ಪತ್ರಕರ್ತರ ಮೇಲಿನ ಹಲ್ಲೆ ಖಂಡಿಸಿ ಕ್ರಮಕ್ಕೆ ಆಗ್ರಹಿಸಿ ಮೀಡಿಯಾ ಕ್ಲಬ್‌ನಿಂದ ಮುಖ್ಯಮಂತ್ರಿಗಳಿಗೆ ಮನವಿ

H.Mallikarjun
H.Mallikarjun - Kalyanasiri
2 Min Read

Media Club submits memorandum to Chief Minister condemning the assault on journalists and demanding action.

ಪತ್ರಕರ್ತರ ಮೇಲಿನ ಹಲ್ಲೆ ಖಂಡಿಸಿ ಕ್ರಮಕ್ಕೆ ಆಗ್ರಹಿಸಿ ಮೀಡಿಯಾ ಕ್ಲಬ್‌ನಿಂದ ಮುಖ್ಯಮಂತ್ರಿಗಳಿಗೆ ಮನವಿ

ಕೊಪ್ಪಳ:ಉಡುಪಿ ಜಿಲ್ಲೆಯ ಕುಂದಾಪುರದಲ್ಲಿ ಕನ್ನಡಪ್ರಭ ಪತ್ರಿಕೆಯ ತಾಲೂಕು ವರದಿಗಾರ ಶ್ರೀಕಾಂತ್ ಹೆಮ್ಮಾಡಿ ಅವರ ಮೇಲೆ ಹಲ್ಲೆ ನಡೆಸಿದ ಆರೋಪದ ಹಿನ್ನೆಲೆಯಲ್ಲಿ, ಆರೋಪಿತರ ವಿರುದ್ಧ ಕಠಿಣ  ಕ್ರಮ ಕೈಗೊಳ್ಳಬೇಕು ಎಂದು ಕೊಪ್ಪಳ ಮೀಡಿಯಾ ಕ್ಲಬ್ ಆಗ್ರಹಿಸಿದೆ.

ಜಾಹೀರಾತು

 ಕೊಪ್ಪಳ ಮೀಡಿಯಾ ಕ್ಲಬ್ ನಲ್ಲಿ ಸಭೆ ಸೇರಿ, ಖಂಡನಾ ನಿರ್ಣಯ ಮಾಡಿ,ನಂತರ ಜಿಲ್ಲಾಧಿಕಾರಿ ಕಚೇರಿಗೆ ತೆರಳಿ ಜಿಲ್ಲಾಧಿಕಾರಿಗಳ ಮೂಲಕ ಮುಖ್ಯಮಂತ್ರಿಗಳಿಗೆ ಮನವಿ ಸಲ್ಲಿಸಲಾಗಿದೆ.

ಕುಂದಾಪುರ ತಾಲೂಕು ಆಸ್ಪತ್ರೆಯಲ್ಲಿನ ಭ್ರಷ್ಟಾಚಾರದ ಕುರಿತು ಶಾಸಕರ ಹೇಳಿಕೆಯನ್ನು ಆಧರಿಸಿ ಕನ್ನಡಪ್ರಭದಲ್ಲಿ ವರದಿಗಾರ ಶ್ರೀಕಾಂತ್ ಹೆಮ್ಮಾಡಿ ವರದಿ ಪ್ರಕಟಿಸಿದ್ದರು. ಈ ವರದಿಯನ್ನು ದ್ವೇಷಿಸಿ, ಸೆಪ್ಟೆಂಬರ್ 21 ರಂದು ಕುಂದಾಪುರ ತಾಲೂಕು ಆಸ್ಪತ್ರೆಯ ಸರ್ಜನ್ ಡಾ. ಮಹೇಂದ್ರ ಶೆಟ್ಟಿ ಅವರು ಹೊಟೇಲ್‌ನಲ್ಲಿ ಕುಟುಂಬ ಸಮೇತರಾಗಿ ಕುಳಿತಿದ್ದ ಸಂದರ್ಭದಲ್ಲಿ ಶ್ರೀಕಾಂತ್ ಹೆಮ್ಮಾಡಿ ಅವರ ಮೇಲೆ ಹಲ್ಲೆ ನಡೆಸಿದ್ದು. ಅಲ್ಲೇ ಮಾಡಿದ ವೈದ್ಯರ ವಿರುದ್ಧ ನಿರ್ದಾಕ್ಷಣ ಕ್ರಮ ಕೈಗೊಳ್ಳುವಂತೆ ಆಗ್ರಹಿಸಲಾಗಿದೆ.

