ಕೊಪ್ಪಳ ಜಿಲ್ಲೆಯಲ್ಲಿ ಪ್ರಜಾಸೇವೆ ಆಂದೋಲನ ಸಭೆಗೆ ಅಗತ್ಯ ಸಿದ್ಧತೆಯಾಗಲಿ: ಡಾ.ಸುರೇಶ ಬಿ. ಇಟ್ನಾಳ ಸೂಚನೆ

H.Mallikarjun
H.Mallikarjun - Kalyanasiri
3 Min Read

Necessary preparations should be made for the Prajasheva movement meeting in Koppal district: Dr. Suresh B. Itnal’s suggestion

 

ಕೊಪ್ಪಳ ಜಿಲ್ಲೆಯಲ್ಲಿ ಪ್ರಜಾಸೇವೆ ಆಂದೋಲನ ಸಭೆಗೆ
ಅಗತ್ಯ ಸಿದ್ಧತೆಯಾಗಲಿ: ಡಾ.ಸುರೇಶ ಬಿ. ಇಟ್ನಾಳ ಸೂಚನೆ
ಕೊಪ್ಪಳ ಆಗಸ್ಟ್ 31 (ಕರ್ನಾಟಕ ವಾರ್ತೆ): 2ನೇ ಹಾಗೂ 4ನೇ ಶನಿವಾರ ಸೇರಿದಂತೆ ಪ್ರತಿ ತಿಂಗಳು ಎಲ್ಲ ಶನಿವಾರಗಳಂದು ತಾಲೂಕುಮಟ್ಟದ ಹಾಗೂ ಹೋಬಳಿ ಮಟ್ಟದ ಪ್ರಜಾಸೇವೆ ಆಂದೋಲನ ಸಭೆಗಳನ್ನು ಆಯೋಜಿಸಲು ರಾಜ್ಯ ಸರ್ಕಾರದ ಪ್ರಜಾ ಸೇವಾ ಇಲಾಖೆಯ ಸರ್ಕಾರದ ಉಪ ಕಾರ್ಯದರ್ಶಿಗಳು ಸುತ್ತೋಲೆ ಹೊರಡಿಸಿ ಸೂಚಿಸಿದಂತೆ ಕೊಪ್ಪಳ ಜಿಲ್ಲೆಯ ಯಲಬುರ್ಗಾ ತಾಲೂಕಿನ ಚಿಕ್ಕವಂಕಲಕುAಟ ಗ್ರಾಮದಲ್ಲಿ ಸೆ.5ರಂದು ಪ್ರಜಾ ಸೇವೆ ಆಂದೋಲನ ಸಭೆಯನ್ನು ನಿಗದಿಪಡಿಸಿದ್ದು ಅಧಿಕಾರಿಗಳು ಸಿದ್ಧತೆ ಮಾಡಿಕೊಳ್ಳಬೇಕು ಎಂದು ಜಿಲ್ಲಾಧಿಕಾರಿಗಳಾದ ಡಾ.ಸುರೇಶ ಬಿ ಇಟ್ನಾಳ ಅವರು ಅಧಿಕಾರಿಗಳಿಗೆ ಸೂಚನೆ ನೀಡಿದರು.
ಪ್ರಜಾ ಸೇವಾ ಆಂದೋಲನ ಸಭೆಯ ಕುರಿತಂತೆ ಆಗಸ್ಟ್ 31ರಂದು ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಪೂರ್ವಭಾವಿ ಸಿದ್ಧತಾ ಸಭೆ ನಡೆಸಿ ಅವರು ಮಾತನಾಡಿದರು.
