ಗಾಂಜಾ ಸೇವನೆ ಮತ್ತು ಮಾರಾಟ ಪ್ರಕರಣ:ಮೂವರು ಅಪರಾಧಿಗಳಿಗೆ ಜೈಲು ಶಿಕ್ಷೆ ಹಾಗೂ ದಂಡ ವಿಧಿಸಿದ ಗಂಗಾವತಿ ನ್ಯಾಯಾಲಯ

H.Mallikarjun
H.Mallikarjun - Kalyanasiri
2 Min Read

Ganja consumption and sale case: Gangavathi court sentences three convicts to imprisonment and imposes a fine.

ಗಾಂಜಾ ಸೇವನೆ ಮತ್ತು ಮಾರಾಟ ಪ್ರಕರಣ:ಮೂವರು ಅಪರಾಧಿಗಳಿಗೆ ಜೈಲು ಶಿಕ್ಷೆ ಹಾಗೂ ದಂಡ ವಿಧಿಸಿದ ಗಂಗಾವತಿ ನ್ಯಾಯಾಲಯ

ಕೊಪ್ಪಳ ಆಗಸ್ಟ್ 27 (ಕರ್ನಾಟಕ ವಾರ್ತೆ): ಮಾದಕ ವಸ್ತುವಾದ ಗಾಂಜಾ ಸೇವನೆ ಹಾಗೂ ಮಾರಾಟ ಪ್ರಕರಣಕ್ಕೆ ಸಂಬಂಧಿಸಿದಂತೆ ಮೂವರು ಅಪರಾಧಿಗಳಿಗೆ ಗಂಗಾವತಿ ಪ್ರಧಾನ ಸಿವಿಲ್ ಮತ್ತು ಜೆ.ಎಂ.ಎಫ್.ಸಿ ನ್ಯಾಯಾಲಯವು ಜೈಲು ಶಿಕ್ಷೆ ಹಾಗೂ ದಂಡ ವಿಧಿಸಿ ಮಹತ್ವದ ತೀರ್ಪು ನೀಡಿದೆ.
ಗಂಗಾವತಿ ಪ್ರಧಾನ ಸಿವಿಲ್ ಮತ್ತು ಜೆ.ಎಂ.ಎಫ್.ಸಿನ್ಯಾಯಾಲಯದ ನ್ಯಾಯಾಧೀಶರಾದ ನಾಗೇಶ ಪಾಟೀಲ್ ಅವರು ಸಾಕ್ಷ್ಯಾಧಾರಗಳನ್ನು ಪರಿಶೀಲಿಸಿ ಈ ತೀರ್ಪು ಪ್ರಕಟಿಸಿದ್ದಾರೆ.
*ಪ್ರಕರಣದ ಹಿನ್ನೆಲೆ:* ದಿನಾಂಕ 28-12-2022 ರಂದು ತಾಲೂಕಿನ ಸಾಣಾಪೂರ ಗ್ರಾಮ ಸೀಮಾದ ತುಂಗಭದ್ರಾ ನದಿ ದಂಡೆಯ ವಾಟರ್ ಫಾಲ್ಸ್ ಬಳಿ ಗಾಂಜಾ ಸೇವನೆ ಮಾಡುತ್ತಿದ್ದ ವೇಳೆ ಖಚಿತ ಮಾಹಿತಿ ಮೇರೆಗೆ ದಾಳಿ ನಡೆಸಲಾಗಿತ್ತು. ಈ ವೇಳೆ ಆರೋಪಿಗಳಿಂದ ಅಂದಾಜು 1,500 ರೂ. ಮೌಲ್ಯದ 49 ಗ್ರಾಂ ತೂಕದ ಒಣಗಿದ ಗಾಂಜಾವನ್ನು ಜಪ್ತಿ ಮಾಡಲಾಗಿತ್ತು. ಗಂಗಾವತಿ ಗ್ರಾಮೀಣ ಪೊಲೀಸ್ ಠಾಣೆಯ ತನಿಖಾಧಿಕಾರಿಗಳಾದ ಸುಜಾತಾ ಹಾಗೂ ಶಾರವ್ವ ಅವರು ಪ್ರಕರಣದ ತನಿಖೆ ನಡೆಸಿ ನ್ಯಾಯಾಲಯಕ್ಕೆ ದೋಷಾರೋಪಣ ಪಟ್ಟಿ ಸಲ್ಲಿಸಿದ್ದರು.
*ಶಿಕ್ಷೆಯ ವಿವರ:* ಶ್ರೀನಿವಾಸ್ @ ಕತ್ತಿ ಶೀನಾ (ಸಾಣಾಪೂರ) ಹಾಗೂ ಸತ್ಯನಾರಾಯಣ (ಸಾಣಾಪೂರ): ಗಾಂಜಾ ಸೇವನೆ ಸಾಬೀತಾದ ಹಿನ್ನೆಲೆಯಲ್ಲಿ (ಕಲಂ 27(ಬಿ) ಎನ್.ಡಿ.ಪಿ.ಎಸ್ ಕಾಯ್ದೆ) ತಲಾ 6 ತಿಂಗಳ ಕಠಿಣ ಕಾರಾಗೃಹ ಶಿಕ್ಷೆ ಮತ್ತು ತಲಾ 10,000 ರೂ. ದಂಡ ವಿಧಿಸಲಾಗಿದೆ. ರಿಯಾಜ್ (ಅಂಬೇಡ್ಕರ್ ನಗರ, ಗಂಗಾವತಿ) ಗಾಂಜಾ ಸರಬರಾಜು ಮಾಡಿದ ಅಪರಾಧಕ್ಕೆ (ಕಲಂ 20(ಬಿ)(ii)(ಎ) ಎನ್.ಡಿ.ಪಿ.ಎಸ್ ಕಾಯ್ದೆ) 1 ವರ್ಷದ ಕಠಿಣ ಕಾರಾಗೃಹ ಶಿಕ್ಷೆ ಹಾಗೂ 10,000 ರೂ. ದಂಡ ವಿಧಿಸಲಾಗಿದೆ.
ಸರ್ಕಾರದ ಪರವಾಗಿ ಸಹಾಯಕ ಸರ್ಕಾರಿ ಅಭಿಯೋಜಕರಾದ ನಿರಂಜನಸ್ವಾಮಿ ಡಾ. ದೇವಯ್ಯಸ್ವಾಮಿ ಹಿರೇಮಠ ಅವರು ವಾದ ಮಂಡಿಸಿದ್ದರು. ವಿಚಾರಣೆ ವೇಳೆ ಗಂಗಾವತಿ ಗ್ರಾಮೀಣ ಠಾಣೆಯ ಪೊಲೀಸ್ ಸಿಬ್ಬಂದಿಗಳಾದ ಆಂಜನೇಯ (ಹೆಚ್.ಸಿ 144), ವೆಂಕಟೇಶ (ಪಿ.ಸಿ 355) ಹಾಗೂ ಶ್ರೀಶೈಲ್ (ಪಿ.ಸಿ 164) ಸಾಕ್ಷಿಗಳನ್ನು ನ್ಯಾಯಾಲಯಕ್ಕೆ ಹಾಜರುಪಡಿಸಲು ಸಹಕರಿಸಿದ್ದರು.
Total Views: 0
ಜಾಹೀರಾತು
Share This Article