Training for the economic empowerment of vulnerable families
35 families identified within the Gram Panchayat limits: Basavaraj Gowdru

ದುರ್ಬಲ ಕುಟುಂಬಗಳ ಆರ್ಥಿಕ ಸಬಲೀಕರಣಕ್ಕೆ ತರಬೇತಿ
ಮರಳಿ ಗ್ರಾ.ಪಂ. ವ್ಯಾಪ್ತಿಯಲ್ಲಿ 35 ಕುಟುಂಬಗಳ ಗುರುತು: ಬಸವರಾಜ್ ಗೌಡ್ರು

ಗಂಗಾವತಿ: ಸರ್ಕಾರದ ಆದೇಶದ ಅನ್ವಯ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಆರ್ಥಿಕವಾಗಿ ದುರ್ಬಲವಾಗಿರುವ ಕುಟುಂಬಗಳನ್ನು ಗುರುತಿಸಿ, ಅವರಿಗೆ ವಿವಿಧ ಕೌಶಲ್ಯಾಧಾರಿತ ತರಬೇತಿ ನೀಡುವ ಮೂಲಕ ಸ್ವಾವಲಂಬಿಗಳನ್ನಾಗಿ ಮಾಡುವ ಉದ್ದೇಶದಿಂದ ‘ದುರ್ಬಲ ಕುಟುಂಬಗಳ ತರಬೇತಿ ಕಾರ್ಯಕ್ರಮ’ವನ್ನು ಬುಧವಾರ ಮರಳಿ ಗ್ರಾಮ ಪಂಚಾಯಿತಿಯಲ್ಲಿ ಆಯೋಜಿಸಲಾಯಿತು.
ಕಾರ್ಯಕ್ರಮಕ್ಕೆ ಚಾಲನೆ ನೀಡಿ ಮಾತನಾಡಿದ ಗ್ರಾಮ ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ಬಸವರಾಜ್ ಗೌಡ್ರು, ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಈಗಾಗಲೇ 35 ಕುಟುಂಬಗಳನ್ನು ದುರ್ಬಲ ಕುಟುಂಬಗಳೆಂದು ಗುರುತಿಸಲಾಗಿದೆ.
ದುರ್ಬಲ ಕುಟುಂಬಗಳ ಆರ್ಥಿಕ ಸಬಲೀಕರಣಕ್ಕೆ ತರಬೇತಿ
ಮರಳಿ ಗ್ರಾ.ಪಂ. ವ್ಯಾಪ್ತಿಯಲ್ಲಿ 35 ಕುಟುಂಬಗಳ ಗುರುತು: ಬಸವರಾಜ್ ಗೌಡ್ರು
ಗಂಗಾವತಿ: ಸರ್ಕಾರದ ಆದೇಶದ ಅನ್ವಯ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಆರ್ಥಿಕವಾಗಿ ದುರ್ಬಲವಾಗಿರುವ ಕುಟುಂಬಗಳನ್ನು ಗುರುತಿಸಿ, ಅವರಿಗೆ ವಿವಿಧ ಕೌಶಲ್ಯಾಧಾರಿತ ತರಬೇತಿ ನೀಡುವ ಮೂಲಕ ಸ್ವಾವಲಂಬಿಗಳನ್ನಾಗಿ ಮಾಡುವ ಉದ್ದೇಶದಿಂದ ‘ದುರ್ಬಲ ಕುಟುಂಬಗಳ ತರಬೇತಿ ಕಾರ್ಯಕ್ರಮ’ವನ್ನು ಬುಧವಾರ ಮರಳಿ ಗ್ರಾಮ ಪಂಚಾಯಿತಿಯಲ್ಲಿ ಆಯೋಜಿಸಲಾಯಿತು.
ಕಾರ್ಯಕ್ರಮಕ್ಕೆ ಚಾಲನೆ ನೀಡಿ ಮಾತನಾಡಿದ ಗ್ರಾಮ ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ಬಸವರಾಜ್ ಗೌಡ್ರು, ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಈಗಾಗಲೇ 35 ಕುಟುಂಬಗಳನ್ನು ದುರ್ಬಲ ಕುಟುಂಬಗಳೆಂದು ಗುರುತಿಸಲಾಗಿದೆ. ಈ ಕುಟುಂಬಗಳ ಸದಸ್ಯರಿಗೆ ಅವರ ಆಸಕ್ತಿ ಹಾಗೂ ಸ್ಥಳೀಯವಾಗಿ ಲಭ್ಯವಿರುವ ಅವಕಾಶಗಳಿಗೆ ಅನುಗುಣವಾಗಿ ವಿವಿಧ ಸ್ವಯಂ ಉದ್ಯೋಗ ಕೌಶಲ್ಯಗಳ ಕುರಿತು ತರಬೇತಿ ನೀಡಲಾಗುವುದು ಎಂದು ತಿಳಿಸಿದರು.