ಪ್ರಜಾ ಸೇವೆ ಆಂದೋಲನ ಸಭೆಗೆ ಸಂಬAಧಿಸಿದAತೆ ಆಯಾ ಭಾಗದ ಸಾರ್ವಜನಿಕರಿಗೆ ಮುಂಚಿತವಾಗಿ ಪೂರ್ವ ಮುದ್ರಿತ ಅರ್ಜಿ ನಮೂನೆ, ಅವಶ್ಯ ದಾಖಲಾತಿಗಳುಳ್ಳ ಲಕೋಟೆಯನ್ನು ಮನೆಮನೆಗೆ ತಲುಪಿಸಬೇಕು. ಈ ಸಭೆಗೆ ಹೆಚ್ಚಿನ ಸಂಖ್ಯೆಯಲ್ಲಿ ಸಾರ್ವಜನಿಕರು ಭಾಗಿಯಾಗುವಂತೆ ಕಾರ್ಯಕ್ರಮದ ಬಗ್ಗೆ ವ್ಯಾಪಕ ಪ್ರಚಾರ ಮಾಡಬೇಕು. ಸೂಕ್ತ ವೇದಿಕೆ, ಧ್ವನಿವರ್ಧಕ ವ್ಯವಸ್ಥೆ, ಎಲ್‌ಇಡಿ ಪರದೇ ಸೇರಿದಂತೆ ಸಾರ್ವಜನಿಕರು ಅರ್ಜಿ ಸಲ್ಲಿಸಿದ ನಂತರ ಕುಳಿತುಕೊಳ್ಳಲು ಮತ್ತು ಭಾಗವಹಿಸುವ ಇಲಾಖಾ ಅಧಿಕಾರಿಗಳಿಗೆ ಪ್ರತ್ಯೇಕ ಆಸನ ಕಲ್ಪಿಸುವ ವ್ಯವಸ್ಥೆ ಮಾಡಬೇಕು ಎಂದು ಜಿಲ್ಲಾಧಿಕಾರಿಗಳು ಸೂಚನೆ ನೀಡಿದರು.
ಚಿಕ್ಕವಂಕಲಕುAಟ ಗ್ರಾಮದ ಬುದ್ದ ಬಸವ ಗಾಂಧಿ ಭವನದಲ್ಲಿ ಸೆ.5ರಂದು ಈ ಪ್ರಜಾಸೇವೆ ಸಭೆಯನ್ನು ನಿಗದಿಪಡಿಸಲಾಗಿದೆ. ಜಿಲ್ಲಾಮಟ್ಟದ ವಿವಿಧ ಇಲಾಖೆಯ ಅಧಿಕಾರಿಗಳು ಅಂದು ಬೆಳಗ್ಗೆ 9 ಗಂಟೆಗೆ ಗ್ರಾಮದಲ್ಲಿ ಹಾಜರಿರಬೇಕು. ಈ ಸಭೆಗೆ ಅರ್ಜಿ ಸ್ವೀಕೃತಿವಾರು ಕೌಂಟರಗಳನ್ನು ಸ್ಥಾಪಿಸಬೇಕು ಎಂದು ಕೃಷಿ ಇಲಾಖೆ, ತೋಟಗಾರಿಕೆ ಇಲಾಖೆ, ಆರೋಗ್ಯ ಇಲಾಖೆ, ಪಶು ಸಂಗೋಪನೆ ಇಲಾಖೆ, ರೇಷ್ಮೆ ಇಲಾಖೆ, ಕಾರ್ಮಿಕ ಇಲಾಖೆ, ಅರಣ್ಯ ಇಲಾಖೆ, ಶಿಕ್ಷಣ ಇಲಾಖೆ, ಜಿಲ್ಲಾ ನಗರಾಭಿವೃದ್ಧಿ ಕೋಶ, ಯುವ ಜನ ಸೇವಾ ಮತ್ತು ಕ್ರೀಡಾ ಇಲಾಖೆ ಸೇರಿದಂತೆ ವಿವಿಧ ಇಲಾಖೆಯ ಅಧಿಕಾರಿಗಳಿಗೆ ಮತ್ತು ವಿವಿಧ ನಿಗಮಗಳ ಅಧಿಕಾರಿಗಳಿಗೆ ಜಿಲ್ಲಾಧಿಕಾರಿಗಳು ನಿರ್ದೇಶನ ನೀಡಿದರು. ಕೌಂಟರಗಳಲ್ಲಿ ಕಡ್ಡಾಯವಾಗಿ ಗಣಕಯಂತ್ರಗಳು, ಲ್ಯಾಪಟಾಪ್, ಇಂಟರನೇಟ್, ಲೇಖನ ಸಾಮಗ್ರಿ ಇತ್ಯಾದಿ ವ್ಯವಸ್ಥೆ ಮಾಡಬೇಕು. ಪ್ರಮುಖ ಇಲಾಖೆಗಳು ವಸ್ತು ಪ್ರದರ್ಶನ ಮಳಿಗೆ ಸ್ಥಾಪಿಸಿ, ಇಲಾಖೆಯ ಸವಲತ್ತುಗಳು, ಸೇವೆಗಳ ಬಗ್ಗೆ ಜನತೆಗೆ ಮಾಹಿತಿ ನೀಡಬೇಕು ಎಂದು ಅಧಿಕಾರಿಗಳಿಗೆ ಸೂಚನೆ ನೀಡಿದರು.
