Former Maski MLA Pratap Gouda Patil participates in the Aradhana Mahotsava of the late Rudramuni Mahaswami of Kanakagiri (Suvarnagiri).

ಕನಕಗಿರಿ (ಸುವರ್ಣಗಿರಿ) ಲಿಂಗೈಕ್ಯ ರುದ್ರಮುನಿ ಮಹಾಸ್ವಾಮಿಗಳ ಆರಾಧನಾ ಮಹೋತ್ಸವದಲ್ಲಿ ಮಸ್ಕಿ ಮಾಜಿ ಶಾಸಕ ಪ್ರತಾಪ್ ಗೌಡ ಪಾಟೀಲ್ ಭಾಗಿ

ಕನಕಗಿರಿ: ಸುವರ್ಣಗಿರಿ ಸಂಸ್ಥಾನದ ಲಿಂಗೈಕ್ಯ ರುದ್ರಮುನಿ ಮಹಾಸ್ವಾಮಿಗಳವರ ಆರಾಧನಾ ಮಹೋತ್ಸವದಲ್ಲಿ ಮಸ್ಕಿ ವಿಧಾನಸಭಾ ಕ್ಷೇತ್ರದ ಮಾಜಿ ಶಾಸಕರಾದ ಪ್ರತಾಪ್ ಗೌಡ ಪಾಟೀಲ್ ಅವರು ಭಾಗವಹಿಸಿ, ಸುದ್ದಿಗಾರರೊಂದಿಗೆ ಮಾತನಾಡಿದರು.
ಈ ಸಂದರ್ಭದಲ್ಲಿ ಮಾತನಾಡಿದ ಅವರು, “ಯಾರೂ ಒಂದು ಧರ್ಮವನ್ನು ಎತ್ತಿ ಕಟ್ಟಿ ಇನ್ನೊಂದು ಧರ್ಮವನ್ನು ತುಳಿಯುವ ಮಾತನಾಡಬಾರದು. ನಮ್ಮ ಧರ್ಮವನ್ನು ಮೇಲೆತ್ತಿ ಇನ್ನೊಂದು ಧರ್ಮವನ್ನು ಕೀಳಾಗಿ ಕಾಣುವುದು ಸರಿಯಲ್ಲ. ಎಲ್ಲಾ ಧರ್ಮಗಳು ಶ್ರೇಷ್ಠವೇ. ಎಲ್ಲಾ ಧರ್ಮಗಳನ್ನು ಗೌರವಿಸುವುದೇ ನಮ್ಮ ಸಂಸ್ಕೃತಿ” ಎಂದು ಹೇಳಿದರು.
ಇಂದು ಧರ್ಮ ಧರ್ಮಗಳ ನಡುವೆ ಒಡಕು ಮೂಡಿಸುವ ಮಾತುಗಳು ಹೆಚ್ಚಾಗುತ್ತಿವೆ, ಆದರೆ ನಾವು ಎಲ್ಲಾ ಧರ್ಮಗಳನ್ನು ಸಮಾನವಾಗಿ ಕಾಣಬೇಕು ಎಂಬ ಸಂದೇಶವನ್ನು ಅವರು ನೀಡಿದರು.
ಕಾರ್ಯಕ್ರಮದಲ್ಲಿ ಸ್ಥಳೀಯ ಮುಖಂಡರು, ಭಕ್ತರು ಉಪಸ್ಥಿತರಿದ್ದರು.

