ಆ. 27 ರಿಂದ ಕೊಪ್ಪಳದಲ್ಲಿ ವಿಶೇಷ ಚೇತನರ ಕ್ರೀಡಾ ತರಬೇತಿ ಕಾರ್ಯಾಗಾರ

H.Mallikarjun
H.Mallikarjun - Kalyanasiri
1 Min Read

 

Sports training workshop for differently-abled persons in Koppal from August 27

ಆ. 27 ರಿಂದ ಕೊಪ್ಪಳದಲ್ಲಿ ವಿಶೇಷ ಚೇತನರ ಕ್ರೀಡಾ ತರಬೇತಿ ಕಾರ್ಯಾಗಾರ

ಜಾಹೀರಾತು
ಕೊಪ್ಪಳ ಆಗಸ್ಟ್ 24 (ಕರ್ನಾಟಕ ವಾರ್ತೆ): ವಿಶೇಷ ಚೇತನ ಕ್ರೀಡಾಪಟುಗಳಲ್ಲಿ ಕ್ರೀಡಾಸಕ್ತಿ ಹಾಗೂ ಪ್ರತಿಭೆಯನ್ನು ಉತ್ತೇಜಿಸುವ ಮತ್ತು ಕ್ರೀಡಾ ಸಾಮರ್ಥ್ಯವನ್ನು ಅಭಿವೃದ್ಧಿಪಡಿಸುವ ಉದ್ದೇಶದಿಂದ ಮೂರು ದಿನಗಳ ವಿಶೇಷ ಚೇತನರ ಕ್ರೀಡಾ ತರಬೇತಿ ಕಾರ್ಯಾಗಾರವನ್ನು ಆಯೋಜಿಸಲಾಗಿದೆ ಎಂದು ಕೊಪ್ಪಳ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಸಹಾಯಕ ನಿರ್ದೇಶಕರಾದ ವಿಠ್ಠಲ್ ಜಾಬಗೌಡರ ಅವರು ತಿಳಿಸಿದ್ದಾರೆ.
ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ, ಜಿಲ್ಲಾ ಅಂಗವಿಕಲ ಕಲ್ಯಾಣ ಇಲಾಖೆ, ಕೊಪ್ಪಳ ಹಾಗೂ ಆಗು ನೀ ಅನಿಕೇತನ ಫೌಂಡೇಶನ್, ಬೆಂಗಳೂರು ಇವರ ಸಂಯುಕ್ತಾಶ್ರಯದಲ್ಲಿ ಆಗಸ್ಟ್ 27, 28 ಮತ್ತು 29ರಂದು ಜಿಲ್ಲಾ ಕ್ರೀಡಾಂಗಣದಲ್ಲಿ ಈ ಕಾರ್ಯಾಗಾರ ನಡೆಯಲಿದೆ.
ಕಾರ್ಯಾಗಾರದಲ್ಲಿ ವಿಶೇಷ ಚೇತನ ಕ್ರೀಡಾಪಟುಗಳಿಗೆ ವಿವಿಧ ಕ್ರೀಡಾ ವಿಭಾಗಗಳಲ್ಲಿ ಮೂಲಭೂತ ತರಬೇತಿ, ದೈಹಿಕ ಕ್ಷಮತೆ ವೃದ್ಧಿ, ಕ್ರೀಡಾ ಕೌಶಲ್ಯಾಭಿವೃದ್ಧಿ ಹಾಗೂ ಸ್ಪರ್ಧಾತ್ಮಕ ಮನೋಭಾವ ಬೆಳೆಸುವ ಕುರಿತು ಪರಿಣಿತ ತರಬೇತುದಾರರಿಂದ ತರಬೇತಿ ನೀಡಲಾಗುತ್ತದೆ. ಅಂತರರಾಷ್ಟ್ರೀಯ ಮಟ್ಟದ ಕಾಮನ್‌ವೆಲ್ತ್ ಕ್ರೀಡಾಕೂಟದಲ್ಲಿ ಭಾಗವಹಿಸಿ ಪದಕ ವಿಜೇತರಾದ ಕ್ರೀಡಾಪಟುಗಳು ಸಹ ತರಬೇತಿ ನೀಡಲು ಆಗಮಿಸಲಿದ್ದಾರೆ.
ಈ ತರಬೇತಿ ಕಾರ್ಯಾಗಾರದಲ್ಲಿ ಭಾಗವಹಿಸಲು ಆಸಕ್ತ ವಿಶೇಷ ಚೇತನ ಕ್ರೀಡಾಪಟುಗಳು ಸಹಾಯಕ ನಿರ್ದೇಶಕರ ಕಾರ್ಯಾಲಯ, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ, ಜಿಲ್ಲಾ ಕ್ರೀಡಾಂಗಣ, ಗದಗ ರಸ್ತೆ, ಕೊಪ್ಪಳ ಕಚೇರಿಯನ್ನು ಸಂಪರ್ಕಿಸಬಹುದು. ಹೆಚ್ಚಿನ ಮಾಹಿತಿಗಾಗಿ 08539-230121 ದೂರವಾಣಿ ಸಂಖ್ಯೆಯನ್ನು ಸಂಪರ್ಕಿಸಬಹುದು ಪ್ರಕಟಣೆ ತಿಳಿಸಿದೆ.
Total Views: 0
ಜಾಹೀರಾತು
Share This Article