ಅಶ್ವಿನಿ ಕುಟುಂಬಕ್ಕೆ ಸಾಂತ್ವನ | ನ್ಯಾಯಕ್ಕಾಗಿ ನಿರಂತರ ಹೋರಾಟ: ಅಧ್ಯಕ್ಷ ಸಿ. ನರೇಂದ್ರ ಹೊಕ್ರಾಣಿ ಗ್ರಾಮಕ್ಕೆ ಅಂಬೇಡ್ಕರ್ ನಿಗಮದ ಅಧ್ಯಕ್ಷ ಸಿ. ನರೇಂದ್ರ, ಜ್ಞಾನಪ್ರಕಾಶ್ ಸ್ವಾಮೀಜಿ ನೇತೃತ್ವದ ನಿಯೋಗ ಭೇಟಿ

H.Mallikarjun
H.Mallikarjun - Kalyanasiri
4 Min Read
Condolences to Ashwini's family | Relentless fight for justice: Chairman C. Narendra
Delegation led by Ambedkar Corporation Chairman C. Narendra and Jnanaprakash Swamiji visits Hokrani village.

ಅಶ್ವಿನಿ ಕುಟುಂಬಕ್ಕೆ ಸಾಂತ್ವನ | ನ್ಯಾಯಕ್ಕಾಗಿ ನಿರಂತರ ಹೋರಾಟ: ಅಧ್ಯಕ್ಷ ಸಿ. ನರೇಂದ್ರ
ಹೊಕ್ರಾಣಿ ಗ್ರಾಮಕ್ಕೆ ಅಂಬೇಡ್ಕರ್ ನಿಗಮದ ಅಧ್ಯಕ್ಷ ಸಿ. ನರೇಂದ್ರ, ಜ್ಞಾನಪ್ರಕಾಶ್ ಸ್ವಾಮೀಜಿ ನೇತೃತ್ವದ ನಿಯೋಗ ಭೇಟಿ

ಜಾಹೀರಾತು

ರಾಯಚೂರು, ಆ.30: ಸಿರವಾರ ತಾಲೂಕಿನ ಹೊಕ್ರಾಣಿ ಗ್ರಾಮದಲ್ಲಿ ಅತ್ಯಾಚಾರಕ್ಕೊಳಗಾಗಿ ಕೊಲೆಯಾದ ಕುಮಾರಿ ಅಶ್ವಿನಿ ಅವರ ನಿವಾಸಕ್ಕೆ ಡಾ. ಬಿ.ಆರ್. ಅಂಬೇಡ್ಕರ್ ಅಭಿವೃದ್ಧಿ ನಿಗಮದ ಅಧ್ಯಕ್ಷ ಸಿ. ನರೇಂದ್ರ ಹಾಗೂ ಮೈಸೂರಿನ ಉರಿಲಿಂಗ ಪೆದ್ದಿಮಠದ ಜ್ಞಾನಪ್ರಕಾಶ್ ಸ್ವಾಮೀಜಿ ಅವರ ನೇತೃತ್ವದ ನಿಯೋಗ ಭೇಟಿ ನೀಡಿ, ಸಂತ್ರಸ್ತ ಕುಟುಂಬಕ್ಕೆ ಸಾಂತ್ವನ ಹೇಳಿ ಧೈರ್ಯ ತುಂಬಿತು.
ಕರ್ನಾಟಕ ರಾಜ್ಯ ಅನುಸೂಚಿತ ಜಾತಿಗಳು ಮತ್ತು ಅನುಸೂಚಿತ ಬುಡಕಟ್ಟುಗಳ ಆಯೋಗದ ಅಧ್ಯಕ್ಷ ಡಾ. ಮೂರ್ತಿ ಎಲ್. ಸೇರಿದಂತೆ ವಿವಿಧ ಅಧಿಕಾರಿಗಳು ಹಾಗೂ ಮುಖಂಡರೊಂದಿಗೆ ಗ್ರಾಮಕ್ಕೆ ಭೇಟಿ ನೀಡಿದ ನಿಯೋಗ, ಅಶ್ವಿನಿ ಅವರ ಭಾವಚಿತ್ರಕ್ಕೆ ಪುಷ್ಪನಮನ ಸಲ್ಲಿಸಿ ಗೌರವ ಅರ್ಪಿಸಿತು. ಬಳಿಕ ಕುಟುಂಬದ ಸದಸ್ಯರಿಂದ ಘಟನೆಯ ಸಂಪೂರ್ಣ ವಿವರಗಳನ್ನು ಪಡೆದುಕೊಂಡು, ಕುಟುಂಬದ ಪ್ರಸ್ತುತ ಪರಿಸ್ಥಿತಿ ಹಾಗೂ ಅವರಿಗೆ ಅಗತ್ಯವಿರುವ ನೆರವಿನ ಕುರಿತು ಮಾಹಿತಿ ಸಂಗ್ರಹಿಸಿತು.

