ಸೆಪ್ಟೆಂಬರ್ 10 ರಂದು ಕೊಪ್ಪಳದಲ್ಲಿ ವಾಕ್ ಇನ್-ಇಂಟರ್‌ವ್ಯೂವ್

H.Mallikarjun
H.Mallikarjun - Kalyanasiri
1 Min Read

Walk-in interview in Koppal on September 10

ಸೆಪ್ಟೆಂಬರ್ 10 ರಂದು ಕೊಪ್ಪಳದಲ್ಲಿ ವಾಕ್ ಇನ್-ಇಂಟರ್‌ವ್ಯೂವ್

ಕೊಪ್ಪಳ ಸೆಪ್ಟೆಂಬರ್ 05, (ಕರ್ನಾಟಕ ವಾರ್ತೆ): ಜಿಲ್ಲಾ ಉದ್ಯೋಗ ವಿನಿಮಯ ಕೇಂದ್ರದ ವತಿಯಿಂದ ವಾಕ್ ಇನ್-ಇಂಟರ್‌ವ್ಯೂವನ್ನು ಸೆಪ್ಟೆಂಬರ್ 10 ರಂದು ಬೆಳಿಗ್ಗೆ 10 ರಿಂದ ಮಧ್ಯಾಹ್ನ 1.30 ಗಂಟೆಯವರೆಗೆ ಕೊಪ್ಪಳ ಜಿಲ್ಲಾಡಳಿತ ಭವನದ ಮೊದಲನೇ ಮಹಡಿಯಲ್ಲಿರುವ ಜಿಲ್ಲಾ ಉದ್ಯೋಗ ವಿನಿಮಯ ಕೇಂದ್ರದಲ್ಲಿ ಆಯೋಜಿಸಲಾಗಿದೆ.
ಎಸ್.ಎಸ್.ಎಲ್.ಸಿ, ಪಿ.ಯು.ಸಿ, ಐಟಿಐ, ಡಿಪ್ಲೋಮಾ ಹಾಗೂ ಯಾವುದೇ ಪದವಿ ಪಡೆದ ಅಭ್ಯರ್ಥಿಗಳು ಈ ವಾಕ್ ಇನ್ ಇಂಟರ್‌ವ್ಯೂವ್‌ನಲ್ಲಿ ಭಾಗವಹಿಸಬಹುದು. 18 ರಿಂದ 30 ವರ್ಷದೊಳಗಿನ ಅರ್ಹ ನಿರುದ್ಯೋಗಿ ಯುವಕ ಮತ್ತು ಯುವತಿಯರು ದೃಢೀಕರಿಸಲಾದ ತಮ್ಮ ವಿದ್ಯಾರ್ಹತೆಯ ಎಲ್ಲ ಪ್ರಮಾಣ ಪತ್ರಗಳ 3 ಪ್ರತಿಗಳೊಂದಿಗೆ ಮತ್ತು ಆಧಾರ ಕಾರ್ಡಿನ ಪ್ರತಿ, ಬಯೋಡಾಟಾ (ರೆಜ್ಯುಮ್) ಹಾಗೂ ಪಾಸ್ ಪೋರ್ಟ್ ಅಳತೆಯ 2 ಭಾವಚಿತ್ರಗಳೊಂದಿಗೆ ಈ ವಾಕ್ ಇನ್ ಇಂಟರ್‌ವ್ಯೂವ್‌ನಲ್ಲಿ ಭಾಗವಹಿಸಿ, ಉದ್ಯೋಗದ ನೆರವನ್ನು ಪಡೆಯಬಹುದಾಗಿದೆ.
ಹೆಚ್ಚಿನ ಮಾಹಿತಿಗಾಗಿ ಜಿಲ್ಲಾ ಉದ್ಯೋಗ ವಿನಿಮಯ ಕೇಂದ್ರ, ಜಿಲ್ಲಾ ಆಡಳಿತ ಭವನ, ಮೊದಲನೇ ಮಹಡಿ, ಕೊಪ್ಪಳ ಇವರನ್ನು ಸಂಪರ್ಕಿಸುವAತೆ ಜಿಲ್ಲಾ ಉದ್ಯೋಗ ವಿನಿಮಯ ಕೇಂದ್ರದ ಉದ್ಯೋಗಾಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ
Total Views: 0
ಜಾಹೀರಾತು
Share This Article