ಪತ್ರಕರ್ತರು ಸಾರ್ವಜನಿಕ ಹಿತಾಸಕ್ತಿ ಹಾಗೂ ಲಭ್ಯವಿರುವ ಮಾಹಿತಿಯ ಆಧಾರದ ಮೇಲೆ ನಿಷ್ಪಕ್ಷಪಾತವಾಗಿ ವರದಿ ಮಾಡುತ್ತಾರೆ. ಯಾವುದೇ ದುರುದ್ದೇಶದಿಂದ ವರದಿ ಮಾಡುವುದಿಲ್ಲ. ಪತ್ರಕರ್ತರ ಮೇಲೆ ಹಲ್ಲೆ ನಡೆಸುವುದು ಮಾಧ್ಯಮ ಸ್ವಾತಂತ್ರ್ಯವನ್ನು ಹತ್ತಿಕ್ಕುವ ಪ್ರಯತ್ನವಾಗಿದ್ದು, ಇಂತಹ ಘಟನೆಗಳಿಂದ ಪತ್ರಕರ್ತರು ಮಾನಸಿಕವಾಗಿ ಕುಗ್ಗುವಂತಾಗುತ್ತದೆ ಎಂದು ಕಳವಳ ವ್ಯಕ್ತಪಡಿಸಲಾಗಿದೆ.

ಹೀಗಾಗಿ ಪತ್ರಕರ್ತರ ಮೇಲೆ ಹಲ್ಲೆ ನಡೆಸಿದ ಡಾ. ಮಹೇಂದ್ರ ಶೆಟ್ಟಿ ವಿರುದ್ಧ ಸೂಕ್ತ ಶಿಸ್ತುಕ್ರಮ ಕೈಗೊಳ್ಳಬೇಕು. ಅಲ್ಲದೆ, ರಾಜ್ಯದಲ್ಲಿ ಪತ್ರಕರ್ತರ ಮೇಲೆ ಪದೇಪದೇ ನಡೆಯುತ್ತಿರುವ ಹಲ್ಲೆಗಳಿಗೆ ಕಡಿವಾಣ ಹಾಕಲು ಪತ್ರಕರ್ತರ ಹಿತರಕ್ಷಣೆ ಹಾಗೂ ಅವರ ಮೇಲೆ ಹಲ್ಲೆ ನಡೆಸುವವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲು ಸಮಗ್ರ ಕಾಯ್ದೆಯನ್ನು ಶೀಘ್ರ ಜಾರಿಗೆ ತರಬೇಕು ಎಂದು ಮುಖ್ಯಮಂತ್ರಿಗಳಿಗೆ ಜಿಲ್ಲಾಧಿಕಾರಿಗಳ ಮೂಲಕ ಸಲ್ಲಿಸಿರುವ ಮನವಿಯಲ್ಲಿ ಒತ್ತಾಯಿಸಲಾಗಿದೆ.

ಅಧ್ಯಕ್ಷ ದೇವು ನಾಗನೂರ, ಉಪಾಧ್ಯಕ್ಷ ಮುಕ್ಕಣ್ಣ ಕತ್ತಿ, ಪ್ರಧಾನ ಕಾರ್ಯದರ್ಶಿ ದತ್ತು  ಕಮ್ಮಾರ, ಗೌರವಾಧ್ಯಕ್ಷ  ಬಸವರಾಜ ಕರಗಲ್, ರವೀಂದ್ರ ರಡ್ಡಿ,  ದೊಡ್ಡೇಶ್ ಎಲಿಗಾರ,ವೀರಯ್ಯ ಹಿರೇಮಠ, ಶ್ರೀಕಾಂತ  ಅಕ್ಕಿ ,ಮಹೇಶ್ ಗೌಡ ಬಾನಾಪುರ,  ಶರಣಬಸವ ಹುಲಿ ಹೈದರ , ವಿನಾಯಕ,  ಮಲ್ಲು ಪರುತಿ ಮೊದಲಾದವರು ಇದ್ದಾರು.

Total Views: 1
ಜಾಹೀರಾತು
Share This Article