ಶ್ರೀ ಲಕ್ಷ್ಮಿಕಾಂತ್ ಹೇರೂರು ಅವರಿಗೆ ಆದರ್ಶ ಶಿಕ್ಷಕ ಪ್ರಶಸ್ತಿ

H.Mallikarjun
H.Mallikarjun - Kalyanasiri
1 Min Read

Ideal Teacher' Award for Sri Lakshmikant Heruru




ಶ್ರೀ ಲಕ್ಷ್ಮಿಕಾಂತ್ ಹೇರೂರು ಅವರಿಗೆ ಆದರ್ಶ ಶಿಕ್ಷಕ ಪ್ರಶಸ್ತಿ

ಜಾಹೀರಾತು

ಗಂಗಾವತಿ: ನಗರದ ಪ್ರತಿಷ್ಠಿತ ಶ್ರೀ ಕೊಟ್ಟೂರೇಶ್ವರ ವಿದ್ಯಾವರ್ಧಕ ಸಂಘದ ಶ್ರೀ ಕೊಟ್ಟೂರೇಶ್ವರ ಅನುದಾನಿತ ಕನ್ನಡ ಮಾಧ್ಯಮ ಪ್ರೌಢಶಾಲೆಯ ಶಿಕ್ಷಕರಾದ ಶ್ರೀ ಲಕ್ಷ್ಮಿಕಾಂತ್ ಹೇರೂರು ಅವರಿಗೆ ಆದರ್ಶ ಶಿಕ್ಷಕ ಪ್ರಶಸ್ತಿ ನೀಡಿ ಗೌರವಿಸಲಾಗಿದೆ.

ಬೆಂಗಳೂರಿನ ಶ್ರೀ ಕಾಶಿ ಶೇಷ ಶಾಸ್ತ್ರಿ ಚಾರಿಟೇಬಲ್ ಟ್ರಸ್ಟ್ ವತಿಯಿಂದ ಮೈಸೂರಿನ ಶ್ರೀರಾಮಕೃಷ್ಣ ಆಧ್ಯಾತ್ಮ ಮತ್ತು ನೈತಿಕ ಕೇಂದ್ರದಲ್ಲಿ ಸೆ.13, 2026ರ ಭಾನುವಾರ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ಪ್ರಶಸ್ತಿ ಪ್ರದಾನ ಮಾಡಲಾಯಿತು.
ರಾಜ್ಯದ ಒಂಬತ್ತು ಜನ ಅತ್ಯುತ್ತಮ ಸಾಧಕರಿಗೆ ಆದರ್ಶ ಶಿಕ್ಷಕ ಪ್ರಶಸ್ತಿ ನೀಡಿ ಗೌರವಿಸಲಾಗಿದ್ದು, ಪ್ರಶಸ್ತಿಯು ₹10,000 ನಗದು ಬಹುಮಾನ, ಪ್ರಮಾಣಪತ್ರ ಹಾಗೂ ಪುಸ್ತಕಗಳನ್ನು ಒಳಗೊಂಡಿದೆ.

ಕಾರ್ಯಕ್ರಮದ ದಿವ್ಯ ಸಾನಿಧ್ಯವನ್ನು ಶ್ರೀರಾಮಕೃಷ್ಣ ಆಶ್ರಮದ ಶ್ರೀ ಮಹಾಮೇಧಾನಂದ ಸ್ವಾಮೀಜಿ ವಹಿಸಿದ್ದರು. ಮುಖ್ಯ ಅತಿಥಿಗಳಾಗಿ ಭಾರತೀಯ ವಿದ್ಯಾ ಭವನದ ನಿರ್ದೇಶಕರಾದ ಶ್ರೀ ನಾಗಣ್ಣ ಹಾಗೂ ಶ್ರೀ ಕಾಶಿ ಶೇಷ ಶಾಸ್ತ್ರಿ ಚಾರಿಟೇಬಲ್ ಟ್ರಸ್ಟ್‌ನ ಅಧ್ಯಕ್ಷರಾದ ಶ್ರೀ ಸದಾನಂದ ಉಪಸ್ಥಿತರಿದ್ದರು.
ಕರ್ನಾಟಕ ರಾಜ್ಯದ ಎಸ್‌ಎಸ್‌ಎಲ್‌ಸಿ ಪರೀಕ್ಷೆಯಲ್ಲಿ ರಾಜ್ಯ, ಜಿಲ್ಲಾ ಹಾಗೂ ತಾಲೂಕು ಹಂತಗಳಲ್ಲಿ ಪ್ರಥಮ ಸ್ಥಾನ ಪಡೆದ ಪ್ರತಿಭಾವಂತ ವಿದ್ಯಾರ್ಥಿಗಳು ಮತ್ತು ಅವರ ಪಾಲಕರು, ಟ್ರಸ್ಟ್‌ನ ಸದಸ್ಯರು ಹಾಗೂ ಶ್ರೀರಾಮಕೃಷ್ಣ ಆಶ್ರಮದ ಸಿಬ್ಬಂದಿ ವರ್ಗದವರು ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು.
ಶ್ರೀ ಲಕ್ಷ್ಮಿಕಾಂತ್ ಹೇರೂರು ಅವರಿಗೆ ಆದರ್ಶ ಶಿಕ್ಷಕ ಪ್ರಶಸ್ತಿ ಲಭಿಸಿರುವುದಕ್ಕೆ ಶ್ರೀ ಕೊಟ್ಟೂರೇಶ್ವರ ವಿದ್ಯಾವರ್ಧಕ ಸಂಘದ ಅಧ್ಯಕ್ಷರು, ಕಾರ್ಯದರ್ಶಿಗಳು, ಆಡಳಿತ ಮಂಡಳಿಯ ಸದಸ್ಯರು, ಮುಖ್ಯೋಪಾಧ್ಯಾಯರು ಹಾಗೂ ಸಿಬ್ಬಂದಿ ವರ್ಗದವರು ಹರ್ಷ ವ್ಯಕ್ತಪಡಿಸಿ ಅಭಿನಂದನೆ ಸಲ್ಲಿಸಿದ್ದಾರೆ.

Total Views: 1
ಜಾಹೀರಾತು
Share This Article