ಸಂತ್ರಸ್ತ ಕುಟುಂಬಕ್ಕೆ ಸರ್ಕಾರದ ನೆರವು ತಲುಪಿಸಲು ಕ್ರಮ
ಡಾ. ಬಿ.ಆರ್. ಅಂಬೇಡ್ಕರ್ ಅಭಿವೃದ್ಧಿ ನಿಗಮದ ಅಧ್ಯಕ್ಷ ಸಿ. ನರೇಂದ್ರ ಅವರು ಕುಟುಂಬದ ಸದಸ್ಯರನ್ನು ಉದ್ದೇಶಿಸಿ ಮಾತನಾಡಿ, ನೊಂದ ಕುಟುಂಬಕ್ಕೆ ಸರ್ಕಾರದ ವತಿಯಿಂದ ದೊರೆಯಬೇಕಾದ ಎಲ್ಲಾ ರೀತಿಯ ಸೌಲಭ್ಯಗಳು ಹಾಗೂ ಪರಿಹಾರ ಶೀಘ್ರವಾಗಿ ತಲುಪುವಂತೆ ಸಂಬಂಧಿಸಿದ ಅಧಿಕಾರಿಗಳಿಗೆ ಕಟ್ಟುನಿಟ್ಟಿನ ಸೂಚನೆ ನೀಡಲಾಗಿದೆಎಂದು ತಿಳಿಸಿದರು.

