Junior Laboratory Technician Post: Objections Invited
ಕಿರಿಯ ಪ್ರಯೋಗಶಾಲಾ ತಂತ್ರಜ್ಞರ ಹುದ್ದೆ: ಆಕ್ಷೇಪಣೆ ಆಹ್ವಾನ
ಕೊಪ್ಪಳ ಆಗಸ್ಟ್ 27, (ಕರ್ನಾಟಕ ವಾರ್ತೆ): ಜಿಲ್ಲೆಯ ತಾಯಿ ಮತ್ತು ಮಕ್ಕಳ ಆಸ್ಪತ್ರೆ, ಕುಷ್ಟಗಿಯಲ್ಲಿ ಖಾಲಿ ಇರುವ ಕಿರಿಯ ಪ್ರಯೋಗಶಾಲಾ ತಂತ್ರಜ್ಞರ 01 ಹುದ್ದೆಗೆ ಸಾಮಾನ್ಯ ಅರ್ಹತಾ ಪಟ್ಟಿ, ತಿರಸ್ಕೃತ ಪಟ್ಟಿ, ತಾತ್ಕಾಲಿಕ ಆಯ್ಕೆ ಪಟ್ಟಿ ಹಾಗೂ ಕಾಯ್ದಿರಿಸಿದ ಪಟ್ಟಿಗಳನ್ನು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಸೂಚನಾ ಫಲಕ ಹಾಗೂ ಜಿಲ್ಲಾ ವೆಬ್‌ತಾಣ www.koppal.nic.in ದಲ್ಲಿ ಪ್ರಕಟಿಸಲಾಗಿದ್ದು, ಆಕ್ಷೇಪಣೆಗಳನ್ನು ಆಹ್ವಾನಿಸಲಾಗಿದೆ.
ಇಲಾಖೆಯ ಗುತ್ತಿಗೆ ನೇಮಕಾತಿ ಅಧಿಸೂಚನೆ ಸಂಖ್ಯೆ: ಸಿಬ್ಬಂದಿ(1)/311/2025-26 ದಿನಾಂಕ: 28-10-2025 ರಲ್ಲಿ ಖಾಲಿ ಇರುವ ಒಂದು ಹುದ್ದೆಗೆ ಅರ್ಜಿ ಆಹ್ವಾನಿಸಲಾಗಿತ್ತು. ಅಭ್ಯರ್ಥಿಗಳು ಆಕ್ಷೇಪಣೆಗಳನ್ನು ಅಗತ್ಯ ದಾಖಲೆಗಳೊಂದಿಗೆ ಸೆಪ್ಟೆಂಬರ್ 3 ರೊಳಗೆ ಸದಸ್ಯ ಕಾರ್ಯದರ್ಶಿಗಳು ಹಾಗೂ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿಗಳ ಕಚೇರಿ, ಆರೋಗ್ಯ ಸಂಕೀರ್ಣ, ಹಳೆ ಜಿಲ್ಲಾ ಆಸ್ಪತ್ರೆ ಆವರಣ, ವಿದ್ಯಾನಗರ, ಕೊಪ್ಪಳ ಇಲ್ಲಿಗೆ ಕಚೇರಿ ಸಮಯದಲ್ಲಿ ಸಲ್ಲಿಸಬೇಕು. ನಿಗದಿಪಡಿಸಿದ ಕೊನೆಯ ದಿನಾಂಕದ ನಂತರ ಬಂದ ಆಕ್ಷೇಪಣೆಗಳನ್ನು ಯಾವುದೇ ಕಾರಣಕ್ಕೂ ಪರಿಗಣಿಸಲಾಗುವುದಿಲ್ಲ ಎಂದು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
Total Views:
0
ಜಾಹೀರಾತು

