ಕುಷ್ಟಗಿ ಸರ್ಕಾರಿ ಪಾಲಿಟೆಕ್ನಿಕ್ ಕಾಲೇಜಿನಲ್ಲಿ ಅನುಪಯುಕ್ತ ವಸ್ತುಗಳ ಬಹಿರಂಗ ಹರಾಜು

H.Mallikarjun
H.Mallikarjun - Kalyanasiri
1 Min Read

Public auction of unnecessary items at Kushtagi Government Polytechnic College

ಕುಷ್ಟಗಿ ಸರ್ಕಾರಿ ಪಾಲಿಟೆಕ್ನಿಕ್ ಕಾಲೇಜಿನಲ್ಲಿ ಅನುಪಯುಕ್ತ ವಸ್ತುಗಳ ಬಹಿರಂಗ ಹರಾಜು
ಕೊಪ್ಪಳ ಆಗಸ್ಟ್ 28 (ಕರ್ನಾಟಕ ವಾರ್ತೆ): ಕೊಪ್ಪಳ ಜಿಲ್ಲೆಯ ಕುಷ್ಟಗಿಯ ಸರ್ಕಾರಿ ಪಾಲಿಟೆಕ್ನಿಕ್ ಕಾಲೇಜಿನಲ್ಲಿ ವಿವಿಧ ವಿಭಾಗಗಳ ಅನುಪಯುಕ್ತ ವಸ್ತುಗಳ ಬಹಿರಂಗ ಹರಾಜು ಪ್ರಕ್ರಿಯೆಯನ್ನು ಆಯೋಜಿಸಲಾಗಿದೆಎಂದು ಪ್ರಾಚಾರ್ಯರು ತಿಳಿಸಿದ್ದಾರೆ.
ಕಾಲೇಜು ಮತ್ತು ತಾಂತ್ರಿಕ ಶಿಕ್ಷಣ ಇಲಾಖೆಯ ಆಯುಕ್ತರ ಆದೇಶದ ಮೇರೆಗೆ ಈ ಹರಾಜು ಆಯೋಜಿಸಲಾಗಿದ್ದು, ಸೆಪ್ಟೆಂಬರ್ 09 ರಂದು ಬೆಳಿಗ್ಗೆ 11.30 ಗಂಟೆಗೆ ಸರ್ಕಾರಿ ಪಾಲಿಟೆಕ್ನಿಕ್, ಕುಷ್ಟಗಿಯಲ್ಲಿ ನಡೆಯುವ ಹರಾಜಿನಲ್ಲಿ ಲ್ಯಾಬ್ ಉಪಕರಣಗಳು, ಕಂಪ್ಯೂಟರ್‌ಗಳು, ಗ್ರಂಥಾಲಯದ ಪುಸ್ತಕಗಳು, ಪೀಠೋಪಕರಣಗಳು ಹಾಗೂ ಇನ್ನಿತರ ಅನುಪಯುಕ್ತ ವಸ್ತುಗಳನ್ನು ಹರಾಜಿಗೆ ಇಡಲಾಗಿದೆ. ವಸ್ತುಗಳ ಒಟ್ಟು ಮೂಲಬೆಲೆ ರೂ. 14,150 ಆಗಿರುತ್ತದೆ.
ಆಸಕ್ತ ಸಾರ್ವಜನಿಕರು ಕಚೇರಿ ವೇಳೆಯಲ್ಲಿ (ಸಾರ್ವಜನಿಕ ರಜಾ ದಿನಗಳನ್ನು ಹೊರತುಪಡಿಸಿ) ವಸ್ತುಗಳನ್ನು ಖುದ್ದಾಗಿ ವೀಕ್ಷಿಸಲು ಅವಕಾಶ ಕಲ್ಪಿಸಲಾಗಿದೆ. ಹರಾಜಿನಲ್ಲಿ ಯಾರು ಬೇಕಾದರೂ ಮುಕ್ತವಾಗಿ ಭಾಗವಹಿಸಬಹುದಾಗಿದ್ದು, ಸರ್ಕಾರ ನಿಗದಿಪಡಿಸಿದ ಮೊತ್ತಕ್ಕಿಂತ ಅತಿ ಹೆಚ್ಚಿನ ಬೆಲೆ ಕೂಗಿದ ಬಿಡ್ದಾರರು ತಕ್ಷಣವೇ ಹಣ ಪಾವತಿಸಿ ರಶೀದಿ ಪಡೆಯಬೇಕು. ಹರಾಜಿನಲ್ಲಿ ವಸ್ತುಗಳನ್ನು ಪಡೆದವರು ತಮ್ಮ ಸ್ವಂತ ಖರ್ಚಿನಲ್ಲಿ ಒಂದು ವಾರದೊಳಗೆ ವಸ್ತುಗಳನ್ನು ಸಾಗಿಸಬೇಕಾಗುತ್ತದೆ.
ಹೆಚ್ಚಿನ ಮಾಹಿತಿಗಾಗಿ ಕಾಲೇಜಿನ ಪ್ರಾಚಾರ್ಯರನ್ನು ಅಥವಾ ಕಚೇರಿ ಅಧೀಕ್ಷಕರನ್ನು ಸಂಪರ್ಕಿಸುವAತೆ ಪ್ರಕಟಣೆಯಲ್ಲಿ ತಿಳಿಸಲಾಗಿದೆ.
Total Views: 0
ಜಾಹೀರಾತು
Share This Article