾಗಬಲ್ಲ ಸಿವಿಲ್ ಮತ್ತು ಇತರೆ ಪ್ರಕರಣಗಳನ್ನು ಈ ಲೋಕ ಅದಾಲತ್‌ನಲ್ಲಿ ರಾಜೀ ಮೂಲಕ ಇತ್ಯರ್ಥಪಡಿಸಿಕೊಳ್ಳಬಹುದಾಗಿದೆ ಎಂದು ಹೇಳಿದರು.
ನ್ಯಾಯಾಲಯಗಳಲ್ಲಿ ಉಭಯ ಪಕ್ಷಗಾರರು ರಾಜೀ ಮಾಡಿಕೊಳ್ಳಲು ಸೂಕ್ತ ಮಾರ್ಗದರ್ಶನ ನೀಡಲಾಗುವುದು. ಇಬ್ಬರಿಗೂ ಒಪ್ಪಿಗೆಯಾಗುವಂತೆ ಪ್ರಕರಣವು ತೀರ್ಮಾನವಾಗುವುದರಿಂದ ಬಾಂಧವ್ಯವು ಉಳಿದು ವಿವಾದಗಳು ತೀರ್ಮಾನವಾಗುತ್ತದೆ. ರಾಜೀ ಸಂಧಾನದಲ್ಲಿ ಯಾವುದೇ ವ್ಯಕ್ತಿಗಳಿಗೆ ಸೋಲು ಇರುವುದಿಲ್ಲ. ಇಬ್ಬರಿಗೂ ಗೆಲುವಿನಲ್ಲಿರಲು ಸಾಧ್ಯವಾಗುವುದರ ಜೊತೆಗೆ ಸಂಬಂಧಗಳನ್ನು ಒಳ್ಳೆಯ ರೀತಿಯಲ್ಲಿಡಲು ಸಾಧ್ಯವಾಗುತ್ತದೆ. ನ್ಯಾಯಾಲಯದಲ್ಲಿ ದಾಖಲಾಗದೇ ಇರುವ ಪ್ರಕರಣಗಳನ್ನು ಸಹ ರಾಜೀ ಸಂಧಾನದ ಮೂಲಕ ಬಗೆಹರಿಸಿಕೊಳ್ಳಲು ಅವಕಾಶ ಕಲ್ಪಿಸಲಾಗಿದೆ. ರಾಜೀ ಸಂಧಾನದ ಮೂಲಕ ಪ್ರಕರಣಗಳನ್ನು ಇತ್ಯರ್ಥಪಡಿಸಿಕೊಂಡಲ್ಲಿ ಸಿವಿಲ್ ಪ್ರಕರಣಗಳಲ್ಲಿ ನ್ಯಾಯಾಲಯಕ್ಕೆ ಪಾವತಿಸಲಾದ ನ್ಯಾಯಾಲಯ ಶುಲ್ಕವನ್ನು ಪೂರ್ಣವಾಗಿ ಮರುಪಾವತಿಸಲಾಗುವುದು. ಸಂಧಾನಕಾರರು ಸೂಚಿಸುವ ಪರಿಹಾರ ಒಪ್ಪಿಗೆಯಾದಲ್ಲಿ ಮಾತ್ರ ರಾಜೀ ಮಾಡಿಕೊಳ್ಳಬಹುದು. ಈ ಹಿನ್ನೆಲೆಯಲ್ಲಿ ಸರ್ವೋಚ್ಛ ಮತ್ತು ಉಚ್ಛ ನ್ಯಾಯಾಲಯದವರು ಇಂತಹ ಲೋಕ್ ಅದಾಲತ್ ಕಾರ್ಯಕ್ರಮಗಳನ್ನು ಹಮ್ಮಿಕೊಂಡಿದ್ದಾರೆ ಎಂದು ಹೇಳಿದರು.
ಸಭೆಯಲ್ಲಿ ಜೆಸ್ಕಾಂ, ಕಾರ್ಮಿಕ ಇಲಾಖೆ, ಅರಣ್ಯ ಇಲಾಖೆ, ಶಿಕ್ಷಣ ಇಲಾಖೆ, ಜಿಲ್ಲಾ ಪೊಲೀಸ್ ಇಲಾಖೆ ಸೇರಿದಂತೆ ವಿವಿಧ ಇಲಾಖೆಗಳ ಅಧಿಕಾರಿಗಳು ಉಪಸ್ಥಿತರಿದ್ದರು.
Total Views: 0
ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು
Share This Article