ಅಶ್ವಿನಿ ಕುಟುಂಬಕ್ಕೆ ನ್ಯಾಯ ದೊರಕಿಸುವುದು ಸರ್ಕಾರ ಹಾಗೂ ಸಮಾಜದ ಜವಾಬ್ದಾರಿಯಾಗಿದೆ. ಪ್ರಕರಣದ ತನಿಖೆ ಯಾವುದೇ ಒತ್ತಡ ಅಥವಾ ಪ್ರಭಾವಕ್ಕೆ ಒಳಗಾಗದೆ ನ್ಯಾಯಯುತವಾಗಿ ನಡೆಯಬೇಕು. ತಪ್ಪಿತಸ್ಥರು ಯಾರೇ ಆಗಿದ್ದರೂ ಕಾನೂನಿನಡಿ ಕಠಿಣ ಶಿಕ್ಷೆಗೆ ಗುರಿಯಾಗಬೇಕು. ಕುಟುಂಬಕ್ಕೆ ನ್ಯಾಯ ದೊರೆಯುವವರೆಗೆ ಈ ವಿಚಾರದಲ್ಲಿ ನಿರಂತರವಾಗಿ ಧ್ವನಿ ಎತ್ತಿ ಹೋರಾಟ ನಡೆಸಲಾಗುವುದು ಎಂದು ಅವರು ಭರವಸೆ ನೀಡಿದರು.
ದಲಿತ ಮುಖಂಡರ ವಿರುದ್ಧ ಸುಳ್ಳು ಪ್ರಕರಣ ದಾಖಲಿಸದಂತೆ ಎಚ್ಚರಿಕೆ
ದೌರ್ಜನ್ಯ ಹಾಗೂ ಅನ್ಯಾಯದ ವಿರುದ್ಧ ಧ್ವನಿ ಎತ್ತುವ ದಲಿತ ಮುಖಂಡರು, ಸಂಘಟನೆಗಳ ಕಾರ್ಯಕರ್ತರು ಮತ್ತು ಹೋರಾಟಗಾರರನ್ನು ಹತ್ತಿಕ್ಕುವ ಉದ್ದೇಶದಿಂದ ಸುಳ್ಳು ಕೌಂಟರ್ ಪ್ರಕರಣಗಳನ್ನು ದಾಖಲಿಸುವ ಪ್ರಯತ್ನ ನಡೆಯಬಾರದು ಎಂದು ಸಿ. ನರೇಂದ್ರ ಎಚ್ಚರಿಸಿದರು.
ಅಂತಹ ಕ್ರಮಕ್ಕೆ ಅಧಿಕಾರಿಗಳು ಮುಂದಾದರೆ ಅವರ ವಿರುದ್ಧ ನಿರ್ದಾಕ್ಷಿಣ್ಯವಾಗಿ ಕ್ರಮ ಕೈಗೊಳ್ಳಲಾಗುವುದು ಎಂಬ ಭರವಸೆಯನ್ನು ಮುಖ್ಯಮಂತ್ರಿಗಳು ಹಾಗೂ ಗೃಹ ಸಚಿವರು ನೀಡಿದ್ದಾರೆ ಎಂದು ಅವರು ತಿಳಿಸಿದರು.
ಸಂತ್ರಸ್ತ ಕುಟುಂಬಕ್ಕೆ ನ್ಯಾಯ ಒದಗಿಸುವ ಜೊತೆಗೆ, ಇಂತಹ ಅಮಾನವೀಯ ಘಟನೆಗಳು ಮರುಕಳಿಸದಂತೆ ಕಾನೂನು ಸುವ್ಯವಸ್ಥೆ ಹಾಗೂ ಮಹಿಳೆಯರ ಸುರಕ್ಷತೆಯ ಕುರಿತು ಸಂಬಂಧಿಸಿದ ಇಲಾಖೆಗಳು ಹೆಚ್ಚಿನ ಜವಾಬ್ದಾರಿಯಿಂದ ಕಾರ್ಯನಿರ್ವಹಿಸಬೇಕು ಎಂದು ಒತ್ತಾಯಿಸಿದರು.
ಪ್ರತಿಭಟನಾ ಸ್ಥಳಕ್ಕೆ ಭೇಟಿ | ಮನವಿ ಸ್ವೀಕಾರ
ದಲಿತ ಸಂಘಟನೆಗಳ ಒಕ್ಕೂಟದ ವತಿಯಿಂದ ಹಮ್ಮಿಕೊಳ್ಳಲಾಗಿದ್ದ ಪ್ರತಿಭಟನಾ ಸ್ಥಳಕ್ಕೂ ನಿಯೋಗ ಭೇಟಿ ನೀಡಿ, ಪ್ರತಿಭಟನಾಕಾರರೊಂದಿಗೆ ಚರ್ಚಿಸಿತು. ಕು. ಅಶ್ವಿನಿ ಪ್ರಕರಣದಲ್ಲಿ ನ್ಯಾಯಯುತ ತನಿಖೆ ನಡೆಸಬೇಕು, ತಪ್ಪಿತಸ್ಥರ ವಿರುದ್ಧ ಕಠಿಣ ಕಾನೂನು ಕ್ರಮ ಕೈಗೊಳ್ಳಬೇಕು ಹಾಗೂ ಸಂತ್ರಸ್ತ ಕುಟುಂಬಕ್ಕೆ ಸೂಕ್ತ ಪರಿಹಾರ ನೀಡಬೇಕು ಸೇರಿದಂತೆ ವಿವಿಧ ಬೇಡಿಕೆಗಳನ್ನೊಳಗೊಂಡ ಮನವಿಯನ್ನು ಸ್ವೀಕರಿಸಲಾಯಿತು.
