ಜಿಲ್ಲಾ ಕೈಗಾರಿಕಾ ಕೇಂದ್ರದಿಂದ ಸಹಾಯಧನ: ಅರ್ಜಿ ಆಹ್ವಾನ

H.Mallikarjun
H.Mallikarjun - Kalyanasiri
1 Min Read

Subsidy from District Industries Centre: Applications Invited

ಜಿಲ್ಲಾ ಕೈಗಾರಿಕಾ ಕೇಂದ್ರದಿಂದ ಸಹಾಯಧನ: ಅರ್ಜಿ ಆಹ್ವಾನ

ಕೊಪ್ಪಳ ಆಗಸ್ಟ್ 27, (ಕರ್ನಾಟಕ ವಾರ್ತೆ): ಕೈಗಾರಿಕೆ ಮತ್ತು ವಾಣಿಜ್ಯ ಇಲಾಖೆಯ ಜಿಲ್ಲಾ ಕೈಗಾರಿಕಾ ಕೇಂದ್ರದಿAದ 2026-27ನೇ ಸಾಲಿಗಾಗಿ ವಿಶೇಷ ಘಟಕ ಯೋಜನೆ ಮತ್ತು ಗಿರಿಜನ ಯೋಜನೆಯಡಿ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಕ್ಕೆ ಸೇರಿದ ಜನಾಂಗದವರಿಗೆ ಸ್ವಂತ ಉದ್ಯೋಗ ಪ್ರಾರಂಭಿಸಲು ಸಹಾಯಧನ ನೀಡಲಾಗುತ್ತಿದ್ದು, ಆಸಕ್ತರಿಂದ ನಿಗದಿತ ನಮೂನೆಯಲ್ಲಿ ಅರ್ಜಿ ಆಹ್ವಾನಿಸಲಾಗಿದೆ.
ಸ್ವಂತ ಉದ್ಯೋಗ ಪ್ರಾರಂಭಿಸಲು ಅತಿ ಸಣ್ಣ ಉತ್ಪಾದನಾ ಘಟಕ ಸ್ಥಾಪಿಸಲು ಇಚ್ಛಿಸಿದವರಿಗೆ ಶೇ.60 ರಷ್ಟು (ಗರಿಷ್ಠ ರೂ.5 ಲಕ್ಷಗಳ ಮಿತಿಗೆ ಒಳಪಟ್ಟು) ಸಹಾಯಧನ ನೀಡಲು ಜಿಲ್ಲೆಯ ಒಟ್ಟು ನಾಲ್ಕು ಪರಿಶಿಷ್ಟ ಜಾತಿ ಮತ್ತು ಮೂವರು ಪರಿಶಿಷ್ಟ ಪಂಗಡದವರಿಗೆ ಇಲಾಖೆಯು ಅವಕಾಶ ಕಲ್ಪಿಸಿದೆ.
ಆಸಕ್ತ ಉದ್ದಿಮೆದಾರರು ಸೆಪ್ಟೆಂಬರ್ 11 ರ ಸಂಜೆ 5 ಗಂಟೆಯವರೆಗೆ ಇಲಾಖೆಯಲ್ಲಿ ಲಭ್ಯವಿರುವ ನಿಗದಿತ ನಮೂನೆಯಲ್ಲಿ ದಾಖಲಾತಿಗಳೊಂದಿಗೆ ಅರ್ಜಿಯನ್ನು ಸಲ್ಲಿಸಬಹುದು. ಹೆಚ್ಚಿನ ಮಾಹಿತಿಗಾಗಿ ಸಿದ್ದಯ್ಯ, ಸಹಾಯಕ ನಿರ್ದೇಶಕರು, ಜಿಲ್ಲಾ ಕೈಗಾರಿಕಾ ಕೇಂದ್ರ, ಕೊಪ್ಪಳ ಮೊ.ಸಂ: 8660204752 ಇವರನ್ನು ಸಂಪರ್ಕಿಸಬಹುದು ಎಂದು ಜಿಲ್ಲಾ ಕೈಗಾರಿಕಾ ಕೇಂದ್ರದ ಜಂಟಿ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ
Total Views: 0
ಜಾಹೀರಾತು
Share This Article