Applications invited for artist ID card
ಕಲಾವಿದರ ಗುರುತಿನ ಚೀಟಿಗಾಗಿ ಅರ್ಜಿ ಆಹ್ವಾನ
ಕೊಪ್ಪಳ ಸೆಪ್ಟೆಂಬರ್ 05, (ಕರ್ನಾಟಕ ವಾರ್ತೆ): ಕೊಪ್ಪಳ ಜಿಲ್ಲೆಯ ಅರ್ಹ ಕಲಾವಿದರಿಗೆ ‘ಕಲಾವಿದರ ದತ್ತಾಂಶ ಯೋಜನೆ’ಯಡಿ ಗುರುತಿನ ಚೀಟಿ ವಿತರಿಸಲು ಕನ್ನಡ ಮತ್ತು ಸಂಸ್ಕೃತಿ ಇಲಾಖೆಯಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ.
ಸಾಹಿತ್ಯ, ರಂಗಭೂಮಿ, ಜಾನಪದ, ಸಂಗೀತ, ನೃತ್ಯ, ಚಿತ್ರಕಲೆ ಹಾಗೂ ಇತ್ಯಾದಿ ಕಲಾ ಕ್ಷೇತ್ರಗಳಲ್ಲಿ ಸಕ್ರಿಯವಾಗಿ ತೊಡಗಿಸಿಕೊಂಡಿರುವ ಜಿಲ್ಲೆಯ ಅರ್ಹ ಕಲಾವಿದರು ನಿಗದಿತ ನಮೂನೆಯಲ್ಲಿ ಅಗತ್ಯ ದಾಖಲೆಗಳೊಂದಿಗೆ ಅರ್ಜಿ ಸಲ್ಲಿಸಬಹುದಾಗಿದೆ. ಅರ್ಜಿಗಳನ್ನು ಸಲ್ಲಿಸಲು ಸೆಪ್ಟೆಂಬರ್ 30 ಕೊನೆಯ ದಿನಾಂಕವಾಗಿರುತ್ತದೆ.
ಆಸಕ್ತ ಕಲಾವಿದರು ನಿಗದಿತ ಅವಧಿಯೊಳಗೆ ತಮ್ಮ ಅರ್ಜಿಗಳನ್ನು ಸಹಾಯಕ ನಿರ್ದೇಶಕರ ಕಚೇರಿ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ, ಕೊಪ್ಪಳ ಇಲ್ಲಿಗೆ ಸಲ್ಲಿಸಬೇಕು. ಹೆಚ್ಚಿನ ಮಾಹಿತಿಗಾಗಿ ಇಲಾಖೆಯನ್ನು ಸಂಪರ್ಕಿಸಬಹುದು ಎಂದು ಇಲಾಖೆಯ ಸಹಾಯಕ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
Total Views:
0
ಜಾಹೀರಾತು