ಪ್ರತಿಯೊಂದು ಗ್ರಾಮ ಹಾಗೂ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಎಸ್ಸಿ/ಎಸ್ಟಿ ಸಮುದಾಯದ ಕುಂದುಕೊರತೆಗಳನ್ನು ಆಲಿಸಲು ನಡೆಯುವ ಸಭೆಗಳನ್ನು ಕೇವಲ ಕಾಟಾಚಾರಕ್ಕೆ ಸೀಮಿತಗೊಳಿಸದೆ, ಜನರ ನೈಜ ಸಮಸ್ಯೆಗಳನ್ನು ದಾಖಲಿಸಿಕೊಂಡು ಅವುಗಳಿಗೆ ತಕ್ಷಣ ಪರಿಹಾರ ಕಲ್ಪಿಸುವ ವ್ಯವಸ್ಥೆ ಮಾಡಬೇಕು ಎಂದು ಅಧಿಕಾರಿಗಳಿಗೆ ಸೂಚಿಸಲಾಯಿತು.
ಅಧಿಕಾರಿಗಳೊಂದಿಗೆ ಸಭೆ | ಪ್ರಕರಣದ ಪ್ರಗತಿ ಪರಿಶೀಲನೆ
ಇದೇ ವೇಳೆ ಸಂಬಂಧಪಟ್ಟ ಅಧಿಕಾರಿಗಳಿಂದ ಪ್ರಕರಣದ ತನಿಖೆಯ ಪ್ರಗತಿ, ಕಾನೂನು ಸುವ್ಯವಸ್ಥೆ ಹಾಗೂ ಸಂತ್ರಸ್ತ ಕುಟುಂಬಕ್ಕೆ ಕಲ್ಪಿಸಲಾಗಿರುವ ನೆರವಿನ ಕುರಿತು ಮಾಹಿತಿ ಪಡೆಯಲಾಯಿತು. ಕುಟುಂಬದ ಸುರಕ್ಷತೆ, ಅವರಿಗೆ ದೊರೆಯಬೇಕಾದ ಸರ್ಕಾರಿ ಸೌಲಭ್ಯಗಳು ಮತ್ತು ಪರಿಹಾರ ಕ್ರಮಗಳಲ್ಲಿ ಯಾವುದೇ ವಿಳಂಬವಾಗದಂತೆ ನೋಡಿಕೊಳ್ಳಬೇಕು ಎಂದು ಅಧಿಕಾರಿಗಳಿಗೆ ನಿರ್ದೇಶನ ನೀಡಲಾಯಿತು.
ಈ ಸಂದರ್ಭದಲ್ಲಿ ರಾಜ್ಯ ಎಸ್ಸಿ/ಎಸ್ಟಿ ಆಯೋಗದ ಅಧ್ಯಕ್ಷ ಡಾ. ಮೂರ್ತಿ ಎಲ್., ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ. ಅರುಣಾಂಗ್ಷು ಗಿರಿ, ರಾಯಚೂರು ಜಿಲ್ಲಾ ಹೆಚ್ಚುವರಿ ಜಿಲ್ಲಾಧಿಕಾರಿ ಡಾ. ಹಂಪಣ್ಣ ಸಜ್ಜನ್, ಸಿರವಾರ ತಹಸೀಲ್ದಾರ್ ಚಂದ್ರಶೇಖರ ಪವಾರ್, ಸಮಾಜ ಕಲ್ಯಾಣ ಇಲಾಖೆಯ ಉಪ ನಿರ್ದೇಶಕ ಕೃಷ್ಣ ಶಾವಂತಗೇರ ಸೇರಿದಂತೆ ವಿವಿಧ ಇಲಾಖೆಗಳ ಅಧಿಕಾರಿಗಳು, ದಲಿತ ಸಂಘಟನೆಗಳ ಮುಖಂಡರು, ಹೋರಾಟಗಾರರು ಹಾಗೂ ಸಾರ್ವಜನಿಕರು ಉಪಸ್ಥಿತರಿದ್ದರು.