ಸಭೆಗಳಲ್ಲಿ ಸಮಸ್ಯೆ ಪರಿಹಾರದ ಜೊತೆಗೆ ಸರ್ಕಾರದ ವಿವಿಧ ಯೋಜನೆಗಳು ಕಾರ್ಯಕ್ರಮಗಳ ನೋಂದಣಿಗೆ ಕ್ರಮ ವಹಿಸಬೇಕು. ಸ್ವೀಕರಿಸುವ ಎಲ್ಲ ಅರ್ಜಿಗಳ ವಿವರಗಳನ್ನು ಸ್ಥಳದಲ್ಲಿಯೇ ಐಪಿಜಿಆರ್‌ಎಸ್ ಪೋರ್ಟಲನಲ್ಲಿ ಅಪಲೋಡ್ ಮಾಡಿ ವಿಶಿಷ್ಟ ಸಂಖ್ಯೆಯ ಸ್ವೀಕೃತಿ ನೀಡಬೇಕು.
ಮುಖ್ಯವಾಗಿ ಈ ಸಭೆಯಲ್ಲಿ ಅರ್ಹ ಫಲಾನುಭವಿಗಳಿಗೆ ಪ್ರಮಾಣ ಪತ್ರ, ಆದೇಶ ಪತ್ರವನ್ನು ಸ್ಥಳದಲ್ಲಿಯೇ ವಿತರಿಸಲು ಆಗತ್ಯ ತಯಾರಿ ಮಾಡಿಕೊಳ್ಳಬೇಕು ಎಂದು ವಿವಿಧ ಇಲಾಖೆಯ ಅಧಿಕಾರಿಗಳಿಗೆ ಜಿಲ್ಲಾಧಿಕಾರಿಗಳು ಸೂಚನೆ ನೀಡಿದರು. ಈ ಕಾರ್ಯಕ್ರಮದ ಬಗ್ಗೆ ವ್ಯಾಪಕ ಪ್ರಚಾರ ನೀಡಲು ಜಿಲ್ಲಾಧಿಕಾರಿಗಳಿಗೆ ಸೂಚಿಸಿದರು.
ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿಗಳಾದ ವರ್ಣಿತ್ ನೇಗಿ ಅವರು ಮಾತನಾಡಿ, ಸಾರ್ವಜನಿಕ ಶಿಕ್ಷಣ ಇಲಾಖೆಯ ಅಧಿಕಾರಿಗಳು ಹಾಗೂ ಪದವಿ ಪೂರ್ವ ಶಿಕ್ಷಣ ಇಲಾಖೆಯ ಅಧಿಕಾರಿಗಳು ಮುಂಚಿತವಾಗಿ ಗ್ರಾಮಕ್ಕೆ ಭೇಟಿ ನೀಡಿ ಅಲ್ಲಿನ ಶೈಕ್ಷಣಿಕ ಕುಂದುಕೊರತೆಗಳ ಬಗ್ಗೆ ಪರಿಶೀಲಿಸಿ ಮಾಹಿತಿ ನೀಡಬೇಕು. ಗ್ರಾಮೀಣ ಕುಡಿಯುವ ನೀರು ಸರಬರಾಜು ಮತ್ತು ನೈರ್ಮಲ್ಯ ಇಲಾಖೆಯ ಅಧಿಕಾರಿಗಳು ಸಹ ಗ್ರಾಮಕ್ಕೆ ನಿಯಮಿತ ಭೇಟಿ ನೀಡಿ ಕುಡಿವ ನೀರಿನ ಪರಿಸ್ಥಿತಿಯ ಬಗ್ಗೆ ಅವಲೋಕಿಸಬೇಕು ಎಂದು ಸೂಚನೆ ನೀಡಿದರು.
ಅಪರ ಜಿಲ್ಲಾಧಿಕಾರಿಗಳಾದ ಸಿದ್ರಾಮೇಶ್ವರ ಅವರು ಪ್ರಜಾಸೇವೆ ಆಂದೋಲನ ಸಭೆಯ ಸುತ್ತೋಲೆಯಲ್ಲಿನ ಅಂಶಗಳ ಬಗ್ಗೆ ಮಾಹಿತಿ ನೀಡಿದರು. ಸಭೆಯಲ್ಲಿ ನಗರಾಭಿವೃದ್ಧಿ ಕೋಶದ ಯೋಜನಾ ನಿರ್ದೇಶಕರಾದ ಮಂಜುನಾಥ ಗುಂಡೂರು ಸೇರಿದಂತೆ ವಿವಿಧ ಇಲಾಖೆಗಳ ಜಿಲ್ಲಾಮಟ್ಟದ ಅಧಿಕಾರಿಗಳು ಉಪಸ್ಥಿತರಿದ್ದರು.
Total Views: 0
ಜಾಹೀರಾತು
Share This Article