ಕುಂಬಾರಿಕೆ, ಹೈನುಗಾರಿಕೆ, ಊದುಬತ್ತಿ ತಯಾರಿಕೆ ಸೇರಿದಂತೆ ಗುಡಿ ಕೈಗಾರಿಕೆ ಹಾಗೂ ಸಣ್ಣ ಪ್ರಮಾಣದ ಸ್ವಯಂ ಉದ್ಯೋಗ ಚಟುವಟಿಕೆಗಳ ಕುರಿತು ತರಬೇತಿ ನೀಡುವ ಉದ್ದೇಶ ಹೊಂದಲಾಗಿದೆ. ಕಡಿಮೆ ಬಂಡವಾಳದಲ್ಲಿ ಆರಂಭಿಸಿ ನಿರಂತರ ಆದಾಯ ಗಳಿಸಬಹುದಾದ ಉದ್ಯೋಗಗಳನ್ನು ಆಯ್ಕೆ ಮಾಡಿಕೊಳ್ಳಲು ಫಲಾನುಭವಿಗಳಿಗೆ ಮಾರ್ಗದರ್ಶನ ನೀಡಲಾಗುವುದು. ತರಬೇತಿ ಪಡೆದ ಕುಟುಂಬಗಳಿಗೆ ಸರ್ಕಾರದ ವಿವಿಧ ಯೋಜನೆಗಳಡಿ ಧನಸಹಾಯ, ಸಬ್ಸಿಡಿ ಹಾಗೂ ಅಗತ್ಯ ಸೌಲಭ್ಯಗಳು ದೊರೆಯುವ ಸಾಧ್ಯತೆಗಳಿದ್ದು, ಅವುಗಳನ್ನು ಸದುಪಯೋಗಪಡಿಸಿಕೊಂಡು ಆರ್ಥಿಕವಾಗಿ ಸ್ವಾವಲಂಬಿಗಳಾಗಬೇಕು ಎಂದು ಹೇಳಿದರು.
ದುರ್ಬಲ ಕುಟುಂಬಗಳ ಸದಸ್ಯರು ಕೇವಲ ಸರ್ಕಾರದ ನೆರವಿನ ಮೇಲೆ ಅವಲಂಬಿತರಾಗದೆ, ತಮ್ಮಲ್ಲಿರುವ ಕೌಶಲ್ಯವನ್ನು ಬಳಸಿಕೊಂಡು ಸಣ್ಣ ಉದ್ಯಮಗಳನ್ನು ಆರಂಭಿಸಿ ಕುಟುಂಬದ ಆದಾಯವನ್ನು ಹೆಚ್ಚಿಸಿಕೊಳ್ಳುವಂತೆ ಪ್ರೋತ್ಸಾಹಿಸುವುದು ಕಾರ್ಯಕ್ರಮದ ಪ್ರಮುಖ ಉದ್ದೇಶವಾಗಿದೆ. ಈ ಮೂಲಕ ಗ್ರಾಮೀಣ ಪ್ರದೇಶದಲ್ಲಿಯೇ ಉದ್ಯೋಗಾವಕಾಶಗಳನ್ನು ಸೃಷ್ಟಿಸಿ ಕುಟುಂಬಗಳ ಜೀವನಮಟ್ಟ ಸುಧಾರಿಸಲು ಕ್ರಮ ಕೈಗೊಳ್ಳಲಾಗುತ್ತಿದೆ ಎಂದರು.
ಕಾರ್ಯಕ್ರಮದಲ್ಲಿ 15 ದುರ್ಬಲ ಕುಟುಂಬಗಳ ಸದಸ್ಯರು ಭಾಗವಹಿಸಿ ವಿವಿಧ ತರಬೇತಿ ಹಾಗೂ ಸ್ವಯಂ ಉದ್ಯೋಗ ಅವಕಾಶಗಳ ಕುರಿತು ಮಾಹಿತಿ ಪಡೆದುಕೊಂಡರು. ಸರ್ಕಾರದ ಯೋಜನೆಗಳ ಮೂಲಕ ತರಬೇತಿ ಮತ್ತು ನೆರವು ದೊರೆಯುತ್ತಿರುವುದಕ್ಕೆ ಫಲಾನುಭವಿಗಳು ಸಂತಸ ವ್ಯಕ್ತಪಡಿಸಿದರು.
ಈ ಸಂದರ್ಭದಲ್ಲಿ ಗ್ರಾಮ ಪಂಚಾಯಿತಿ ಮುಖಂಡ ರಮೇಶ್ ಕುಲಕರ್ಣಿ, ಕಾರ್ಯದರ್ಶಿ ಶ್ರೀದೇವಿ, ರಂಜಾನ್ ಬಿ., ದುರ್ಗಮ್ಮ, ವೇದಾವತಿ, ದೊಡ್ಡ ಬಸಮ್ಮ ಸೇರಿದಂತೆ ಗ್ರಾಮ ಪಂಚಾಯಿತಿ ಸಿಬ್ಬಂದಿ ಹಾಗೂ ಫಲಾನುಭವಿಗಳು ಉಪಸ್ಥಿತರಿದ್ದರು.