ಸಿರವಾರ ತಾಲೂಕಿನ ಹೊಕ್ರಾಣಿ ಗ್ರಾಮದಲ್ಲಿ ಅತ್ಯಾಚಾರಕ್ಕೊಳಗಾಗಿ ಕೊಲೆಯಾದ ಕು. ಅಶ್ವಿನಿ ಅವರ ನಿವಾಸಕ್ಕೆ ಡಾ. ಬಿ.ಆರ್. ಅಂಬೇಡ್ಕರ್ ಅಭಿವೃದ್ಧಿ ನಿಗಮದ ಅಧ್ಯಕ್ಷ ಸಿ. ನರೇಂದ್ರ ಮತ್ತು ಮೈಸೂರಿನ ಉರಿಲಿಂಗ ಪೆದ್ದಿಮಠದ ಜ್ಞಾನಪ್ರಕಾಶ್ ಸ್ವಾಮೀಜಿ ಅವರ ನೇತೃತ್ವದ ನಿಯೋಗ ಭೇಟಿ ನೀಡಿ ಸಂತ್ರಸ್ತ ಕುಟುಂಬಕ್ಕೆ ಸಾಂತ್ವನ ಹೇಳಿತು.
_—-__
ಅಶ್ವಿನಿ ಕುಟುಂಬಕ್ಕೆ ನ್ಯಾಯ ದೊರಕಿಸುವುದು ಸರ್ಕಾರದ ಜವಾಬ್ದಾರಿಯಾಗಿದೆ. ಪ್ರಕರಣದ ತನಿಖೆ ಯಾವುದೇ ಒತ್ತಡ ಅಥವಾ ಪ್ರಭಾವಕ್ಕೆ ಒಳಗಾಗದೆ ನ್ಯಾಯಯುತವಾಗಿ ನಡೆಯಬೇಕು. ತಪ್ಪಿತಸ್ಥರು ಯಾರೇ ಆಗಿದ್ದರೂ ಕಾನೂನಿನಡಿ ಕಠಿಣ ಶಿಕ್ಷೆಗೆ ಗುರಿಪಡಿಸಲಾಗುವುದು. ಕುಟುಂಬಕ್ಕೆ ಸಂಪೂರ್ಣ ನ್ಯಾಯ ದೊರೆಯುವವರೆಗೆ ಈ ವಿಚಾರದಲ್ಲಿ ನಿರಂತರವಾಗಿ ಧ್ವನಿ ಎತ್ತುತ್ತೇವೆ.”
– ಸಿ. ನರೇಂದ್ರ
ಅಧ್ಯಕ್ಷರು, ಡಾ. ಬಿ.ಆರ್. ಅಂಬೇಡ್ಕರ್ ಅಭಿವೃದ್ಧಿ ನಿಗಮ, ಬೆಂಗಳೂರು

ಸಂತ್ರಸ್ತ ಕುಟುಂಬಕ್ಕೆ ಶೀಘ್ರ ನೆರವು
ನೊಂದ ಕುಟುಂಬಕ್ಕೆ ಸರ್ಕಾರದಿಂದ ದೊರೆಯಬೇಕಾದ ಎಲ್ಲಾ ರೀತಿಯ ಸೌಲಭ್ಯಗಳು ಹಾಗೂ ಪರಿಹಾರವನ್ನು ಯಾವುದೇ ವಿಳಂಬವಿಲ್ಲದೆ ಶೀಘ್ರವಾಗಿ ತಲುಪಿಸುವಂತೆ ಸಂಬಂಧಿಸಿದ ಅಧಿಕಾರಿಗಳಿಗೆ ಈಗಾಗಲೇ ಕಟ್ಟುನಿಟ್ಟಿನ ಸೂಚನೆ ನೀಡಲಾಗಿದೆ.

Total Views: 0
ಜಾಹೀರಾತು
Share This Article